2024-25 ಸಾಲಿನ ಪಠ್ಯಪುಸ್ತಕ ಪರಿಷ್ಕರಣೆಯ ತಿದ್ದುಪಡಿ ಮಾಡಿದ ಶಿಕ್ಷಣ ಇಲಾಖೆ ಹೊಸ ಪಠ್ಯಕ್ರಮವನ್ನು ತಿಳಿಸಿದೆ. ಡಾ ಮಂಜುನಾಥ್ ಹೆಗಡೆ ನೇತೃತ್ವದ ಸಮಿತಿ ಸದ್ದಿಲ್ಲದೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ ಶಾಲಾ ಶಿಕ್ಷಣ ಇಲಾಖೆ ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಬೆಂಗಳೂರು (ಮಾ.5): 2024-25 ಸಾಲಿನ ಪಠ್ಯಪುಸ್ತಕ ಪರಿಷ್ಕರಣೆಯ ತಿದ್ದುಪಡಿ ಮಾಡಿದ ಶಿಕ್ಷಣ ಇಲಾಖೆ ಹೊಸ ಪಠ್ಯಕ್ರಮವನ್ನು ತಿಳಿಸಿದೆ. ಡಾ ಮಂಜುನಾಥ್ ಹೆಗಡೆ ನೇತೃತ್ವದ ಸಮಿತಿ ಸದ್ದಿಲ್ಲದೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ ಶಾಲಾ ಶಿಕ್ಷಣ ಇಲಾಖೆ ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದು ಈ ಹಿಂದೆಯೇ ಕಾಂಗ್ರೆಸ್ ಸರ್ಕಾರ ತಿಳಿಸಿತ್ತು. 2023-2024 ಸಾಲಿನಲ್ಲೂ ಹಲವು ತಿದ್ದುಪಡಿ ಮಾಡಿತ್ತು.
ಪರಿಷ್ಕರಿಸಿದ ತಜ್ಞರು ಪಠ್ಯಪುಸ್ತಕ ಸಿದ್ದ ಪಡಿಸಿದ್ದು, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005 ರ ಮಾರ್ಗಸೂಚಿಯಂತೆ ರಾಜ್ಯ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದ್ದು, 01 ರಿಂದ 10 ನೇ ತರಗತಿವರೆಗಿನ ಕನ್ನಡ ಪ್ರಥಮ ಮತ್ತು ದ್ವಿತೀಯ ಭಾಷೆ ಹಾಗೂ 09 ಮತ್ತು 10 ನೇ ತರಗತಿಯ ಕನ್ನಡ ತೃತೀಯ ಭಾಷೆಯ ಪಠ್ಯಪುಸ್ತಕಗಳು ಪರಿಷ್ಕರಣೆ ಮಾಡಲಾಗಿದೆ. ಇದರ ಜೊತೆಗೆ 06 ರಿಂದ 10 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಪರಿಷ್ಕರಣೆ ಮಾಡಲಾಗಿದೆ.
undefined
2024-25ರ ಸಾಲಿನ 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯೋಮಿತಿ 6ಕ್ಕಿಂತ ಹೆಚ್ಚು: ಶಿಕ್ಷಣ ಇಲಾಖೆ ಆದೇಶ
ಪರಿಷ್ಕರಣೆಗೆ ವಿಷಯವಾರು ತಜ್ಞರ ಸಮಿತಿಯನ್ನು ಹಾಗೂ ಪಠ್ಯಪುಸ್ತಕಗಳ ಪರಿಷ್ಕರಣಾ ಕಾರ್ಯನಿರ್ವಹಿಸುವ ಸಮಿತಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ಹಾಗೂ ಸಲಹೆ ನೀಡುವ ಉದ್ದೇಶಕ್ಕಾಗಿ ನಿವೃತ್ತ ಪ್ರಾಧ್ಯಾಪಕ ಮಂಜುನಾಥ. ಜಿ. ಹೆಗಡೆ ನೇತೃತ್ವದ ಪರಿಷ್ಕರಣಾ ಸಮಿತಿಯು ಮುಖ್ಯವಾಗಿ ಈ ಕೆಳಕಂಡ ಅಂಶಗಳಿಗೆ ಆದ್ಯತೆಯನ್ನು ನೀಡಿ, ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿದೆ.
ಹೈಯರ್ ಸ್ಟಡೀಸ್ ಮಾಡುವವರು ದೀರ್ಘಕಾಲ ಬದುಕ್ತಾರಂತೆ ಹೌದಾ?
1. ರಾಷ್ಟ್ರೀಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟುಗಳು ಮತ್ತು ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗದಂತೆ ಪರಿಷ್ಕರಣೆಗೆ ಒಳಪಟ್ಟ ಪಠ್ಯಪುಸ್ತಕಗಳ ಮೂಲ ಸ್ವರೂಪ ಬದಲಾಗದಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನಷ್ಟೇ ಗಮನದಲ್ಲಿರಿಸಿಕೊಂಡು ಈ ಪರಿಷ್ಕರಣೆಯನ್ನು ನಡೆಸಲಾಗಿದೆ.
2. ಪ್ರಸ್ತುತ ಪರಿಷ್ಕರಣ ಸಮಿತಿಗೆ ಪೂರ್ವದಲ್ಲಿಯೇ ಶಾಲಾ ಶಿಕ್ಷಣ ಇಲಾಖೆಯು ಹೊರಡಿಸಿದ್ದ 2023-24ನೇ ಸಾಲಿನ ಪಠ್ಯಪುಸ್ತಕಗಳ ತಿದ್ದೋಲೆ" ಯ ಅಂಶಗಳನ್ನು ಸಮಿತಿಯು ಅಳವಡಿಸಿಕೊಂಡಿದೆ.