ಸಿಇಟಿ ವಿಚಾರದಲ್ಲಿ ಮಹತ್ವದ ಅಪ್‌ಡೇಟ್, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರ ಸೂಚನೆ

Published : Apr 13, 2026, 07:54 PM IST
cet exam

ಸಾರಾಂಶ

ಸಿಇಟಿ ವಿಚಾರದಲ್ಲಿ ಮಹತ್ವದ ಅಪ್‌ಡೇಟ್, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ. ಕೆಲ ವಿಚಾರಗಳಲ್ಲಿ ಗೊಂದಲ ಬೇಡ ಎಂದು ಪ್ರಾಧಿಕಾರ ಹೇಳಿದೆ. ವಿದ್ಯಾರ್ಥಿಗಳಿಗೆ ನೀಡಿದ ಸೂಚನೆ ಏನು?

ಬೆಂಗಳೂರು (ಏ.13) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ ನೀಡಿದೆ. ಪ್ರಮುಖವಾಗಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿ ಫಲಿತಾಂಶ ವಿಚಾರದಲ್ಲಿ ಗೊಂದಲ ಬೇಡ ಎಂದಿದೆ. ಪರೀಕ್ಷೆ- 1 ಮತ್ತು ಪರೀಕ್ಷೆ-2 ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೊ ಆ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣಿಸಲಾಗುತ್ತದೆ ಎಂದಿದೆ.

ಕೆಲ ಅಭ್ಯರ್ಥಿಗಳು ಪರೀಕ್ಷೆ-1 ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು ಸಿಇಟಿ ರ್ಯಾಂಕ್ ಪರಿಗಣಿಸಲಾಗುತ್ತೆ. ದ್ವಿತೀಯ ಪಿಯುಸಿಯ ಎರಡೂ ಪರೀಕ್ಷೆ ಗಳ ಫಲಿತಾಂಶ ಬಂದ ನಂತರವೇ ಸಿಇಟಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ದೇಶಕ ಹೆಚ್ ಪ್ರಸನ್ನ ಹೇಳಿದ್ಗಾರೆ,

ಎರಡನೇ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವುದಿಲ್ಲ ಎನ್ನುವುದು ಸುಳ್ಳು. ಇಂತಹ ವದಂತಿಗಳಿಗೆ‌ ಕಿವಿ ಕೊಡಬೇಡಿ ಎಂದು ಹೆಚ್ ಪ್ರಸನ್ನ ಹೇಳಿದ್ದಾರೆ.

ಸಿಇಟಿ ಪರೀಕ್ಷೆ 2026 ದಿನಾಂಕ

ರಾಜ್ಯದಲ್ಲಿ ಸಿಇಟಿ ಪರೀಕ್ಷೆ ಏಪ್ರಿಲ್ , 23, 24 ರಂದು ನಡೆಯಲಿದೆ. ಈಗಾಲೇ ಈ ಸುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುತ್ತೋಲೆ ಹೊರಡಿಸಿತ್ತು. ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು.

 

PREV
Read more Articles on
click me!

Recommended Stories

ವಿದ್ಯಾರ್ಥಿಗಳ ಕನಸಿಗೆ ಫೀಸು ಕಂಟಕ, ಕರ್ನಾಟಕದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಶೇ.7.5ರಷ್ಟು ಹೆಚ್ಚಳ!
ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಶಿಕ್ಷಣ ಇಲಾಖೆ ಮಹತ್ವದ ಬದಲಾವಣೆ, ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ