ಸಕ್ಕರೆ ಕೊಬ್ಬಿನಂಶದ ಕಾರಣ ಹೇಳಿ ಶಾಲಾ ಮಕ್ಕಳಿಗೆ ನೀಡುವ ಚಿಕ್ಕಿಗೂ ಗೋತಾ!

Published : Feb 18, 2025, 10:39 AM ISTUpdated : Feb 18, 2025, 10:45 AM IST
 ಸಕ್ಕರೆ ಕೊಬ್ಬಿನಂಶದ ಕಾರಣ ಹೇಳಿ ಶಾಲಾ ಮಕ್ಕಳಿಗೆ ನೀಡುವ ಚಿಕ್ಕಿಗೂ ಗೋತಾ!

ಸಾರಾಂಶ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಶೇಂಗಾ ಚಿಕ್ಕಿ ವಿತರಣೆಯನ್ನು ನಿಲ್ಲಿಸಿ, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ನೀಡಲು ಶಿಕ್ಷಣ ಇಲಾಖೆ ಸೂಚಿಸಿದೆ. ಶೇಂಗಾ ಚಿಕ್ಕಿಯಲ್ಲಿ ಕೊಬ್ಬು ಮತ್ತು ಸಕ್ಕರೆ ಅಂಶ ಹೆಚ್ಚಿರುವುದು ಹಾಗೂ ಸಂಗ್ರಹಣಾ ಸಮಸ್ಯೆಗಳಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಶೇಂಗಾ ಚಿಕ್ಕಿ ನೀಡುವುದನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಿ, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣನ್ನು ಮಾತ್ರ ನೀಡಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಪ್ರಸ್ತುತ ಮೊಟ್ಟೆ ಸೇವಿಸದ ಮಕ್ಕಳಿಗೆ ಅದರ ಬದಲಾಗಿ ಚಿಕ್ಕಿ ನೀಡಲಾಗುತ್ತಿದೆ. ಆದರೆ, ಶೇಂಗಾ ಚಿಕ್ಕಿಯಲ್ಲಿ ಕೊಬ್ಬಿನ ಅಂಶ ಹೆಚ್ಚು ಮತ್ತು ಸಕ್ಕರೆ ಅಂಶ ಅಧಿಕ. ಜತೆಗೆ, ಸರಿಯಾದ ಕ್ರಮದಲ್ಲಿ ಸಂಗ್ರಹಿಸದಿದ್ದಾಗ ಸೇವನೆಗೆ ಯೋಗ್ಯವಿಲ್ಲದಂತಾಗಿ ಮಕ್ಕಳ ಆರೋಗ್ಯಕ್ಕೆ ಹಾನಿ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮೊಟ್ಟೆ ಬದಲಾಗಿ ಬಾಳೆಹಣ್ಣನ್ನು ಮಾತ್ರ ವಿತರಿಸಲು ಕ್ರಮ ವಹಿಸುವಂತೆ ಇಲಾಖೆಯ ಕಲಬುರಗಿ ಅಪರ ಆಯುಕ್ತರು ಕೋರಿದ್ದರು. ಇದೇ ರೀತಿಯ ಆಗ್ರಹ ಇನ್ನೂ ಕೆಲ ಜಿಲ್ಲೆಗಳಿಂದಲೂ ಬಂದಿತ್ತು.

ಈ ಕಾರಣದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇನ್ನು ಮುಂದೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕಾಂಶ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಬೇಕು. ಚಿಕ್ಕಿ ನೀಡುವುದನ್ನು ಸ್ಥಗಿತಗೊಳಿಸಬೇಕೆಂದು ಸೂಚಿಸಿದೆ. ಈ ಸಂಬಂಧ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು ಇಲಾಖಾ ಆಯುಕ್ತರಿಗೆ ನಿರ್ದೇಶನ ನೀಡಿದೆ.

ಚಿತ್ರದುರ್ಗ: ಶೇಂಗಾ ಚಿಕ್ಕಿ ಸೇವಿಸಿ 25 ಮಕ್ಕಳು ಅಸ್ವಸ್ಥ

Shivamogga: ಸರ್ಕಾರಿ ಶಾಲೆ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ
 

PREV
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ