ಶಿಕ್ಷಕರಿಗೆ ಸಿಹಿ ಸುದ್ದಿ: ಸಿಎಂಗೆ ಪ್ರಸ್ತಾವನೆ ಸಲ್ಲಿಸಿ ಚರ್ಚಿಸಲಾಗುವುದು ಎಂದ ಸುರೇಶ್ ಕುಮಾರ್

By Suvarna NewsFirst Published Dec 14, 2020, 10:27 PM IST
Highlights

ಅನುದಾನಿತ ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಹತ್ವದ ಭರವಸೆ ಕೊಟ್ಟಿದ್ದಾರೆ.

ಬೆಂಗಳೂರು, (ಡಿ.14): ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಇರುವಂತೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವ ಕುರಿತಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿ ಚರ್ಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂ (ರಿ), ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ನೌಕರರ ಹಾಗೂ ಆಡಳಿತ ಮಂಡಳಿಗಳ ಹೋರಾಟ ಸಮನ್ವಯ ಸಮಿತಿ ಹಾಗೂ ರಾಜ್ಯದ ವಿವಿಧ ಸಂಟನೆಗಳ ಆಶ್ರಯದಲ್ಲಿ ಧಾರವಾಡದಲ್ಲಿ ನಡೆಯುತ್ತಿರುವ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಬಸವರಾಜ ಎಸ್. ಹೊರಟ್ಟಿ ಮತ್ತು ಸಂಟಘನೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು.

ವರ್ಷದಿಂದ ಕೋಮಾದಲ್ಲಿರುವ ಶಿಕ್ಷಕ: ಕುಟುಂಬಕ್ಕೆ ನೆರವಾದ ಸಚಿವ ಸುರೇಶ್ ಕುಮಾರ್

ಬಳಿಕ ಮಾತನಾಡಿದ ಅವರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸರ್ಕಾರಿ ನೌಕರರಿಗಿರುವ ಸೌಲಭ್ಯಗಳನ್ನು ನೀಡುವಲ್ಲಿ ಸರ್ಕಾರ ಮುಕ್ತ ಮನಸ್ಸು ಹೊಂದಿದ್ದು, ಈ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಸೂಕ್ತ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದರು.

ಬಸವರಾಜ ಹೊರಟ್ಟಿಯವರ ನೇತೃತ್ವದ ಸಮಿತಿ ಸಲ್ಲಿಸಿರುವ ಕಾಲ್ಪನಿಕ ವೇತನ ಅನುಷ್ಠಾನದಿಂದಾಗುವ ಆರ್ಥಿಕ ಪರಿಣಾಮಗಳನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿ ವಿವರವಾದ ವರದಿ ತಯಾರಿಸಿ ಸಂಪುಟದ ಮುಂದಿಡಲಾಗುವುದು. ಈ ಕುರಿತಂತೆ ವರದಿಯನ್ನು ಕಡತದಲ್ಲಿ ಮಂಡಿಸುವಂತೆ ಸಚಿವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. 

ಬಾಕಿ ವೇತನದ ಹೊರೆಯಿಲ್ಲದೇ ಮತ್ತು ಸರ್ಕಾರದ ಬೊಕ್ಕಸಕ್ಕೆ ಅನಾವಶ್ಯಕ ಹೊರೆಯಾಗದಂತೆ ಎಲ್ಲ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸೌಲಭ್ಯವನ್ನು ಒದಗಿಸಲು ಸಿಎಂ ಜೊತೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದು ಅವರು ವಿವರಿಸಿದರು.

click me!