ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ಕೊಟ್ಟ ಶಿಕ್ಷಣ ಸಚಿವ; ಈ ಬಾರಿ ಪಠ್ಯಪರಿಷ್ಕರಣೆ ಇಲ್ಲ!

By Ravi JanekalFirst Published May 28, 2024, 11:53 PM IST
Highlights

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ಕಳೆದ ವರ್ಷ ಭಾರೀ ವಿವಾದವನ್ನೇ ಹುಟ್ಟುಹಾಕಿತ್ತು. ಆದರೆ ಈ ಬಾರಿ ಪಠ್ಯಪರಿಷ್ಕರಣೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಂಗಳೂರು (ಮೇ.28): ಬಿಜೆಪಿ ಸರ್ಕಾರದ ಅವಧಿಯಲ್ಲಿನ ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ಕಳೆದ ವರ್ಷ ಭಾರೀ ವಿವಾದವನ್ನೇ ಹುಟ್ಟುಹಾಕಿತ್ತು. ಆದರೆ ಈ ಬಾರಿ ಪಠ್ಯಪರಿಷ್ಕರಣೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇಂದು ಮೈಸೂರಿನಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು. ಈ ಬಾರಿ ಶಾಲಾ ಪಠ್ಯಪರಿಷ್ಕರಣೆ ಮಾಡೊಲ್ಲ ಎಂದು ಸ್ಪಷ್ಟಪಡಿಸಿದರು. ಪಠ್ಯಪರಿಷ್ಕರಣೆ ಬಗ್ಗೆ ಕಳೆದ ಬಾರಿಯೇ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ ಹೀಗಾಗಿ ಈ ಬಾರಿ ಯಾವುದೇ ಬದಲಾವಣೆ ಇಲ್ಲ. ಅದ್ಯಾಗೂ ತಪ್ಪಿದ್ದ ಪದಗಳನ್ನು ಸರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

Latest Videos

ಇಂದಿನಿಂದಲೇ ಶಾಲೆಗಳು ಶುರು:

2024-25ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳಿಂದ ಬೇಸಿಗೆ ರಜೆಯಿಂದ ಬಂದ್‌ ಆಗಿದ್ದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಮೇ 29ರ ಬುಧವಾರದಿಂದ ಮತ್ತೆ ಬಾಗಿಲು ತೆರೆಯಲಿವೆ. ಆದರೆ, ಮಕ್ಕಳನ್ನು ಮಾತ್ರ ಮೇ 31ರಂದು ಶಾಲಾ ಪ್ರಾರಂಭೋತ್ಸವದ ಮೂಲಕ ಸಿಹಿ ನೀಡಿ ಶಿಕ್ಷಕರು ಬರಮಾಡಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

click me!