ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ 5, 8ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.
ಬೆಂಗಳೂರು (ಅ.8): ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ 5, 8ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಶಿಕ್ಷಣ ಹಕ್ಕು ಕಾಯ್ದೆ (ಆಟಿಐ) ಅನುಸಾರ ಎಂಟನೇ ತರಗತಿಯವರೆಗೆ ಮಕ್ಕಳನ್ನು ಅನುತೀರ್ಣ ಗೊಳಿಸುವ ನಿಯಮವಿಲ್ಲ. ಒಂಬತ್ತನೇ ತರಗತಿಯಲ್ಲಿ ಮಾತ್ರ ಅನುತೀರ್ಣ ಗೊಳಿಸುವ ಅವಕಾಶವಿದೆ. ಹೀಗಾಗಿ ಕಲಿಕಾ ಗುಣಮಟ್ಟ ಹೆಚ್ಚಳಕ್ಕೆ ಈ ನಿರ್ಧಾರ ಸರಕಾರ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ. ಇನ್ನು 5, 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸಾಂಕ್ರಾಮಿಕ ಕೊರೊನಾ ಬಳಿಕ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಎಸ್ ಎಸ್ ಎಲ್ ಸಿ ಬರೆಯುವಷ್ಟರಲ್ಲಿ ಮಕ್ಕಳ ಶೈಕ್ಷಣಿಕ ಕಲಿಕೆ ಬಗ್ಗೆ ಅಸಮಾಧಾನವಿದೆ. ಆದರೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ರೀತಿಯಲ್ಲಿ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ. ಆದ್ರೆ ಶಿಕ್ಷಣದ ಗುಣಮಟ್ಟ ನಿಟ್ಟಿನಲ್ಲಿ ಬೋರ್ಡ್ ಪರೀಕ್ಷೆಗೆ ಪರ್ಯಾಯ ಪರೀಕ್ಷೆ ಮಾಡಲು ಚರ್ಚಿಸಲಾಗಿದೆ. ಅ. 13 ರಂದು ಜರುಗುವ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ. ಬೋರ್ಡ್ ಮಾದರಿಯಲ್ಲದೆ ಪರ್ಯಾಯವಾಗಿ ಮಕ್ಕಳ ಕಲಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಯೋಚಿಸಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಐದನೇ ತರಗತಿಯಲ್ಲಿ ಬೋರ್ಡ್ ಪರ್ಯಾಯ ಪರೀಕ್ಷೆ ಮಾಡಲು ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಶೈಕ್ಷಣಿಕ ನಿಯಮದ ಪ್ರಕಾರ 1 ನೇ ತರಗತಿಯಿಂದ, 9ನೇ ತರಗತಿಯ ವರೆಗೂ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸದೆ ಮುಂದಿನ ಕತರಗತಿಗೆ ಕಳುಹಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಕಲಿಕೆ ಆಸಕ್ತಿ ಕಡಿಮೆಯಾಗುತ್ತಿದೆ. ಇನ್ನು ಕೊರೊನಾ ಸಮಯದಲ್ಲೂ ಶಾಲೆಗಳು ನಡೆಯದೆ ಇದ್ದುದರಿಂದ ಕಾರಣ ವಿದ್ಯಾರ್ಥಿಗಳು ಕಲಿಕೆಯಲ್ಲಿ ತೀವ್ರ ಹಿಂದುಳಿದಿದ್ದಾರೆ.
ವಿವಿಧ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಅ.6 ರಿಂದ ದಾಖಲಾತಿ ಪರಿಶೀಲನೆ
ಹೀಗಾಗಿ ಭವಿಷ್ಯದ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ಇತರ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಎದುರಿಸುವುದು ಕಷ್ಟವಾದಾಗ ವಿದ್ಯಾರ್ಥಿಗಳ ಮನೋಸ್ಥೆರ್ಯವು ಕುಂಠಿತವಾಗಲಿದೆ . ಈ ಹಿನ್ನಲೆಯಲ್ಲಿ ಎರಡು ಹಂತದಲ್ಲಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಆಧಾರಿತವಾಗಿ ರಾಜ್ಯ ಶಾಲಾ ಪ್ರಾಧಿಕಾರದ ಮೂಲಕ ಬೋರ್ಡ್ ಪರೀಕ್ಷೆ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಶಿಕ್ಷಣ ನೀತಿ ಜಾರಿಯಾಗಿ 2 ವರ್ಷ ಕಳೆದರೂ ಮುಗಿಯದ ಗೊಂದಲ, ಹಂತ ಹಂತವಾಗಿ ಜಾರಿ ಮಾಡ
ತಾಂತ್ರಿಕ ಶಿಕ್ಷಣದಲ್ಲಿ ಸೈಬರ್ ಸೆಕ್ಯೂರಿಟಿ ಕೋರ್ಸ್: ಸಚಿವ ಡಾ.ಅಶ್ವತ್ಥ ನಾರಾಯಣ: ಕೋವಿಡ್ ನಂತರದ ಜಗತ್ತಿನ ಚಿತ್ರಣ ಬದಲಾಗಿದ್ದು, ಪಾಲಿಟೆಕ್ನಿಕ್, ಡಿಪ್ಲೋಮಾ ಮತ್ತು ಎಂಜಿನಿಯರಿಂಗ್ ಹಂತಗಳಲ್ಲಿ ಸೈಬರ್ ಸೆಕ್ಯೂರಿಟಿಗೆ ಸಂಬಂಧಿಸಿದ ಹಲವು ಕೋರ್ಸ್‌ಗಳನ್ನು ಸೇರಿಸಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ‘ರಾಷ್ಟ್ರೀಯ ಸೈಬರ್ ಸೆಕ್ಯೂರಿಟಿ ಜಾಗೃತಿ ಮಾಸ’ ಉದ್ಘಾಟಿಸಿ ಮಾತನಾಡಿದ ಅವರು, ಶಾಲಾ ಹಂತದಿಂದಲೇ ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಸೈಬರ್ ಜಾಗೃತಿ ಮೂಡಿಸಲಾಗುತ್ತಿದೆ. ಸೈಬರ್ ಬೆದರಿಕೆಯ ಈ ಕಾಲಘಟ್ಟದಲ್ಲಿ ನಮ್ಮ ಐಟಿ ಸ್ವತ್ತುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕಾಗಿದ್ದು, ಬಹಳ ದೊಡ್ಡ ಸವಾಲು ಮತ್ತು ಜರೂರಾಗಿದೆ ಎಂದರು.
ಕೋವಿಡ್ ನಂತರ ನಾವು ಬಹುದೊಡ್ಡ ಡಿಜಿಟಲ್ ಪರಿವರ್ತನೆ ಹೊಂದುತ್ತಿದ್ದೇವೆ. ಸೈಬರ್ ಬೆದರಿಕೆಯನ್ನು ಸಮರ್ಥವಾಗಿ ಎದುರಿಸಲು ರಾಜ್ಯದಲ್ಲಿ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್‌ಟಿ) ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರಲು ಉದ್ದೇಶಿಸಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ಬಿ.ತಿಮ್ಮೇಗೌಡ, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಮಿತಿಯ ಡಾ. ಅಶೋಕ ರಾಯಚೂರು, ಐಟಿ ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.