PUC ಬೆನ್ನಲ್ಲೇ ಸಿಇಟಿ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಮರು ನಿಗದಿ

By Suvarna News  |  First Published May 12, 2021, 4:37 PM IST

* ಜುಲೈ 7 ರಿಂದ ಆರಂಭವಾಗಬೇಕಿದ್ದ ಸಿಇಟಿ ಪರೀಕ್ಷೆ ಮುಂದೂಡಿಕೆ..
*ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಿಇಟಿ ಎಕ್ಸಾಮ್ ಮುಂದೂಡಿಕೆ
*ಆಗಸ್ಟ್‌ನಲ್ಲಿ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನ


ಬೆಂಗಳೂರು, (ಮೇ.12): ಕೊರೋನಾ 2ನೇ  ಹೆಚ್ಚಳವಾಗುತ್ತಿರುವ ಕಾರಣ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಸಹ ಮುಂದೂಡಿ, ದಿನಾಂಕವನ್ನು ಮರು ನಿಗದಿ ಮಾಡಲಾಗಿದೆ.

ಈ ಹಿಂದೆ ಸಿಇಟಿ ಪರೀಕ್ಷೆಯನ್ನು ಜುಲೈ 7 ಮತ್ತು 8ರಂದು ನಡೆಸಲು ತೀರ್ಮಾನಿಸಲಾಗಿತ್ತು. ಇದೀಗ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆಯಾದ ಕಾರಣ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

Latest Videos

undefined

ಸಿಇಟಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

ಇನ್ನು ಆಗಸ್ಟ್ 28 ಮತ್ತು 29ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ. ಪರಿಷ್ಕ್ರತ ಪಟ್ಟಿಯಂತೆ ಆಗಸ್ಟ್ 28ರಂದು ಬೆಳಗ್ಗೆ (10.30ರಿಂದ 11.15ರವರೆಗೆ) ಜೀವಶಾಸ್ತ್ರ, ಮಧ್ಯಾಹ್ನ (2.30ರಿಂದ 3.50ರವರೆಗೆ) ಗಣಿತ ಪರೀಕ್ಷೆ ನಡೆಯಲಿದೆ.

ಆಗಸ್ಟ್ 29ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನ ಶಾಸ್ತ್ರ ಪರೀಕ್ಷೆಗಳು ನಡಡೆಯಲಿದೆ. ಇದೇ ವೇಳೆ ಜುಲೈ 9ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಆ ಪರೀಕ್ಷೆ ಆಗಸ್ಟ್ 30 ರಂದು ನಡೆಯಲಿದೆ.

ಹೆಚ್ಚಿನ ವಿವರಗಳಿಗೆ https://cetonline.karnataka.gov.in/kea/ ವೆಬ್‌ ತಾಣಕ್ಕೆ ಭೇಟಿ ನೀಡಬಹುದು. ವಿದ್ಯಾರ್ಥಿಗಳು ಕೋವಿಡ್‌ನಿಂದ ಸುರಕ್ಷಿತವಾಗಿರಿ ಮತ್ತೂ ಪಿಯುಸಿ ಮತ್ತು ಸಿಇಟಿ ಪರೀಕ್ಷೆಗೆ ಉತ್ತಮ ಸಿದ್ಧತೆ ಮಾಡಿಕೊಳ್ಳಿ ಎಂದು ಡಾ.ಅಶ್ವತ್ಥನಾರಾಯಣ ಹಾರೈಸಿದ್ದಾರೆ.

click me!