ಜ.16ರಿಂದ ದ್ವಿತೀಯ ಪಿಯು ಪ್ರಿಪರೇಟರಿ ಪರೀಕ್ಷೆ: ಪ್ರಶ್ನೆ ಪತ್ರಿಕೆ ಲೀಕ್‌ ಮಾಡದಂತೆ ಎಚ್ಚರಿಕೆ

By Sathish Kumar KH  |  First Published Dec 28, 2023, 10:51 PM IST

ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜ.16ರಿಂದ ಜ.30ರವರೆಗೆ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸೂಚನೆ ನೀಡಿದೆ.


ಬೆಂಗಳೂರು (ಡಿ.28): ರಾಜ್ಯಾದ್ಯಂತ ಎಲ್ಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜ.16ರಿಂದ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸೂಚನೆ ನೀಡಿದೆ. ಆದರೆ, ಪ್ರಶ್ನೆ ಪತ್ರಿಕೆಯನ್ನು ಜಿಲ್ಲಾ ಮಟ್ಟದಲ್ಲಿಯೇ ಸಿದ್ಧಪಡಿಸಿ ಪರೀಕ್ಷೆ ನಡೆಸಲು ಸೂಚಿಸಿದ್ದು, ಪ್ರಶ್ನೆಪತ್ರಿಕೆ ಲೀಕ್‌ ಆಗದಂತೆ ನೋಡಿಕೊಳ್ಳಲು ಖಡಕ್‌ ಎಚ್ಚರಿಕೆಯನ್ನೂ ನೀಡಿದೆ.

ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜ.16ರಿಂದ 30ರ ವರೆಗೆ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಜಿಲ್ಲಾ ಹಂತದಲ್ಲಿ ನಡೆಸುವಂತೆ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಾಂಡಳಿ ಸೂಚಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಪೂರ್ವಭಾವಿಯಾಗಿ ಜಿಲ್ಲಾ ಹಂತದಲ್ಲಿ ಪ್ರತಿ ವರ್ಷ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಉಪ ನಿರ್ದೇಶಕರು ಜಿಲ್ಲಾ ಮಟ್ಟದಲ್ಲಿ ವೇಳಾಪಟ್ಟಿ ಹಾಗೂ ಮಂಡಳಿ ನಿರ್ದೇಶನದಂತೆ ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳಲ್ಲಿ 70 ಅಂಕಗಳಿಗೆ ಮತ್ತು ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಿಗೆ 80 ಅಂಕಗಳಿಗೆ ನಡೆಸಬೇಕು ಎಂದು ಸೂಚಿಸಲಾಗಿದೆ.

Tap to resize

Latest Videos

undefined

ದ್ವಿತೀಯ ಪಿಯುಸಿ ಮತ್ತು 10ನೇ ತರಗತಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ, ಇಲ್ಲಿದೆ ವಿವರ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿರುವ ಮಾದರಿ ಪ್ರಶ್ನೆಪತ್ರಿಕೆಗಳು ಹಾಗೂ ನೀಲನಕ್ಷೆಗಳ ಆಧಾರದ ಮೇಲೆ ವಿಭಾಗ ಮಟ್ಟದಲ್ಲಿ ಪ್ರಶ್ನೆಪತ್ರಿಕೆ ತಯಾರಿಕಾ ತರಬೇತಿ ಹೊಂದಿದ ಉಪನ್ಯಾಸಕರಿಂದ ಪ್ರಶ್ನೆಪತ್ರಿಕೆ ಸಿದ್ಧಪಡಿಸಬೇಕು. ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಪರೀಕ್ಷಾ ಗೌಪ್ಯತೆಯನ್ನು ಕಾಪಾಡಬೇಕು ಎಂದು ಮಂಡಳಿ ಸೂಚನೆ ನೀಡಿದೆ. ಇನ್ನು  2023-24ರ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ.2ರಿಂದ 22ರ ವರೆಗೆ ನಡೆಸಲಾಗುತ್ತಿದೆ. ತಾತ್ಕಾಲಿಕ ವೇಳಾಪಟ್ಟಿಯನ್ನು ಈಗಾಗಲೇ ಮಂಡಳಿ ಪ್ರಕಟಿಸಿದ್ದು, ಶೀಘ್ರದಲ್ಲಿಯೇ ಅಂತಿಮ ವೇಳಾಪಟ್ಟಿಯೂ ಬಿಡುಗಡೆ ಆಗಲಿದೆ.

ಹೈಸ್ಕೂಲ್‌ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿಯ ಖುಲ್ಲಂ ಖುಲ್ಲಾ ರೊಮ್ಯಾನ್ಸ್: ಅಮಾನತು ಮಾಡಿದ ಶಿಕ್ಷಣ ಇಲಾಖೆ!

ಕಳೆದ ಮೂರ್ನಾಲ್ಕು ವರ್ಷಗಳಿಂದ ಕೋವಿಡ್‌ ಸಾಂಕ್ರಾಮಿಕ ರೋಗದ ಕಾರಣದಿಂದ ದ್ವಿತೀಯ ಪಿಯು ವಿದ್ಯಾರ್ಥಿಗಳು ಸರಿಯಾಗಿ ಪರೀಕ್ಷೆಗಳನ್ನು ಎದುರಿಸಲು ಹಾಗೂ ಸಿದ್ಧತೆಯನ್ನು ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ, 2023-24ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಕಾರ್ಯಕ್ರಮದಂತೆ ಪಠ್ಯಕ್ರಮಮ, ಪ್ರಯೋಗಾಲಯ ಎಲ್ಲವನ್ನೂ ಕಲಿತಿದ್ದಾರೆ. ನಿರಂತರ ಅಭ್ಯಾಸದಲ್ಲಿ ತೊಡಗಿದ್ದು, ಶಿಕ್ಷಣದಲ್ಲಿ ಹಿಂದಿನ ಸ್ಥಿತಿಯನ್ನು ತಲುಪಿದ್ದಾರೆ. ಇನ್ನು ಶಿಕ್ಷಣ ಗುಣಮಟ್ಟದ ಕಡೆಗೂ ಆದ್ಯತೆ ನೀಡಿರುವ ಸರ್ಕಾರ ಮಕ್ಕಳಿಗೆ ಪರೀಕ್ಷಾ ತಯಾರಿಗಾಗಿ ಪೂರ್ವ ಸಿದ್ಧತಾ ಪರೀಕ್ಷೆ, ಮುಖ್ಯ ಪರೀಕ್ಷೆಗಳನ್ನು ಹಂತ ಹಂತವಾಗಿ ನಡೆಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯು ಮಕ್ಕಳಿಗೆ ಜನವರಿ 16ರಿಂದ ಜ.30ರವರೆಗೆ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸುವಂತೆ ತಿಳಿಸಿದೆ. ಈ ಮೂಲಕ ಪಿಯು ಅಂತಿಮ ಪರೀಕ್ಷೆ ಎದುರಿಸಲು ಮಕ್ಕಳನ್ನು ಸಿದ್ಧಗೊಳಿಸಲು ಮುಂದಾಗಿದೆ.

click me!