* ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ
* ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾದ ಶಿಕ್ಷಣ ಇಲಾಖೆ
* ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಶಿಕ್ಷಣ ಇಲಾಖೆ ನಿರ್ಧಾರ
ಬೆಂಗಳೂರು, (ಮಾ.01): ಕೊರೋನಾ ಕಾರಣದಿಂದ ಕಳೆದೆರಡು ವರ್ಷದಿಂದ ಶಿಕ್ಷಣ ಕ್ಷೇತ್ರ ಭಾರಿ ಹೊಡೆತಬಿದ್ದಿದೆ. ಸರಿಯಾದ ಸಮಯಕ್ಕೆ ಪಾಠ ಇಲ್ಲ. ಸರಿಯಾದ ಸಮಯಕ್ಕೆ ಪರೀಕ್ಷೆಗಳು ನಡೆದಿಲ್ಲ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೊರೋನಾ ಕಂಟಕವಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಅಂತಿಮ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ, ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಸರ್ಕಾರ ನಿರ್ಧರಿಸಿದೆ.
ಭೌತಿಕ ತರಗತಿಗಳ ಆರಂಭದ ವಿಳಂಬ, ಆನ್‌ಲೈನ್ ತರಗತಿಗಳ ಸಮಯದಲ್ಲಿ ನೆಟ್‌ವರ್ಕ್ ಸಮಸ್ಯೆಗಳನ್ನು ಪರಿಗಣಿಸಿ, ಈ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು 75% ಹಾಜರಾತಿಯನ್ನು ಕಡ್ಡಾಯಗೊಳಿಸದಿರಲು ಇಲಾಖೆ ತೀರ್ಮಾನಿಸಿದೆ.
2nd PUC Revised Time Table: ಗಮನಿಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ
ಈ ಬಗ್ಗೆ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, ಈ ವರ್ಷದಲ್ಲಿ 75% ಹಾಜರಾತಿಯನ್ನು ಖಚಿತಪಡಿಸಿಕೊಳ್ಳುವುದು ಕಡ್ಡಾಯವಲ್ಲ. ಈ ವಿಚಾರವಾಗಿ ಕಾಲೇಜು ಮಟ್ಟದಲ್ಲಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಹಾಜರಾತಿ ಕೊರತೆಯಿಂದ ಪ್ರತಿ ವರ್ಷ ಕನಿಷ್ಠ 2,000 ರಿಂದ 4,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದಿಲ್ಲ. ಕರ್ನಾಟಕ ಶಿಕ್ಷಣ ಕಾಯಿದೆ, 2006 ರ ನಿಯಮ 21, ವಿದ್ಯಾರ್ಥಿಗಳು 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು 75% ಹಾಜರಾತಿಯನ್ನು ಕಡ್ಡಾಯಗೊಳಿಸುತ್ತದೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಅನುಸರಿಸಿ ಕಾಯಿದೆಗೆ ತರಲಾದ ತಿದ್ದುಪಡಿಗಳ ಪ್ರಕಾರ, ಯಾವುದೇ ವಿದ್ಯಾರ್ಥಿಗಳು ಹಾಜರಾತಿಯಲ್ಲಿ (ಶೇ. 75 ಕ್ಕಿಂತ ಕಡಿಮೆ) ಕೊರತೆಯಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಹಾಜರಾಗಲು ಅನುಮತಿಸಲಾಗುವುದಿಲ್ಲ ಮತ್ತು ಪ್ರವೇಶ ಪತ್ರಗಳನ್ನು ನೀಡಲಾಗುವುದಿಲ್ಲ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಮುಖ್ಯಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿವೆ.
ಅಂತಿಮ ವೇಳಾಪಟ್ಟಿ ಇಂತಿದೆ
ಮಾರ್ಚ್ 28- ಪ್ರಥಮ ಭಾಷೆ,
ಮಾರ್ಚ್ 30- ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ
ಏಪ್ರಿಲ್ 1- ಅರ್ಥ ಶಾಸ್ತ್ರ, ಕೋರ್ ಸಬ್ಜೆಕ್ಟ್,
ಏಪ್ರಿಲ್ 4- ಗಣಿತ, ಸಮಾಜಶಾಸ್ತ್ರ
ಏಪ್ರಿಲ್ 6- ಸಮಾಜ ವಿಜ್ಞಾನ
ಏ.8- ತೃತೀಯ ಭಾಷೆ
ಏ.11- ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.
ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಎಪ್ರಿಲ್/ಮೇ ತಿಂಗಳಿನಲ್ಲಿ ನಡೆಯುವ ದ್ವಿತೀಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ (Karnataka PU Board) ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಪರೀಕ್ಷೆ ಎಂದಿನಂತೆ ಏ.16ರಿಂದ ಮೇ.6ರವರೆಗೆ ನಡೆಯಲಿದೆ. ಏ.21ರಂದು ನಡೆಯಬೇಕಿದ್ದ ಭಾಷಾ ವಿಷಯಗಳಲ್ಲಿ ಉರ್ದು ಮತ್ತು ಅರೇಬಿಕ್ ವಿಷಯಗಳನ್ನು ಪ್ರತ್ಯೇಕಿಸಿ ಪರೀಕ್ಷೆ ನಡೆಸಲಾಗುತ್ತಿದೆ.
ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ವೇಳಾಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://pue.kar.nic.in/ ನಲ್ಲಿ ಚೆಕ್ ಮಾಡಬಹುದು. ಇದರ ಪ್ರಕಾರವಾಗಿ ಏ.21ರಂದು ಉರ್ದು ಪರೀಕ್ಷೆ ಎಂದಿಂತೆ ನಡೆಯಲಿದ್ದು, ಈ ಮೊದಲು ರಜೆ ಅವಧಿಯಾಗಿದ್ದ ಏ.29ಕ್ಕೆ ಅರೆಬಿಕ್ ಪರೀಕ್ಷೆ ನಡೆಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸ ವೇಳಾಪಟ್ಟಿ ವಿವರ ಇಂತಿದೆ...
ಏಪ್ರಿಲ್ 16: ಗಣಿತ, ಶಿಕ್ಷಣ, ಬೇಸಿಕ್ ಗಣಿತ
ಏಪ್ರಿಲ್ 18: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏಪ್ರಿಲ್ 19: ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ ನೆಸ್
ಏಪ್ರಿಲ್ 20: ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 21: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 22: ಲಾಜಿಕ್, ಬಿಸಿನೆಸ್ ಸ್ಟಡೀಸ್
ಏಪ್ರಿಲ್ 23: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನೋವಿಜ್ಞಾನ, ರಸಾಯನಶಾಸ್ತ್ರ
ಏಪ್ರಿಲ್ 25: ಅರ್ಥಶಾಸ್ತ್ರ
ಏಪ್ರಿಲ್ 26: ಹಿಂದಿ
ಏಪ್ರಿಲ್ 28: ಕನ್ನಡ
ಏಪ್ರಿಲ್ 29: ಅರೇಬಿಕ್
ಏಪ್ರಿಲ್ 30: ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 2: ಭೂಗೋಳ, ಜೀವಶಾಸ್ತ್ರ
ಮೇ 4: ಇಂಗ್ಲಿಷ್
ಮೇ 6: ಲೆಕ್ಕ ಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಕನ್ನಡ (ಐಚ್ಛಿಕ)