ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ನಿಷೇಧದ ಆದೇಶ ಹಿಂಪಡೆದ ಸರ್ಕಾರ!

By Sathish Kumar KH  |  First Published Feb 15, 2024, 6:36 PM IST

ರಾಜ್ಯದ ಎಲ್ಲ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿನ ಧಾರ್ಮಿಕ ಹಬ್ಬಗಳ ಆಚರಣೆ ನಿಷೇಧದ ಆದೇಶವನ್ನು ಸರ್ಕಾರ ಕೆಲವೇ ಗಂಟೆಗಳಲ್ಲಿ ಹಿಂಪಡೆದುಕೊಂಡಿದೆ.


ಬೆಂಗಳೂರು (ಫೆ.15): ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೊಳಪಡುವ ಎಲ್ಲ ವಸತಿ ಶಾಲೆ ಹಾಗೂ ವಸತಿ ಕಾಲೇಜುಗಳಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ ಎಂದು ಹೊರಡಿಸಿದ ಆದೇಶಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಹೊರಡಿಸಿದ್ದ ಆದೇಶವನ್ನು ಕೆಲವೇ ಗಂಟೆಗಳಲ್ಲಿ ವಾಪಸ್ ಪಡೆಯಲಾಗಿದೆ.

ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಈ ಸುತ್ತೋಲೆಯನ್ನು ಹೊರಡಿಸಿತ್ತ. ಆದರೆ, ರಾಷ್ಟ್ರೀಯ ಹಬ್ಬಗಳು, ನಾಡಹಬ್ಬ ಮತ್ತು ರಾಷ್ಟ್ರೀಯ ಮತ್ತು ನಾಡಿನ ಗಣ್ಯ ವ್ಯಕ್ತಿಗಳ ಜಯಂತಿಗಳನ್ನು ಮಾತ್ರ ಆಚರಣೆ ಮಾಡಬೇಕು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಆದೇಶ ಹೊರಡಿಸಲಾಗಿತ್ತು. ಈ ಈ ಮೂಲಕ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೊಳಪಡುವ ಎಲ್ಲಾ ವಸತಿ ಶಾಲಾ- ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕು ಎಂದು ಸೂಚಿಸಲಾಗಿತ್ತು.

Tap to resize

Latest Videos

undefined

ರಾಜ್ಯದ ಎಲ್ಲ ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಶಾರದಾಪೂಜೆ, ಗಣೇಶೋತ್ಸವ ನಿಷೇಧ

ಈ ಮೂಲಕ  ಸರ್ಕಾರದ ಸೂಚಿಸಿದ ಹಬ್ಬಗಳನ್ನು ಬಿಟ್ಟು ಇತರೆ ಹಬ್ಬಗಳಾದ ಸರಸ್ವತಿ-ಶಾರದಾ ಪೂಜೆ, ಗಣೇಶೋತ್ಸವ, ಯುಗಾದಿ, ರಂಜಾನ್, ಕ್ರಿಸ್‌ಮಸ್, ಈದ್ ಮಿಲಾದ್, ಸಂಕ್ರಾಂತಿ ಇತರೆ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ ಎಂದು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಇದಕ್ಕೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಲವೇ ಗಂಟೆಗಳಲ್ಲಿ ಇದನ್ನು ಹಿಂಪಡೆಯಲಾಗಿದೆ.

click me!