ಆರ್‌ಟಿಇ ಕಾಯ್ದೆಯಡಿ ಆದಾಯ ಮಿತಿ ₹8 ಲಕ್ಷಕ್ಕೆ ಹೆಚ್ಚಳ; ಶಿಕ್ಷಣ ಇಲಾಖೆ ಮಹತ್ವದ ಆದೇಶ

Kannadaprabha News   | Kannada Prabha
Published : Nov 19, 2026, 11:22 AM IST
RTE income limit Karnataka

ಸಾರಾಂಶ

ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಸೀಟು ಪಡೆಯಲು ಪೋಷಕರ ವಾರ್ಷಿಕ ಆದಾಯ ಮಿತಿಯನ್ನು 3.5 ಲಕ್ಷದಿಂದ 8 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಇದರಿಂದ ಹೆಚ್ಚಿನ ಕುಟುಂಬಗಳಿಗೆ ಈ ಯೋಜನೆಯ ಪ್ರಯೋಜನ ದೊರೆಯಲಿದೆ.

ಬೆಂಗಳೂರು(ನ.19): ಶಿಕ್ಷಣ ಹಕ್ಕು ಕಾಯ್ದೆ (RTE) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಉಚಿತ ಸೀಟು ಪಡೆಯಲು ಬಯಸುವ ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷದಿಂದ 8 ಲಕ್ಷ ರು.ಗಳಿಗೆ ಹೆಚ್ಚಿಸಿ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಾರ್ಷಿಕ ಆದಾಯದ ಮಿತಿ 8 ಲಕ್ಷಕ್ಕೆ ಶಿಕ್ಷಣ ಇಲಾಖೆ ಮಹತ್ವದ ಆದೇಶ

2009ರಲ್ಲಿ ಅಂದಿನ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ, ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಮತ್ತು ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯ. ಈ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರ್ಕಾರವೇ ಭರಿಸುತ್ತದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರು.ಗಳಿಗೆ ನಿಗದಿಯಾಗಿದ್ದರಿಂದ ಹೆಚ್ಚಿನ ಕುಟುಂಬಗಳಿಗೆ ಈ ಯೋಜನೆಯ ಪ್ರಯೋಜನ ದೊರೆಯುತ್ತಿರಲಿಲ್ಲ. ಆದಾಯದ ಮಿತಿ ಹೆಚ್ಚಿಸುವಂತೆ ಪೋಷಕರು ಸುಮಾರು ಒಂದು ದಶಕದಿಂದ ಒತ್ತಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ವಾರ್ಷಿಕ ಆದಾಯದ ಮಿತಿ 8 ಲಕ್ಷಕ್ಕೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಅತ್ಯಧಿಕ ಆದಾಯ ಮಿತಿ ನಿಗದಿ:

ಈ ಮೂಲಕ ದೇಶದಲ್ಲೇ ಅತ್ಯಧಿಕ ಆದಾಯ ಮಿತಿ ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಲಿದೆ. ಗುಜರಾತ್‌ನಲ್ಲಿ 6 ಲಕ್ಷ ಹಾಗೂ ದೆಹಲಿಯಲ್ಲಿ 5 ಲಕ್ಷ ಆದಾಯ ಮಿತಿ ಇದ್ದು, ನೆರೆಯ ರಾಜ್ಯಗಳಲ್ಲಿ ಇದಕ್ಕಿಂತಲೂ ಕಡಿಮೆ ಮಿತಿ ಇದೆ ಎಂದು ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ.

PREV
Read more Articles on
click me!

Recommended Stories

ದುಡ್ಡಿಲ್ಲವೆಂದು ದೂರವಿಟ್ಟವರೇ ಭೇಟಿಗಾಗಿ ಕ್ಯೂ ನಿಲ್ಲುವಂತೆ ಮಾಡಿದ 23ರ ಯುವಕ! ಚಾಯ್​ವಾಲಾ ಈಗ ಗೆಜೆಟೆಡ್​ ಆಫೀಸರ್​
2027 ರಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಹಾಗೂ ಆಂಗ್ಲ ದ್ವಿಭಾಷಾ ಮಾಧ್ಯಮ ಜಾರಿ: ಶಿಕ್ಷಣ ಸಚಿವ ಮಹತ್ವದ ಘೋಷಣೆ!