ಕೊರೋನಾದಿಂದ ಹೆತ್ತವರನ್ನ ಕಳೆದುಕೊಂಡ ಮಕ್ಕಳಿಗೆ ಮಹತ್ವದ ಯೋಜನೆ ಘೋಷಿಸಿದ ಸಿಎಂ

Published : May 29, 2021, 08:53 PM ISTUpdated : May 29, 2021, 08:57 PM IST
ಕೊರೋನಾದಿಂದ ಹೆತ್ತವರನ್ನ ಕಳೆದುಕೊಂಡ ಮಕ್ಕಳಿಗೆ ಮಹತ್ವದ ಯೋಜನೆ ಘೋಷಿಸಿದ ಸಿಎಂ

ಸಾರಾಂಶ

* ಕೊರೋನಾದಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ  * ತಂದೆ-ತಾಯಿಯನ್ನು ಕಳೆದಕೊಡ ಅನಾಥ ಮಕ್ಕಳಿಗೆ  'ಮುಖ್ಯಮಂತ್ರಿ ಬಾಲಸೇವಾ ಯೋಜನೆ *  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಂದ ಘೋಷಣೆ

ಬೆಂಗಳೂರು, (ಮೇ.29): ಕೊರೋನಾ ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ.

ಹೌದು..ಮಹಾಮಾರಿ ಕೊರೋನಾದಿಂದ ಹೆತ್ತವರನ್ನ ಕಳೆದುಕೊಂಡು ತಬ್ಬಲಿಯಾಗಿರುವ ಮಕ್ಕಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ.

ಕೋವಿಡ್‌ನಿಂದ ತಬ್ಬಲಿಯಾದ ಮಕ್ಕಳ ಸಬಲೀಕರಣಕ್ಕೆ ಹೊಸ ಯೋಜನೆ ಘೋಷಿಸಿದ ಮೋದಿ! 

ಈ ಬಗ್ಗೆ ಟ್ವೀಟ್ ಮಾಡಿ ಪ್ರಕಟಿಸಿರುವ ಸಿಎಂ, ಕೋವಿಡ್ ನಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ರಾಜ್ಯ ಸರ್ಕಾರ 'ಮುಖ್ಯಮಂತ್ರಿ ಬಾಲಸೇವಾ ಯೋಜನೆ'ಯನ್ನು ಜಾರಿಗೆ ತರಲಿದೆ. ಕೇಂದ್ರ ಸರ್ಕಾರದ ಸಲಹೆ ಮೇರೆಗೆ, ಕೊರೋನಾದಿಂದ ಅನಾಥರಾಗಿ, ವಿಸ್ತೃತ ಕುಟುಂಬದ ಆಶ್ರಯದಲ್ಲಿರುವ, ಮಕ್ಕಳ ಉತ್ತಮ ಭವಿಷ್ಯ ರೂಪಿಸುವ ದೃಷ್ಟಿಯಿಂದ, ತಿಂಗಳಿಗೆ 3,500 ರೂ. ಗಳನ್ನು ನೀಡಲಾಗುವುದು.

* ವಿಸ್ತೃತ ಕುಟುಂಬದ ಆಸರೆಯಿಲ್ಲದ, 10 ವರ್ಷದೊಳಗಿನ ಕೋವಿಡ್ ನಿಂದಾಗಿ ಅನಾಥರಾಗಿರುವ ಮಕ್ಕಳ ಪೋಷಣೆ ಮತ್ತು ಉತ್ತಮ ಶಿಕ್ಷಣ ಒದಗಿಸುವ ದೃಷ್ಟಿಯಿಂದ ಅಂತಹ ಮಕ್ಕಳನ್ನು ಸರ್ಕಾರಿ ಸ್ವಾಮ್ಯದ ಮಾದರಿ ವಸತಿ ಶಾಲೆಗಳಲ್ಲಿ ದಾಖಲು ಮಾಡಿಕೊಳ್ಳಲಾಗುವುದು. 10ನೇ ತರಗತಿ ಪೂರೈಸಿದ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ನೀಡಲಾಗುವುದು.

* 21 ವರ್ಷ ತುಂಬಿರುವ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ಸೇರಿದಂತೆ ಮುಂದಿನ ಜೀವನಕ್ಕೆ ಅನುಕೂಲ ಕಲ್ಪಿಸಲು 1 ಲಕ್ಷ ರೂ. ನೆರವು ನೀಡಲಾಗುವುದು. 

* ರಕ್ಷಣೆಗೆ ಯಾರೂ ಇಲ್ಲದಂತಹ ಅನಾಥ ಮಕ್ಕಳನ್ನು ನೋಡಿಕೊಳ್ಳಲು ಸರ್ಕಾರದಿಂದ ಮಾರ್ಗದರ್ಶಿ/ಹಿತೈಷಿಗಳನ್ನು ನೇಮಿಸಲಾಗುವುದು. ಯೋಜನೆಯ ಸಮಗ್ರ ವಿವರಗಳನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ