ಮೌಲಾನಾ ಶಾಲೆಗಳಿಗೆ 700 ಶಿಕ್ಷಕರ ನೇಮಕಕ್ಕೆ ಸರ್ಕಾರ ಒಪ್ಪಿಗೆ

By Suvarna News  |  First Published May 27, 2024, 2:02 PM IST

ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರ ಹುದ್ದೆಗಳು ಸೇರಿದಂತೆ 700 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.


ಬೆಂಗಳೂರು (ಮೇ.27): ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರ ಹುದ್ದೆಗಳು ಸೇರಿದಂತೆ 700 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.

2018-19ನೇ ಸಾಲಿನಲ್ಲಿ ಆರಂಭಿಸಲಾದ 100 ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಪ್ರತಿ ಶಾಲೆಗೆ 7 ಹುದ್ದೆಗಳಂತೆ ಒಟ್ಟು 700 ಹುದ್ದೆಗಳನ್ನು ಸೃಜಿಸಿ ಭರ್ತಿ ಮಾಡಲು ಆರ್ಥಿಕ ಇಲಾಖೆ ಮೇ 22ರಂದು ಸಹಮತಿಸಿದೆ. ಇದರಲ್ಲಿ ಮುಖ್ಯೋಪಾಧ್ಯಾಯರ 100 ಹುದ್ದೆಗಳು, ಕನ್ನಡ, ಆಂಗ್ಲ, ಉರ್ದು ಭಾಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ತಲಾ 100 ಜನ ಶಿಕ್ಷಕರಂತೆ 700 ಹುದ್ದೆಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

Latest Videos

undefined

ನಂಗೆ ಹೇರ್ ಕಟ್ ಮಾಡೋರು ಫ್ರೀಯಿಲ್ಲ, ವಿಜಯೇಂದ್ರ ಬಂದು ಕಟಿಂಗ್ ಮಾಡಲಿ; ಶಿಕ್ಷಣ ಸಚಿವ ಮಧು ಬಂಗಾರಪ್ಪ

ಜೂನ್ ತಿಂಗಳು ಆರಂಭವಾಗುತ್ತಿದ್ದು 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗುತ್ತಿದೆ. ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರ ಕೊರತೆ ಸಮಸ್ಯೆ ನಿವಾರಣೆ ಮಾಡಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಶಿಕ್ಷಕರ ನೇಮಕಾತಿ ಹೊಣೆಯನ್ನು ಸೆಕ್ಯೂರಿಟಿ ಏಜೆನ್ಸಿಗೆ ಕೊಟ್ಟ ಸರ್ಕಾರ

ಈ ನೇಮಕಾತಿಯಲ್ಲಿ ಮುಖ್ಯೋಪಾಧ್ಯಾಯರ 100 ಹುದ್ದೆಗಳಿಗೆ, ಕನ್ನಡ, ಆಂಗ್ಲ ಉರ್ದು ಭಾಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ತಲಾ 100 ಜನ ಶಿಕ್ಷಕರಂತೆ 700 ಹುದ್ದೆಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ನೇಮಕಾತಿ ನಡೆಯಲಿದೆ.

click me!