ರಾಜ್ಯದಲ್ಲಿ ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಆದೇಶ

By Gowthami K  |  First Published Oct 31, 2022, 8:42 PM IST

ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಹೊಸ ಸರಕಾರಿ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಲಾಗಿದೆ.


ಬೆಂಗಳೂರು (ಅ.31): ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಹೊಸ ಸರಕಾರಿ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಲಾಗಿದೆ. ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಮುದ್ದೇಬಿಹಾಳ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿಗಳಿಗೆ ಹೊಸ ಪದವಿ ಪೂರ್ವ ಕಾಲೇಜುಗಳ ಘೋಷಣೆಯಾಗಿದೆ. ನೂತನ ಸರಕಾರಿ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ಅಗತ್ಯವಿರುವ ಮೂಲಭೂತ ಸೌಲಭ್ಯಗಳ ವಿವರದೊಂದಿಗೆ ತಗಲುವ ಆವರ್ತಕ ಮತ್ತು ಅನಾವರ್ತಕ ವೆಚ್ಚದ ಕ್ರೋಢಿಕೃತ ವಿವರಗಳನ್ನು ಕೂಡಲೇ ಸರಕಾರಕ್ಕೆ ಸಲ್ಲಿಸಲು ತಮ್ಮನ್ನು ಕೋರಲು ನಿರ್ದೇಶಿತಳಾಗಿದ್ದೇನೆ ಎಂದು ಸರಕಾರದ ಅಧೀನ ಕಾರ್ಯದರ್ಶಿ ಪದ್ಮಿನಿ ಎಸ್‌.ಎನ್‌. ತಮ್ಮ ಅಧಿಸೂಚನೆ ಹೊರಡಿಸಿದ್ದಾರೆ.

ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಮಂಜೂರು ಮಾಡಲಾದ ಸ್ಥಳ ವಿವರಣೆ ಇಂತಿದೆ.
1.ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವತ್ಕಲ್, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ.
2. ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಣಸಗಿ, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ. 
3.ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಸಲಾಪುರ, ಕನಕಗಿರಿ ತಾಲ್ಲೂಕು, ಕೊಪ್ಪಳ ಜಿಲ್ಲೆ,
4. ಸರ್ಕಾರಿ ಪದವಿ ಪೂರ್ವ ಕಾಲೇಜು, ಚಿಕ್ಕಡಂಕನಕಲ್ಲು, ಕನಕಗಿರಿ ತಾಲ್ಲೂಕು, ಕೊಪ್ಪಳ ಜಿಲ್ಲೆ.
5. ಸರ್ಕಾರಿ ಪದವಿ ಪೂರ್ವ ಕಾಲೇಜು, ಕವಲೂರು, ಕೊಪ್ಪಳ ತಾಲ್ಲೂಕು, ಕೊಪ್ಪಳ ಜಿಲ್ಲೆ,
6.ಸರ್ಕಾರಿ ಪದವಿ ಪೂರ್ವ ಕಾಲೇಜು, ಪಗಡದಿನ್ನಿ, ಸಿಂದನೂರು ತಾಲ್ಲೂಕು, ರಾಯಚೂರು ಜಿಲ್ಲೆ
7. ಸರ್ಕಾರಿ ಪದವಿ ಪೂರ್ವ ಕಾಲೇಜು, ಶಾನವಾಸಪುರ, ಸಿರಗುಪ್ಪ ತಾಲ್ಲೂಕು, ಬಳ್ಳಾರಿ ಜಿಲ್ಲೆ. 
8.ಸರ್ಕಾರಿ ಪದವಿ ಪೂರ್ವ ಕಾಲೇಜು, ಪೀರಾಪುರ, ದೇವರಹಿಪ್ಪರಗಿ-ಮುದ್ದೇಬಿಹಾಳ ತಾಲ್ಲೂಕು,
9.ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವರಹಿಪ್ಪರಗಿ, ದೇವರಹಿಪ್ಪರಗಿ ತಾಲ್ಲೂಕು, ವಿಜಯಪುರ ಜಿಲ್ಲೆ
10.ಸರ್ಕಾರಿ ಪದವಿ ಪೂರ್ವ ಕಾಲೇಜು, ಇಲಕಲ್, ಹುನಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ. 
11.ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಗಳಖೋಡ, ಮುಧೋಳ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
12.ಸರ್ಕಾರಿ ಪದವಿ ಪೂರ್ವ ಕಾಲೇಜು, ಮಿರ್ಜಿ, ಮುಧೋಳ ತಾಲ್ಲೂಕು, ಬಾಗಲಕೋಟೆ ಜಿಲ್ಲೆ. 
13. ಸರ್ಕಾರಿ ಪದವಿ ಪೂರ್ವ ಕಾಲೇಜು, ಢವಳೇಶ್ವರ, ರಬಕವಿ-ಬನಹಟ್ಟಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ
14.ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಲ್ಲಹಳ್ಳಿ, ರಬಕವಿ-ಬನಹಟ್ಟಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ, 
15.ಸರ್ಕಾರಿ ಪದವಿ ಪೂರ್ವ ಕಾಲೇಜು, ಶಿರಗೂರ, ರಾಯಭಾಗ-ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ

Tap to resize

Latest Videos

ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕ: ಸಚಿವ ನಾಗೇಶ್‌

16.ಸರ್ಕಾರಿ ಪದವಿ ಪೂರ್ವ ಕಾಲೇಜು, ಅಳಗವಾಡಿ, ರಾಯಭಾಗ- ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ.
17. ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂವಸುದ್ದಿ, ರಾಯಭಾಗ- ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ.
18.ಸರ್ಕಾರಿ ಪದವಿ ಪೂರ್ವ ಕಾಲೇಜು, ಹಾರೋಗೇರಿ ಪಟ್ಟಣ, ರಾಯಭಾಗ- ಕುಡಚಿ ತಾಲ್ಲೂಕು ಬೆಳಗಾವಿ ಜಿಲ್ಲೆ.
19. ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಗಳಖೋಡ ಪಟ್ಟಣ, ರಾಯಭಾಗ- ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ.
20.ಸರ್ಕಾರಿ ಪದವಿ ಪೂರ್ವ ಕಾಲೇಜು, ಚುಂಚನೂರು, ರಾಮದುರ್ಗ ತಾಲ್ಲೂಕು, ಬೆಳಗಾವಿ ಜಿಲ್ಲೆ. 
21.ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆ.ಚಂದರಗಿ, ರಾಮದುರ್ಗ ತಾಲ್ಲೂಕು, ಬೆಳಗಾವಿ ಜಿಲ್ಲೆ,
22.ಸರ್ಕಾರಿ ಪದವಿ ಪೂರ್ವ ಕಾಲೇಜು, ತುರಕರ ಶೀಗಿಹಳ್ಳಿ, ಕಿತ್ತೂರು ತಾಲ್ಲೂಕು, ಬೆಳಗಾವಿ ಜಿಲ್ಲೆ. 
23.ಸರ್ಕಾರಿ ಪದವಿ ಪೂರ್ವ ಕಾಲೇಜು, ಎಂ.ಕೆ.ಹುಬ್ಬಳ್ಳಿ ಪಟ್ಟಣ ಪಂ. ಕಿತ್ತೂರು ತಾಲ್ಲೂಕು, ಬೆಳಗಾವಿ
24.ಸರ್ಕಾರಿ ಪದವಿ ಪೂರ್ವ ಕಾಲೇಜು, ಮರಕಟ್ಟೆ, ಕಿತ್ತೂರು ತಾಲ್ಲೂಕು, ಬೆಳಗಾವಿ ಜಿಲ್ಲೆ.
25. ಸರ್ಕಾರಿ ಪದವಿ ಪೂರ್ವ ಕಾಲೇಜು, ಸಿದ್ದಾಪುರ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ. 
26.ಸರ್ಕಾರಿ ಪದವಿ ಪೂರ್ವ ಕಾಲೇಜು, ವಿಟ್ಲ, ಬಂಟ್ವಾಳ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ.
27.ಸರ್ಕಾರಿ ಪದವಿ ಪೂರ್ವ ಕಾಲೇಜು, ಹರೇಕಳ ಹಾಜಬ್ಬ, ಮಂಗಳೂರು ತಾಲ್ಲೂಕು, ದಕ್ಷಿಣ ಕನ್ನಡ
28.ಸರ್ಕಾರಿ ಪದವಿ ಪೂರ್ವ ಕಾಲೇಜು, ಕುರ್ಕಿ, ದಾವಣಗೆರೆ ಉತ್ತರ (ಮಾಯಕೊಂಡ) ತಾಲ್ಲೂಕು,ದಾವಣಗೆರೆ ಜಿಲ್ಲೆ.
29.ಸರ್ಕಾರಿ ಪದವಿ ಪೂರ್ವ ಕಾಲೇಜು, ದುಂಡತಿ ಗ್ರಾಮ, ಶಿಗ್ಗಾಂವ್ ತಾಲ್ಲೂಕು, ಹಾವೇರಿ ಜಿಲ್ಲೆ

click me!