ಕನ್ನಡಿಗರ ಜೊತೆ ಮಹಾರಾಷ್ಟ್ರದ ಸರ್ಕಾರ ಚಲ್ಲಾಟವಾಡುತ್ತಿದೆ. ಅದಕ್ಕಾಗಿ ನಾವು ಅತೀ ಶೀಘ್ರದಲ್ಲಿ ಕರ್ನಾಟಕ ಸೇರುವ ಬಗ್ಗೆ ಗ್ರಾಪಂನಲ್ಲಿ ಠರಾವು ಬರೆದು ಕರ್ನಾಟಕ-ಮಹಾರಾಷ್ಟ್ರ ಸರ್ಕಾರಕ್ಕೆ ಕಳುಹಿಸುತ್ತೇವೆ ಎಂದು ತಿಳಿಸಿದ ಸಿಂಧೂರು ಗ್ರಾಮದ ಜನರು
ಅಥಣಿ(ಡಿ.03): ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಸಿಂಧೂರು ಗ್ರಾಮದಲ್ಲಿ 1 ರಿಂದ 7ನೇ ತರಗತಿವರೆಗೂ ಒಂದೇ ಕನ್ನಡ ಶಾಲೆ ಇದೆ. ಈ ಶಾಲೆಗೆ ಓರ್ವ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ. ಹೀಗಾಗಿ ಅಲ್ಲಿಯ ಮಕ್ಕಳು ಕರ್ನಾಟಕದ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮಕ್ಕೆ ಕಲಿಯಲು ಹೋಗುತ್ತಿದ್ದಾರೆ. ಈ ಕಾರಣಕ್ಕಾಗಿ ಕನ್ನಡಿಗರ ಜೊತೆ ಮಹಾರಾಷ್ಟ್ರದ ಸರ್ಕಾರ ಚಲ್ಲಾಟವಾಡುತ್ತಿದೆ. ಅದಕ್ಕಾಗಿ ನಾವು ಅತೀ ಶೀಘ್ರದಲ್ಲಿ ಕರ್ನಾಟಕ ಸೇರುವ ಬಗ್ಗೆ ಗ್ರಾಪಂನಲ್ಲಿ ಠರಾವು ಬರೆದು ಕರ್ನಾಟಕ-ಮಹಾರಾಷ್ಟ್ರ ಸರ್ಕಾರಕ್ಕೆ ಕಳುಹಿಸುತ್ತೇವೆ ಎಂದು ಸಿಂಧೂರು ಜನರು ತಿಳಿಸಿದ್ದಾರೆ.
ಈ ಬಗ್ಗೆ ಗ್ರಾಮ ಹಿರಿಯರಾದ ಬಸವರಾಜ ಪಾಟೀಲ ಕನ್ನಡಪ್ರಭದೊಂದಿಗೆ ಮಾತನಾಡಿ, ಕರ್ನಾಟಕದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಕ್ಷಣ ನಮ್ಮ ಗ್ರಾಮಗಳಿಗೆ ಭೇಟಿ ನೀಡಲಿ. ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ಜನರಿಗೆ ಆಗುತ್ತಿರುವ ಅನ್ಯಾಯವನ್ನು ಅಧ್ಯಯನ ಮಾಡಲಿ. ಸಮಸೆÜ್ಯ ಬಗೆಹರಿಸಲಿ ಎಂದು ಆಗ್ರಹಿಸಿದ್ದಾರೆ. ಜತ್ತ ಗ್ರಾಮಸ್ಥ ರಾಜು ಹಿಪ್ಪರಗಿ ಮಾತನಾಡಿ, ಗಡಿ ವಿವಾದ ನ್ಯಾಯಾಲಯದಲ್ಲಿದೆ. ಎರಡು ರಾಜ್ಯಗಳು ತಮ್ಮ ತಮ್ಮ ವಿಧಾನಸಭೆಯಲ್ಲಿ ನಿರ್ಣಯ ಪಾಸ್ ಮಾಡಿ ಗಡಿ ವಿವಾದ ನ್ಯಾಯಾಲಯದಲ್ಲಿ ಇರುವುದರಿಂದ ಮಹಾಜನ ಆಯೋಗದ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳನ್ನು ಸೇರಿಸಿ ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಕನ್ನಡ ಬಾವುಟ ಸಂಘರ್ಷ: ಒಬ್ಬ ಸೆರೆ, ಮೂವರು ವಶ
ಜತ್ತಗೆ ನೀರು ಬಿಟ್ಟ ಕರ್ನಾಟಕ ಸರ್ಕಾರ:
ಜತ್ತ ತಾಲೂಕಿನ ಸಂಕ ಮತ್ತು ತಿಕ್ಕುಂಡಿ ಗ್ರಾಮಕ್ಕೆ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಿಂದ ಕಳೆದ ಎರಡು ದಿನಗಳಿಂದ ನೀರು ಬಿಟ್ಟಿದ್ದಾರೆ. ಇದರಿಂದ ಅಲ್ಲಿನ ಜನರಿಗೆ ಸಾಕಷ್ಟು ಅನುಕೂಲವಾಗಿದೆ.