ನೀಟ್‌ ರದ್ದು ಮಾಡಿ ತನ್ನದೇ ಪರೀಕ್ಷೆಗೆ ಮುಂದಾದ ಕರ್ನಾಟಕ, ಮರು ಪರೀಕ್ಷೆಗೆ ಸುಪ್ರೀಂ ನಿರಾಕರಣೆ

By Gowthami K  |  First Published Jul 23, 2024, 7:09 PM IST

ನೀಟ್‌’ನಲ್ಲಿ ವ್ಯಾಪಕ ಅಕ್ರಮಗಳಾಗಿವೆ ಎಂಬ ಆರೋಪಗಳ ನಡುವೆ  ಕರ್ನಾಟಕ ಸರಕಾರ  ಪರೀಕ್ಷೆಯನ್ನು ರದ್ದುಗೊಳಿಸಲು ಮುಂದಾಗಿದೆ. ಈ ನಡುವೆ ಸುಪ್ರೀಂ ಮರು ಪರೀಕ್ಷೆಗೆ ನಿರಾಕರಿಸಿದೆ.


ಬೆಂಗಳೂರು (ಜು.23): ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸಲಾಗುವ ಪರೀಕ್ಷೆ ‘ನೀಟ್‌’ನಲ್ಲಿ ವ್ಯಾಪಕ ಅಕ್ರಮಗಳಾಗಿವೆ ಎಂಬ ಆರೋಪಗಳ ನಡುವೆ  ಕರ್ನಾಟಕ ಸರಕಾರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌)ಯನ್ನು ರದ್ದುಗೊಳಿಸಲು ಮುಂದಾಗಿದೆ.

ಸೋಮವಾರ ಕ್ಯಾಬಿನೆಟ್‌ನಲ್ಲಿ ಸರಕಾರದ ಈ ಪ್ರಸ್ತಾಪಕ್ಕೆ ಅಂಗೀಕಾರ ದೊರಕಿದೆ. ಉಭಯ ಸದನಗಳಲ್ಲಿ ಸಿದ್ದರಾಮಯ್ಯ ಸರಕಾರ ತನ್ನ ನಿರ್ಣಯವನ್ನು ಅಂಗೀಕರಿಸಲು ಸಿದ್ಧತೆ ನಡೆಸಿದೆ. ನೀಟ್‌ ಪರೀಕ್ಷೆ ಬದಲು ಹಳೆಯ ಪ್ರವೇಶ ಪರೀಕ್ಷೆ ವ್ಯವಸ್ಥೆಗೆ ಮರಳಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಮಸೂದೆ ಸದನದಲ್ಲಿ ಅಂಗೀಕಾರವಾದರೆ ಕರ್ನಾಟಕ ಕೂಡ ತನ್ನದೇ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸಲಿದೆ. ಈ ಮೂಲಕ ತಮಿಳುನಾಡಿನಂತೆಯೇ 12 ನೇ ತರಗತಿಯ ಅಂಕಗಳ ಆಧಾರದ ಮೇಲೆ ರಾಜ್ಯ ಸರ್ಕಾರಗಳು ವೈದ್ಯಕೀಯ ಪ್ರವೇಶವನ್ನು ನಡೆಸಲಿದೆ.

Tap to resize

Latest Videos

undefined

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ರದ್ದುಪಡಿಸಬೇಕು ಮತ್ತು 12 ನೇ ತರಗತಿಯ ಅಂಕಗಳ ಆಧಾರದ ಮೇಲೆ ರಾಜ್ಯ ಸರ್ಕಾರಗಳು ವೈದ್ಯಕೀಯ ಪ್ರವೇಶವನ್ನು ನಡೆಸುವ ಹಿಂದಿನ ವ್ಯವಸ್ಥೆ ಮರುಸ್ಥಾಪಿಸಬೇಕು ಎಂದು ತಮಿಳುನಾಡು ಸರ್ಕಾರ ಕಳೆದ ಜೂನ್ ತಿಂಗಳ ಕೊನೆಯಲ್ಲಿ ಸದನದಲ್ಲಿ ಅಂಗೀಕರಿಸಿದೆ. ಹಲವಾರು ಪ್ರಾದೇಶಿಕ ಪಕ್ಷಗಳು ನಿರ್ಣಯವನ್ನು ಬೆಂಬಲಿಸಿದ್ದವು ಕೂಡ. ನೀಟ್ ನ್ಯಾಯಯುತ ಪರೀಕ್ಷೆಯಲ್ಲ ಎಂಬುದು ತಮಿಳುನಾಡಿನ ವಾದವಾಗಿತ್ತು.

ನೀಟ್‌, 'ಒಂದು ದೇಶ ಒಂದು ಚುನಾವಣೆ’, ಕ್ಷೇತ್ರ ವಿಂಗಡಣೆ ವಿರುದ್ಧ ನಿರ್ಣಯಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಮರು ಪರೀಕ್ಷೆಗೆ ಸುಪ್ರೀಂ ನಿರಾಕರಣೆ: ಇದೆಲ್ಲದರ ನಡುವೆ ನೀಟ್‌ ಮರು ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. NEET-UG ಮರುಪರೀಕ್ಷೆ ನಡೆಸುವಂತೆ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾಯಾಧೀಶರಾದ ಜೆ.ಬಿ. ಪರ್ದೀವಾಲಾ ಹಾಗೂ ಮನೋಜ್‌ ಮಿಶ್ರಾ ಅವರ ಪೀಠ ಪರೀಕ್ಷೆ ನಡೆಸುವಲ್ಲಿ ವ್ಯವಸ್ಥಿತ ದೋಷಗಳಿವೆ. ಇದರಿಂದ 155 ಅಭ್ಯರ್ಥಿಗಳು ಪ್ರಯೋಜನ ಪಡೆದಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ನೀಟ್ ಮರುಪರೀಕ್ಷೆ ಸರಿಯಾದ ಪರಿಹಾರ ಕ್ರಮವಲ್ಲ. ಇದರಿಂದ 24 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಅಲ್ಲದೆ ಅಡ್ಮಿಷನ್, ವೈದ್ಯಕೀಯ ಶಿಕ್ಷಣದ ಕೋರ್ಸ್‌ನ ಮೇಲೆ ಜೊತೆಗೆ ಭವಿಷ್ಯದಲ್ಲಿ ಅರ್ಹ ವೈದ್ಯಕೀಯ ವೃತ್ತಿಪರರ ಲಭ್ಯತೆಯ ಮೇಲೆ ಪರಿಣಾಮ ಬೀರಲಿದೆ ಎಂದು ನ್ಯಾಯಮೂರ್ತಿ ಹೇಳಿದರು.  ಈ ತೀರ್ಪಿಗೆ ಆಕ್ಷೇಪಣೆ ಇದ್ದರೆ ಆಗಸ್ಟ್ 21 ರಂದು  ಈ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಮುಂದೂಡಿದರು.

ರತನ್ ಟಾಟಾ ಕಂಪೆನಿಯ ಸಿಇಓ ಚಾಣಾಕ್ಷತನಕ್ಕೆ 7.21 ಕೋಟಿ ವೇತನ!

ದೇಶಾದ್ಯಂತ ನೀಟ್‌-ಯುಜಿ ಪರೀಕ್ಷೆ ಮೇ 5ರಂದು ನಡೆದಿತ್ತು. ಈ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಂಕ ಹೆಚ್ಚಳ ಸೇರಿದಂತೆ ಹಲವಾರು ಅಕ್ರಮಗಳು ನಡೆದಿವೆ ಎಂಬ ಆರೋಪ ಕೇಳಿಬಂದಿತ್ತು. ನ್ಯಾಯಾಲಯದ ಆದೇಶದ ಮೇರೆಗೆ ಎನ್‌ಟಿಎ ಶನಿವಾರವಷ್ಟೇ ನಗರ ಹಾಗೂ ಪರೀಕ್ಷಾ ಕೇಂದ್ರವಾರು ಫಲಿತಾಂಶವನ್ನು ಪ್ರಕಟಿಸಿತ್ತು.

ಈ ಫಲಿತಾಂಶವನ್ನು ವಿಶ್ಲೇಷಣೆಗೆ ಒಳಪಡಿಸಿದಾಗ, ಅಕ್ರಮ ನಡೆದಿದೆ ಎಂಬ ಆರೋಪ ವ್ಯಕ್ತವಾಗಿದ್ದ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಕಂಡುಬಂದಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ.

click me!