ಪೋಷಕರಿಗೆ ಗುಡ್‌ ನ್ಯೂಸ್: ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಖಾಸಗಿ ಶಾಲೆಗಳಿಗೆ ಸರ್ಕಾರ ಆದೇಶ

By Suvarna NewsFirst Published Nov 13, 2021, 6:45 PM IST
Highlights

* 2020-21ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ
* ಹೆಚ್ಚುವರಿ ಶುಲ್ಕವನ್ನು ವಾಪಸ್ ನೀಡಬೇಕೆಂದು ಆದೇಶ
* ರಾಜ್ಯ ಖಾಸಗಿ ಶಾಲೆಗಳಿಗೆ ಆದೇಶಿಸಿದ ಸರ್ಕಾರ

ಬೆಂಗಳೂರು, (ನ.13) : 2020-21ನೇ ಶೈಕ್ಷಣಿಕ ವರ್ಷದಲ್ಲಿ ಪಡೆದಿರುವ ಹೆಚ್ಚುವರಿ ಶುಲ್ಕವನ್ನು (School Fee) ವಾಪಸ್ ನೀಡಬೇಕೆಂದು ರಾಜ್ಯ ಖಾಸಗಿ ಶಾಲೆಗಳಿಗೆ (Private Schools) ಸರ್ಕಾರ ಆದೇಶಿಸಿದೆ.

2020-21 ನೇ ಸಾಲಿನ ಪೂರ್ಣ ಶುಲ್ಕ ಪಡೆದಿದ್ದರೆ ವಾಪಸ್ ಮಾಡುವಂತೆ ಶಾಲೆಗಳಿಗೆ ಆದೇಶಿಸಲಾಗಿದೆ. ಇದರಿಂದ ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ

Karnataka School Reopening| ಇಂದಿನಿಂದ ಅಂಗನವಾಡಿ, ಎಲ್‌ಕೆಜಿ, ಯುಕೆಜಿ ಶುರು!

 ಈ ಹಿಂದೆ ಶೇ.30 ರಷ್ಟು ಶುಲ್ಕ ಕಡಿತ ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ  ಪ್ರಶ್ನಿಸಿ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿತ್ತು.  ಕೊರೋನಾ ಮತ್ತು ಲಾಕ್ ಡೌನ್ ಹಿನ್ನೆಲೆ ಶುಲ್ಕ ಕಡಿತಗೊಳಿಸಬೇಕೆಂದು ಪೋಷಕರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ರಾಜ್ಯದಲ್ಲಿರುವ ಯಾವುದೇ ಮಾದರಿಯ ಪಠ್ಯಕ್ರಮವನ್ನು ಬೋಧಿಸುವ ಖಾಸಗಿ ಶಾಲೆಗಳು ಕಳೆದ ಸಾಲಿನ ಅಂದರೆ 2019-20ನೇ ಸಾಲಿನ ಬೋಧನಾ ಶುಲ್ಕದ ಶೇ. 70 ಭಾಗವನ್ನು ಮಾತ್ರ ಪೋಷಕರಿಂದ ಒಟ್ಟು ಶುಲ್ಕವಾಗಿ ಪಡೆಯಬೇಕು. ಈ ಬಾರಿ ಅವಧಿ ಶುಲ್ಕವನ್ನು ಹೊರತುಪಡಿಸಿ ಯಾವುದೇ ಅಭಿವೃದ್ಧಿ ಶುಲ್ಕಗಳನ್ನು ಶಾಲೆಗಳು ಪಡೆಯುವಂತಿಲ್ಲ. ವಿವಿಧ ಯಾವುದೇ ವಂತಿಕೆಯನ್ನು ಪಡೆಯುವಂತಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿತ್ತು.

2020-21ನೇ ಶೈಕ್ಷಣಿಕ ವರ್ಷ ಆರಂಭದ ವೇಳೆಯೇ ಕೊರೋನಾ ಹರಡಿತ್ತು. ಹೀಗಾಗಿ ಬಹುತೇಕ ಖಾಸಗಿ ಶಾಲೆಗಳು ಆನ್ ಲೈನ್ ತರಗತಿಗಳನ್ನು ಆರಂಭಿಸಿದ್ದವು. ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಹಾಗಾಗಿ ಶಾಲಾ ಶುಲ್ಕ ಕಡಿತಗೊಳಿಸಬೇಕೆಂದು ಪೋಷಕರು ಆಗ್ರಹಿಸಿದ್ದರು. ಇತ್ತ ಖಾಸಗಿ ಶಾಲೆಗಳು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಶುಲ್ಕದ ವಿಷಯಕ್ಕೆ ಹಗ್ಗಜಗ್ಗಾಟ ನಡೆದಿತ್ತು.

ಸದ್ಯ ರಾಜ್ಯದಲ್ಲಿ ಕೊರೋನಾ ಪಸರಿಸುವಿಕೆ ಪ್ರಮಾಣ ಇಳಿಕೆಯಾದ ಹಿನ್ನೆಲೆ ಎಲ್ಲ ಶಾಲೆಗಳು ಪುನಾರಂಭಗೊಂಡಿವೆ.   ಈ ವರ್ಷ ಸರ್ಕಾರ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಿದ್ದು, ಅಕ್ಟೋಬರ್ 25ರಂದು  1 ರಿಂದ 5ನೇ ತರಗತಿವರೆಗಿನ ಶಾಲೆಗಳು ಆರಂಭಗೊಂಡಿವೆ.

ಕೊರೊನಾ (COVID Pandemic) ತೀವ್ರತೆ ಕಡಿಮೆಯಾದ ಹಿನ್ನೆಲೆ ಸರ್ಕಾರ ನವೆಂಬರ್ 8ರಿಂದ  LKG, UKG ಆರಂಭಕ್ಕೆ ಅನುಮತಿ ನೀಡಿದೆ. ಆದ್ರೆ, ಅದಕ್ಕೆ ಕೆಲ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಅದು ಈ ಕೆಳಗಿನಂತಿವೆ.

ಶಿಕ್ಷಕರಿಗೆ ಲಸಿಕೆ ಕಡ್ಡಾಯ:

ಶಿಕ್ಷಕರು, ಸಿಬ್ಬಂದಿ ಹಾಗೂ ಪೋಷಕರು ಕಡ್ಡಾಯವಾಗಿ ಎರಡು ಡೋಸ್‌ ಕೋವಿಡ್‌ ಲಸಿಕೆ (Covid Vaccine) ಪಡೆದಿರಬೇಕು. ಎಲ್ಲರೂ ಮಾಸ್ಕ್‌ (mask) ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು (Social Distancing), ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರ ಒಪ್ಪಿಗೆ ಪತ್ರ ಪಡೆಯುವುದು ಕಡ್ಡಾಯ ಎಂದು ಸರ್ಕಾರ ಸೂಚಿಸಿದೆ.

ಮಕ್ಕಳು ಮನೆಯಿಂದಲೇ ಉಪಾಹಾರ ತರಬೇಕು, ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಅಗತ್ಯಕ್ಕೆ ಅನುಗುಣವಾಗಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಕೈ ತೊಳೆಯಲು ಸಾಬೂನು ವ್ಯವಸ್ಥೆ ಮಾಡಬೇಕು. ಮಕ್ಕಳನ್ನು ಕನಿಷ್ಠ 1 ಮೀಟರ್‌ ಅಂತರದಲ್ಲಿ ಕೂರಿಸಬೇಕು. ಮಕ್ಕಳ ಸಂಖ್ಯೆ ಹೆಚ್ಚಿದ್ದರೆ ತಂಡಗಳನ್ನು ರಚಿಸಿ ಒಂದು ತಂಡ ಒಂದು ದಿನ, ಮತ್ತೊಂದು ತಂಡ ಮರುದಿನ ಬರಲು ಸೂಚಿಸಬೇಕು. ಮಕ್ಕಳು, ಸಿಬ್ಬಂದಿ ಪ್ರತಿ 30 ನಿಮಿಷಕ್ಕೊಮ್ಮೆ ಕೈತೊಳೆಯಬೇಕು. ಕೇಂದ್ರಗಳಿಗೆ ಸಾರ್ವಜನಿಕರ ಸಂದರ್ಶನ ನಿರ್ಬಂಧಿಸಬೇಕು ಎಂದು ಸೂಚಿಸಲಾಗಿದೆ.

ಜ್ವರ, ಕೆಮ್ಮು, ನೆಗಡಿ ಸೇರಿದಂತೆ ಕೋವಿಡ್‌ ಲಕ್ಷಣಗಳಿರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಪೋಷಕರಿಗೆ ಸೂಚಿಸಬೇಕು. ಸೋಂಕಿನ ಲಕ್ಷಣ ಕಂಡು ಬಂದ ಮಕ್ಕಳನ್ನು ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಸೂಚಿಸಬೇಕು ಎಂದು ತಿಳಿಸಲಾಗಿದೆ. ಯಾವುದೇ ಮಗು, ಶಿಕ್ಷಕರು ಇತರೆ ಸಿಬ್ಬಂದಿಗೆ ಕೋವಿಡ್‌ ಸೋಂಕು ದೃಢಪಟ್ಟರೆ, ಇತರೆ ಎಲ್ಲ ವಿದ್ಯಾರ್ಥಿಗಳ ತಪಾಸಣೆ ನಡೆಸಬೇಕು ಎಂದು ಸೂಚಿಸಲಾಗಿದೆ.

ಪೋಷಕರೆ ಗಮನಿಸಿ

- ಅಂಗನವಾಡಿಗಳಲ್ಲಿ ಬೆಳಗ್ಗೆ 10ರಿಂದ 12ರವರೆಗಷ್ಟೇ ತರಗತಿ

- ಎಲ್‌ಕೆಜಿ, ಯುಕೆಜಿಗೆ ಬೆಳಗ್ಗೆ 9.30ರಿಂದ 3.30ರವರೆಗೆ ಕ್ಲಾಸ್‌

- ಶಿಕ್ಷಕರು, ಸಿಬ್ಬಂದಿ, ಪೋಷಕರಿಗೆ 2 ಡೋಸ್‌ ಲಸಿಕೆ ಕಡ್ಡಾಯ

- ಶಾಲೆಗೆ ಬರುವ ಮಕ್ಕಳು ಪೋಷಕರ ಒಪ್ಪಿಗೆ ಪತ್ರ ತರಬೇಕು

- ಮಕ್ಕಳಿಗೆ ಪೋಷಕರು ಮನೆಯಿಂದಲೇ ಉಪಾಹಾರ ಕಳಿಸಬೇಕು

- ಜ್ವರ, ನೆಗಡಿ, ಕೆಮ್ಮು ಇದ್ದರೆ ಶಾಲೆಗೆ ಮಕ್ಕಳನ್ನು ಕಳಿಸುವಂತಿಲ್ಲ

click me!