Breaking: ನಾಳೆಯೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಫಲಿತಾಂಶ ನೋಡುವುದು ಹೇಗೆ?

By Suvarna News  |  First Published Apr 9, 2024, 5:14 PM IST

ವಿದ್ಯಾರ್ಥಿಗಳೇ ಹಾಗೂ ಪೋಷಕರೇ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಏಪ್ರಿಲ್ 10 ರಂದು ಬಿಡುಗಡೆಯಾಗಲಿದೆ. ಯುಗಾದಿ ಹಬ್ಬದ ಮರುದಿನವೇ ವಿದ್ಯಾರ್ಥಿಗಳಿಗೆ ಈ ಖುಷಿಯ ವಿಚಾರವನ್ನು ಶಿಕ್ಷಣ ಇಲಾಖೆ ಹಂಚಿಕೊಂಡಿದೆ.


ಬೆಂಗಳೂರು (ಏ.9): ವಿದ್ಯಾರ್ಥಿಗಳೇ ಹಾಗೂ ಪೋಷಕರೇ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಏಪ್ರಿಲ್ 10 ರಂದು ಬಿಡುಗಡೆಯಾಗಲಿದೆ. ಯುಗಾದಿ ಹಬ್ಬದ ಮರುದಿನವೇ ವಿದ್ಯಾರ್ಥಿಗಳಿಗೆ ಈ ಖುಷಿಯ ವಿಚಾರವನ್ನು ಶಿಕ್ಷಣ ಇಲಾಖೆ ಹಂಚಿಕೊಂಡಿದೆ. ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ  ಮಂಡಳಿಯಲ್ಲಿ ಸುದ್ದಿಗೋಷ್ಠಿ  ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಲ್ಲೇಶ್ವರಂ ನಲ್ಲಿರುವ ಪರೀಕ್ಷಾ ಮಂಡಳಿ ಈ ಬಗ್ಗೆ ಸ್ಪಷ್ಟನೆ ನೀಡಿದೆ. https://karesults.nic.in ವೆಬ್ ಸೈಟ್ ನಲ್ಲಿ 11 ಗಂಟೆ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು ತಿಳಿಸಿದೆ.

ಕೋಟಿ ಕೋಟಿ ಎಣಿಸಿ, ಬೀದಿಗೆ ಬಿದ್ದ ಭಾರತೀಯ ಉದ್ಯಮಿಗಳಿವರು, ಲಕ್ ಯಾವಾಗ ಕೈ ಕೊಡುತ್ತೋ ಯಾರಿಗ್ಗೊತ್ತು?

Tap to resize

Latest Videos

undefined

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ 1 ಅನ್ನು ಮಾರ್ಚ್ 01 ರಿಂದ 22 ರವರೆಗೆ ನಡೆಸಿತ್ತು.ರಾಜ್ಯದಾದ್ಯಂತ  1,124 ಕೇಂದ್ರಗಳಲ್ಲಿ ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು.  ಈ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ವಿದ್ಯಾರ್ಥಿಗಳು ಬಯಸಿದರೆ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು. ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮೊದಲೇ ಮೂರು ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಬೇಕಿದೆ.

 

click me!