ಅಪೇಕ್ಷೆಯಂತೆ ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರು: ಸಚಿವ ಜ್ಞಾನೇಂದ್ರ

Published : Mar 01, 2023, 07:34 AM IST
ಅಪೇಕ್ಷೆಯಂತೆ ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರು: ಸಚಿವ  ಜ್ಞಾನೇಂದ್ರ

ಸಾರಾಂಶ

ಗುಜರಾತಿನ ಅಹಮದಾಬಾದ್‌ನಲ್ಲಿ ಏಕೈಕ ರಕ್ಷಾ ವಿವಿ ಇದೆ. ಶಿವಮೊಗ್ಗದಲ್ಲಿ ಆರಂಭವಾಗುತ್ತಿರುವುದು ದೇಶದ 2ನೇ ವಿವಿ. ಈ ಸಂಸ್ಥೆಗಾಗಿ ಶಿವಮೊಗ್ಗದ ನವುಲೆಯಲ್ಲಿ 8 ಎಕರೆ ಜಮೀನು ಮಂಜೂರಾಗಿದೆ. ಶೀಘ್ರದಲ್ಲೇ ಕಟ್ಟಡ ಕಾಮಗಾರಿ ಆರಂಭವಾಗಲಿವೆ. ರಾಗಿಗುಡ್ಡದ ಸಮಾಜ ಕಲ್ಯಾಣ ಇಲಾಖೆ ಕಟ್ಟಡದಲ್ಲಿ ಈ ವರ್ಷ ತರಗತಿ ಪ್ರಾರಂಭವಾಗಲಿವೆ. 

ಶಿವಮೊಗ್ಗ(ಮಾ.01):  ರಾಷ್ಟ್ರೀಯ ಹಾಗೂ ಆಂತರಿಕ ಭದ್ರತೆಗೆ ಸಂಬಂಧಿಸಿದ ಶಿಕ್ಷಣ ನೀಡುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಶಿವಮೊಗ್ಗಕ್ಕೆ ಮಂಜೂರಾಗಿದೆ. ಈ ವರ್ಷದಿಂದಲೇ ತರಗತಿಗಳು ಆರಂಭವಾಗಲಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.  ಗುಜರಾತಿನ ಅಹಮದಾಬಾದ್‌ನಲ್ಲಿ ಏಕೈಕ ರಕ್ಷಾ ವಿವಿ ಇದೆ. ಶಿವಮೊಗ್ಗದಲ್ಲಿ ಆರಂಭವಾಗುತ್ತಿರುವುದು ದೇಶದ 2ನೇ ವಿವಿ. ಈ ಸಂಸ್ಥೆಗಾಗಿ ಶಿವಮೊಗ್ಗದ ನವುಲೆಯಲ್ಲಿ 8 ಎಕರೆ ಜಮೀನು ಮಂಜೂರಾಗಿದೆ. ಶೀಘ್ರದಲ್ಲೇ ಕಟ್ಟಡ ಕಾಮಗಾರಿ ಆರಂಭವಾಗಲಿವೆ. ರಾಗಿಗುಡ್ಡದ ಸಮಾಜ ಕಲ್ಯಾಣ ಇಲಾಖೆ ಕಟ್ಟಡದಲ್ಲಿ ಈ ವರ್ಷ ತರಗತಿ ಪ್ರಾರಂಭವಾಗಲಿವೆ ಎಂದಿದ್ದಾರೆ.

ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ತರಗತಿಗಳು ಆರಂಭವಾಗಲಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

1ನೇ ಕ್ಲಾಸ್‌ ಪ್ರವೇಶಕ್ಕೆ 6 ವರ್ಷ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದೇಶದಲ್ಲೆ ಇದು 2ನೇ ವಿಶ್ವವಿದ್ಯಾಲಯವಾಗಿದೆ. ಸದ್ಯ ಅಹಮದಾಬಾದ್‌ನಲ್ಲಿ ಮಾತ್ರ ಈ ವಿಶ್ವವಿದ್ಯಾಲಯವಿದೆ. ಅಪೇಕ್ಷೆಯಂತೆ ಕರ್ನಾಟಕಕ್ಕೆ ವಿವಿಯನ್ನು ಮಂಜೂರು ಮಾಡಿದ್ದಾರೆ. ಈ ವಿವಿಯನ್ನು ಶಿವಮೊಗ್ಗಕ್ಕೆ ತರುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕಾಗಿ ಶಿವಮೊಗ್ಗ ನಗರದ ನವುಲೆಯಲ್ಲಿ 8 ಎಕರೆ ಭೂಮಿ ಮಂಜೂರಾಗಿದ್ದು, ಶೀಘ್ರದಲ್ಲೆ ಕಟ್ಟಡ ಕಾಮಗಾರಿಗಳು ಪ್ರಾರಂಭವಾಗಲಿವೆ. ಸದ್ಯ ತಾತ್ಕಾಲಿಕವಾಗಿ ರಾಗಿಗುಡ್ಡದಲ್ಲಿನ ಸಮಾಜ ಕಲ್ಯಾಣ ಇಲಾಖೆ ಕಟ್ಟಡದಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ತರಗತಿಗಳು ಪ್ರಾರಂಭವಾಗಲಿವೆ ಎಂದು ಮಾಹಿತಿ ನೀಡಿದರು. ಈ ವಿವಿಯಲ್ಲಿ ಭದ್ರತಾ ವಿಷಯಕ್ಕೆ ಸಂಬಂಧಿಸಿದ ಕೋರ್ಸುಗಳು, ಡಿಪ್ಲೊಮಾ, ಪದವಿ ತರಗತಿಗಳ ಶಿಕ್ಷಣ ನೀಡಲಾಗುವುದು ಎಂದರು.

PREV
Read more Articles on
click me!

Recommended Stories

ಗದ್ದೆ ಅಂಚಲ್ಲಿ uniform ಹಾಕ್ಕೊಂಡು ಎಣ್ಣೆ ಹೊಡೀತಾ ಇರೋ ಹೈಸ್ಕೂಲ್ ಹುಡ್ಗೀರು, parents shock! ವಿಡಿಯೋ ವೈರಲ್
15ನೇ ವಯಸ್ಸಿಗೆ ಹೈನುಗಾರಿಕೆ ಆರಂಭಿಸಿದ ಹುಡುಗ :18 ವರ್ಷದ ಯುವಕನ ತಿಂಗಳ ಆದಾಯ ಈಗ 6 ಲಕ್ಷ