ಹಿಜಾಬ್, ಕೇಸರಿ ಶಾಲು ಜಟಾಪಟಿಗೆ ಬ್ರೇಕ್
ಶಾಲಾ-ಕಾಲೇಜಿನಲ್ಲಿ ಏಕರೂಪದ ಸಮವಸ್ತ್ರ ಜಾರಿ
ಪದವಿ ಪೂರ್ವ ಕಾಲೇಜುಗಳಿಗೂ ಕಡ್ಡಾಯ ಸಮವಸ್ತ್ರ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು, (ಫೆ.05): ಹಿಜಾಬ್ (Hijab) ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು(Students) ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. ಇದು ಭಾರಿ ವಿವಾದಕ್ಕೀಡಾಗಿದ್ದು, ನಾಯಕರ ನಡುವೆ ಹಗ್ಗಾಜಗ್ಗಾಟಕ್ಕೆ ಕಾರಣವಾಗಿದೆ.
ಇದೀಗ ಇದಕ್ಕೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ( Karnataka Government), ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ(School College) ವಿದ್ಯಾರ್ಥಿಗಳ ವಸ್ತ್ರಸಂಹಿತೆ ಕುರಿತು ಸೂತ್ತೋಲೆ ಹೊರಡಿಸಿದೆ.
Hijab Controversy 'ಕಾಲೇಜಿನಲ್ಲಿ ಹಿಜಾಬ್ ಧರಿಸುವವರಿಗೆ TC ಕೊಟ್ಟು, ಒದ್ದು ಮನೆಗೆ ಕಳಿಸಿ'
ಪದವಿ ಪೂರ್ವ ಕಾಲೇಜುಗಳಿಗೂ ಕಡ್ಡಾಯ ಸಮವಸ್ತ್ರ(Uniform) ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆಯ(Education Department ) ಅಧೀನ ಕಾರ್ಯದರ್ಶಿ ಪದ್ಮಿನಿ ಎಸ್ ಅವರು ಇಂದು(ಶನಿವಾರ) ಸುತ್ತೋಲೆ ಹೊರಡಿಸಿದ್ದಾರೆ.
ಸರ್ಕಾರದ ಎಲ್ಲ ಶಾಲಾ ಕಾಲೇಜುಗಳಿಗೆ ಸಮವಸ್ತ್ರ ಕಡ್ಡಾಯವಾಗಿದ್ದು, ಖಾಸಗಿ ಶಾಲೆಗಳು, ಕಾಲೇಜುಗಳಿಗೂ ತಮ್ಮ ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರವನ್ನೇ ಧರಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ಅನ್ವಯ ವಸ್ತ್ರಸಂಹಿತೆ ಜಾರಿ ಮಾಡಲಾಗಿದ್ದು, ಪದವಿ ಪೂರ್ವ ಕಾಲೇಜುಗಳಿಗೂ ಸಮವಸ್ತ್ರ ಕಡ್ಡಾಯ. ಕಾಲೇಜುಗಳಲ್ಲಿ CDC ಅಥವಾ ಆಡಳಿತ ಮಂಡಳಿ ಸಮಸವ್ತ್ರ ನಿಗಧಿ ಪಡಿಸದಿದ್ದಲ್ಲಿ, ಸಮಾನತೆ ಹಾಗೂ ಐಕೆತೆ ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪು ಧರಿಸಿಕೊಳ್ಳತಕ್ಕದೆಂದು ಆದೇಶಿಸಿದೆ.
ಮೊದಲಿಗೆ ಉಡುಪಿ ಜಿಲ್ಲೆಯಲ್ಲಿ ಮುಸ್ಲಿಂ ವಿದ್ಯರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತಿರುವುದಕ್ಕೆ ವಿರೋಧ ವ್ಯಕ್ತವಾಯ್ತು.. ಇದಕ್ಕೆ ಪ್ರತಿರೋಧವಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ತೆರಳಿದ್ದಾರೆ. ಇದು ಭಾರೀ ವಿವಾದಕ್ಕೆ ಕಾರಣವಾಯ್ತು.
ಹೈಕೋರ್ಟ್‌ನಲ್ಲಿ ಹಿಜಾಬ್
ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಮುಸ್ಲಿಮ್ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗುವುದಕ್ಕೆ ಅಡ್ಡಿ ಪಡಿಸಿದ ಘಟನೆ ಈಗ ಕೋರ್ಟ್ ಮೇಟ್ಟಿಲೇರಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಉಡುಪಿ ಶಾಸಕ ರಘುಪತಿ ಭಟ್ ಅವರು ಕಾನೂನುಬಾಹಿರವಾಗಿ ಕಾಲೇಜಿನ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆಕ್ಷೇಪಿಸಲಾಗಿದ್ದು, ಈ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿಸಲಾಗಿದೆ.
ವಿದ್ಯಾರ್ಥಿನಿಯರಾದ ಆಯೇಷಾ ಹಜೀರಾ ಅಲ್ಮಾಸ್, ರೇಶಮ್ ಫಾರೂಕ್, ಅಲಿಯಾ ಅಸ್ಸಾದಿ, ಶಫಾ, ಶಮೀಮ್, ಮುಸ್ಕಾನ್ ಜೈನಬ್ ಅವರನ್ನು ಅವರ ತಾಯಂದಿರುವ ಪ್ರತಿನಿಧಿಸಿದ್ದು, ವಕೀಲ ಮೊಹಮ್ಮದ್ ತಾಹೀರ್ ಅವರ ಮೂಲಕ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ನಡೆಸಿ, ಈ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.
ಉಡುಪಿ ಶಾಸಕ ರಘುಪತಿ ಭಟ್ ಅವರಲ್ಲದೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕರು, ಉಡುಪಿ ಜಿಲ್ಲಾಧಿಕಾರಿ, ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ಪ್ರತಿವಾದಿಗಳನ್ನಾಗಿಸಿ ನ್ಯಾಯಾಲಯವು ನೋಟಿಸ್ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿದೆ. ವಿಚಾರಣೆಯನ್ನು ಮಂಗಳವಾರಕ್ಕೆ (ಫೆಬ್ರವರಿ 8) ಮುಂದೂಡಲಾಗಿದೆ.