2nd PUC Time Table: ಮಾ.10ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ತಾತ್ಕಾಲಿಕ ವೇಳಾಪಟ್ಟಿ

Published : Oct 22, 2022, 08:26 AM IST
2nd PUC Time Table: ಮಾ.10ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ತಾತ್ಕಾಲಿಕ ವೇಳಾಪಟ್ಟಿ

ಸಾರಾಂಶ

2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಪ್ರಕಟವಾಗಿದ್ದು, ಮಾ.10 ರಿಂದ 29 ರವರೆಗೂ ಪರೀಕ್ಷೆ ನಡೆಯಲಿವೆ.

ಬೆಂಗಳೂರು (ಅ.22): 2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮಾ.10 ರಿಂದ 29 ರವರೆಗೂ ಪರೀಕ್ಷೆ ನಡೆಯಲಿವೆ. ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೂ ಎಲ್ಲ ಪರೀಕ್ಷೆಗಳು ನಡೆಯಲಿವೆ. ವೇಳಾಪಟ್ಟಿಬಗ್ಗೆ ಆಕ್ಷೇಪಣೆಗಳಿದ್ದರೆ ವಿದ್ಯಾರ್ಥಿಗಳು ಹಾಗೂ ಪೋಷಕರು ನ.21ರೊಳಗೆ ಸಲ್ಲಿಸಬೇಕು. ಆಕ್ಷೇಪಣೆಗಳನ್ನು jdexam.dpue@gmail.com ಮೇಲ್‌ಗೆ ಮಾತ್ರ ಸಲ್ಲಿಸಬಹುದು. 

ಮಾ.10 ಕನ್ನಡ, ಅರೇಬಿಕ್‌, 11ಕ್ಕೆ ಗಣಿತ, ಶಿಕ್ಷಣ, 13ಕ್ಕೆ ಅರ್ಥಶಾಸ್ತ್ರ, 14ಕ್ಕೆ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ. 15ಕ್ಕೆ ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌. 16ಕ್ಕೆ ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ. 17ಕ್ಕೆ ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಹೆಲ್ತ್‌ಕೇರ್‌, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌. 18ಕ್ಕೆ ಭೂಗೋಳಶಾಸ್ತ್ರ, ಜೀವಶಾಸ್ತ್ರ. 20ಕ್ಕೆ ಇತಿಹಾಸ, ಭೌತಶಾಸ್ತ್ರ. 21ಕ್ಕೆ ಹಿಂದಿ. 23 ಕ್ಕೆ ಇಂಗ್ಲಿಷ್‌. 25ಕ್ಕೆ ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ. 27ಕ್ಕೆ ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ಹಾಗೂ ಮಾ.29 ರಂದು ಸಮಾಜ ಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಕಂಪ್ಯೂಟರ್‌ ಸೈನ್ಸ್‌ ವಿಷಯಕ್ಕೆ ಪರೀಕ್ಷೆ ನಡೆಯಲಿದೆ.

New Education Policy: ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷಾ ಮಂಡಳಿ ವಿಲೀನ

ಶೀಘ್ರವೇ 3500 ಪಿಯು ಅತಿಥಿ ಉಪನ್ಯಾಸಕರ ನೇಮಕ: ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಪ್ರತಿಯಾಗಿ ಪ್ರಸಕ್ತ ಸಾಲಿನಲ್ಲೂ 3500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಹಾಗೂ ಆ ಬೋಧಕರ ಸಂಭಾವನೆಯನ್ನು 9 ಸಾವಿರ ರು.ನಿಂದ 15 ಸಾವಿರ ರು.ಗೆ ಹೆಚ್ಚಿಸುವಂತೆ ಕೋರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

‘ಪಿಯು ಇಲಾಖೆ ನಿರ್ದೇಶಕರಾದ ಆರ್‌.ರಾಮಚಂದ್ರನ್‌ 2022-23ನೇ ಸಾಲಿನಲ್ಲಿ ಸರ್ಕಾರಿ ಪಿಯು ಕಾಲೇಜುಗಳಿಗೆ 3500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಹಾಗೂ ಅವರ ಗೌರವ ಧನವನ್ನು 15 ಸಾವಿರ ರು.ಗಳಿಗೆ ಹೆಚ್ಚಿಸಬೇಕೆಂದು ಕೋರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಪ್ರಸ್ತಾವನೆಯನ್ನು ಇಲಾಖೆಯು ಆರ್ಥಿಕ ಇಲಾಖೆಗೆ ರವಾನಿಸಿದ್ದು, ಪ್ರಸ್ತುತ ಚರ್ಚೆಯ ಹಂತದಲ್ಲಿದೆ. ಇನ್ನೊಂದು ವಾರದಲ್ಲಿ ಇದಕ್ಕೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎನ್ನುತ್ತವೆ’ ಇಲಾಖೆಯ ಉನ್ನತ ಮೂಲಗಳು.

PUC Supplementary Exam Results: ಪಿಯು ಪೂರಕ ಪರೀಕ್ಷೆಯಲ್ಲಿ 37.08% ವಿದ್ಯಾರ್ಥಿಗಳು ಪಾಸ್‌

ಗೌರವ ಧನ ಹೆಚ್ಚಳ ಖಚಿತ: ರಾಜ್ಯದ 1220ಕ್ಕೂ ಹೆಚ್ಚು ಸರ್ಕಾರಿ ಪಿಯು ಕಾಲೇಜುಗಳಲ್ಲಿ ಸುಮಾರು 3000 ಕಾಯಂ ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿಲ್ಲ. ಬದಲಿಗೆ ಕಳೆದ ವರ್ಷ 3552 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿತ್ತು. ಈ ಉಪನ್ಯಾಸಕರ ಗೌರವಧವನ್ನು ಕನಿಷ್ಠ 12 ಸಾವಿರ ರು.ಗಳಿಗೆ ಹೆಚ್ಚಿಸುವಂತೆ ಹಿಂದೆಯೂ ಪಿಯು ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಸರ್ಕಾರ ಕೋವಿಡ್‌ ಆರ್ಥಿಕ ಸಂಕಷ್ಟದ ಕಾರಣದಿಂದ ಒಪ್ಪಿರಲಿಲ್ಲ. ಈ ವರ್ಷ ಗೌರವಧನ ಹೆಚ್ಚಳವಾಗುವುದು ಬಹುತೇಕ ಖಚಿತ. ಆದರೆ ಎಷ್ಟುಪ್ರಮಾಣದಲ್ಲಿ ಹೆಚ್ಚಳವಾಗಲಿದೆ ಎಂಬುದು ಕಾದುನೋಡಬೇಕಾಗಿದೆ ಎನ್ನುತ್ತವೆ ಇಲಾಖೆ ಮೂಲಗಳು.

PREV
Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ