ದ್ವಿತಿಯ ಪಿಯು ಪರೀಕ್ಷೆ ರದ್ದಾಯ್ತು ಈಗ ಸಿಇಟಿ ಚಿಂತೆ: ಡಿಸಿಎಂ ಹೀಗಂದ್ರು...

By Suvarna News  |  First Published Jun 5, 2021, 6:40 PM IST

* ದ್ವಿತೀಯ ಪಿಯುಸಿ ರದ್ದು ಬೆನ್ನಲ್ಲೇ ಸಿಇಟಿ ಪರೀಕ್ಷೆ ಚಿಂತೆ
* ಸಿಇಟಿ ಪರೀಕ್ಷೆ ಬಗ್ಗೆ ಮಹತ್ವದ ಮಾಹಿತಿ ಕೊಟ್ಟ ಡಿಸಿಎಂ ಅಶ್ವತ್ಥ ನಾರಾಯಣ
* ಸುರೇಶ್‌ ಕುಮಾರ್‌ ಅವರಿಂದ ಉತ್ತಮ ಸಲಹೆ


ಬೆಂಗಳೂರು, (ಜೂನ್.05): ಕೊರೋನಾ ಹಿನ್ನೆಲೆಯಲ್ಲಿ 2021-22ನೇ ಸಾಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರಾಜ್ಯದಲ್ಲಿ ರದ್ದು ಮಾಡಲಾಗಿದೆ. ಆದ್ರೆ, ಇದೀಗ ವಿದ್ಯಾರ್ಥಿಗಳಿಗೆ ಯಾವ ಆಧಾರದ ಮೇಲೆ ಅಂಕಗಳನ್ನ ನೀಡಬೇಕೆನ್ನುವ ಗೊಂದಲಗಳು ಶುರುವಾಗಿದೆ. 

ಇನ್ನು ಇದರ ಮಧ್ಯೆ ಉನ್ನತ ಶಿಕ್ಷಣ ಸಚಿವರೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಸಿಇಟಿ ಪರೀಕ್ಷೆ ಬಗ್ಗೆ ಒಂದಿಷ್ಟು  ಮಾಹಿತಿ ನೀಡಿದ್ದಾರೆ.

Tap to resize

Latest Videos

ಯಾವ ಆಧಾರದ ಮೇಲೆ ದ್ವಿತೀಯ ಪಿಯುಸಿ ಅಂಕ ನೀಡಲಾಗುತ್ತೆ? ಇಲ್ಲಿದೆ ಮಾಹಿತಿ

ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆ ಇಲ್ಲದೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ, ನೀಟ್ ಅಂಕಗಳನ್ನು ಮಾತ್ರ ಪರಿಗಣಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್‌ ಕುಮಾರ್‌ ಕೊಟ್ಟಿರುವ ಸಲಹೆ ಬಗ್ಗೆ ಸದ್ಯದಲ್ಲೇ ಪರಿಶೀಲನೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ಸುರೇಶ್‌ ಕುಮಾರ್‌ ಅವರು ಉತ್ತಮ ಸಲಹೆ ನೀಡಿದ್ದಾರೆ. ಎಂಜಿನೀಯರಿಂಗ್ & ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಇಂತಿಷ್ಟು ಅಂಕಗಳನ್ನು ಪಡೆಯಬೇಕಾಗಿತ್ತು. ಈಗ ಆ ಅಂಕ ಪರಿಗಣಿಸುವ ಬದಲು ಸಿಇಟಿ ರಾಂಕ್‌ ಪರಿಗಣಿಸುವ ಸಲಹೆಯನ್ನು ಅವರು ನೀಡಿದ್ದಾರೆ. ಈ ಬಗ್ಗೆ ಸಂಬಂಧಿತ ಅಧಿಕಾರಿಗಳು, ಉನ್ನತ ಶಿಕ್ಷಣ ತಜ್ಞರ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅಲ್ಲದೆ, ಈ ಬದಲಾವಣೆ ಮಾಡಬೇಕಾದರೆ ಕಾಯ್ದೆಯ ತಿದ್ದುಪಡಿಯನ್ನೂ ಮಾಡಬೇಕು. ಈ ಬಗ್ಗೆ ಕಾನೂನು ತಜ್ಞರು ಹಾಗೂ ಮುಖ್ಯಮಂತ್ರಿಗಳ ಜತೆಯೂ ಮಾತುಕತೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

click me!