ರಾಜ್ಯದ ಎಲ್ಲ ಐಎಎಸ್, ಕೆಎಎಸ್ ಕೋಚಿಂಗ್ ಸೆಂಟರ್‌ಗಳಿಗೆ ಶಿಕ್ಷಣ ಇಲಾಖೆ ನೋಂದಣಿ ಕಡ್ಡಾಯ!

By Sathish Kumar KH  |  First Published Jan 18, 2024, 1:47 PM IST

ರಾಜ್ಯದಲ್ಲಿರುವ ಎಲ್ಲ ಐಎಎಸ್ ಹಾಗೂ ಕೆಎಎಸ್‌ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳು ಕಡ್ಡಾಯವಾಗಿ ಮುಂದಿನ 15 ದಿನದೊಳಗೆ ಶಿಕ್ಷಣ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. 


ಬೆಂಗಳೂರು (ಜ.18): ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸುರು, ವಿಜಯಪುರ, ದಾವಣಗೆರೆ, ಬಳ್ಳಾರಿ ಸೇರಿದಂತೆ ರಾಜ್ಯಾದ್ಯಂತ ಎಲ್ಲೆಡೆ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ಆಡಳಿತ ಸೇವೆ (ಐಎಎಸ್‌) ಹಾಗೂ ಕರ್ನಾಟಕ ಆಡಳಿತ ಸೇವೆ (ಕೆಎಎಸ್‌) ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರಗಳು ಕಡ್ಡಾಯವಾಗಿ ಮುಂದಿನ 15 ದಿನದೊಳಗೆ ಸರ್ಕಾರಕ್ಕೆ ನೋಂದಣಿ ಮಾಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಶಿಕ್ಷಣ ಇಲಾಖೆಯಿಂದ ಇಂತಹ ತರಬೇತಿ ಕೇಂದ್ರಗಳನ್ನು ರದ್ದುಗೊಳಿಸಲಾಗುವುದು ಎಂದು ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಐಎಎಸ್ , ಕೆಎಎಸ್ ಕೋಚಿಂಗ್ ಸೆಂಟರ್‌ಗಳು ಕಡ್ಡಾಯವಾಗಿ ಸರ್ಕಾರಕ್ಕೆ ನೋಂದಣಿ ಮಾಡಿಸಿಕೊಳ್ಳಬೇಕು. ಪ್ರಸ್ತುತ ರಾಜ್ಯದಲ್ಲಿ ನೂರಾರು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳು, ಸೊಸೈಟಿಗಳು, ಟ್ರಸ್ಟ್‌ಗಳು ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಐಎಎಸ್‌, ಐಪಿಎಸ್‌, ಐಎಫ್‌ ಎಸ್‌, ಕೆಎಎಸ್‌, ಭಾಷಾ ಕೋಚಿಂಗ್‌ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್‌ ನೀಡುವ ಸಂಸ್ಥೆಗಳು ನಾಯಿ ಕೊಡೆಗಳಂತೆ ತಲೆ ಎತ್ತುತ್ತಿವೆ.

Tap to resize

Latest Videos

undefined

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ!

ಇನ್ನು ಎಲ್ಲ ಕೋಚಿಂಗ್ ಸೆಂಟರ್‌ಗಳು ಕೂಡ ಕಾಲೇಜು ಶಿಕ್ಷಣ ಇಲಾಖೆಗೆ 25 ಸಾವಿರ ರೂ.ಶುಲ್ಕ ಕಟ್ಟಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಬಗ್ಗೆ ಶಿಕ್ಷಣ ಇಲಾಖೆಯು ಆಯುಕ್ತರು ಕಾಲೇಜು ಶಿಕ್ಷಣ ಇಲಾಖೆಯಲ್ಲಿ (Karnataka college education department) ನೋಂದಾಯಿಸಿಕೊಳ್ಳುವುದಕ್ಕೆ ಸುತ್ತೋಲೆ ಹೊರಡಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಇನ್ನುಮುಂದೆ ಕೋಚಿಂಗ್‌ ಸೆಂಟರ್ಗಳ ನೋಂದಣಿ ಕಡ್ಡಾಯವಾಗಿರುತ್ತದೆ. ಸರ್ಕಾರದಿಂದ ಅನುಮತಿ ನೀಡದರಷ್ಟೇ ಕೋಚಿಂಗ್ ಸೆಂಟರ್ ಆರಂಭಿಸಬಹುದು. 

ಶೇ.25ರಷ್ಟು 14-18 ವಯಸ್ಸಿನ ಗ್ರಾಮೀಣ ಮಕ್ಕಳಿಗೆ 2ನೇ ತರಗತಿ ಪಾಠ ಕೂಡಾ ಸರಿಯಾಗಿ ಓದೋಕೆ ಬರೋಲ್ಲ: ವರದಿ

ಎಲ್ಲ ಕೋಚಿಂಗ್ ಸೆಂಟರ್‌ಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತೇವೆ ಎಂದು ಅಭ್ಯರ್ಥಿಗಳಿಂದ ಹಣ ಪಡೆಯುತ್ತಿವೆ. ಹೀಗಾಗಿ ಕೋಚಿಂಗ್‌ ಸೆಂಟರ್‌ಗಳು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಎಲ್ಲ ಕೋಚಿಂಗ್ ಸಂಸ್ಥೆಗಳು 15 ದಿನಗಳ ಒಳಗೆ 25,000 ರೂ. ಶುಲ್ಕ ಪಾವತಿಸಿ ನೋಂದಾಯಿಸಿಕೊಳ್ಳಬೇಕು. ವಿಫಲವಾದರೆ ಕರ್ನಾಟಕ ಶಿಕ್ಷಣ ಕಾಯಿದೆಯ ಅಡಿಯಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಜಗದೀಶ್ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಂದ ಮಾಹಿತಿ ನೀಡಿದ್ದಾರೆ.

click me!