ಸೆ. 6ರಿಂದ 6-8ನೇ ತರಗತಿಗಳು ಆರಂಭ: ವೇಳಾಪಟ್ಟಿ, ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

By Suvarna News  |  First Published Aug 31, 2021, 9:45 PM IST

* 6 ರಿಂದ 8 ನೇ ತರಗತಿವರೆಗೆ ಶಾಲೆ ಆರಂಭ ಹಿನ್ನೆಲೆ
* ಮಾರ್ಗಸೂಚಿ ಬಿಡುಗಡೆ ‌ಮಾಡಿದ ಶಿಕ್ಷಣ ಇಲಾಖೆ
* ಸೆಪ್ಟೆಂಬರ್ 6 ರಿಂದ ಎರಡನೇ ಹಂತದ ಶಾಲೆ ಪ್ರಾರಂಭ


ಬೆಂಗಳೂರು, (ಆ.31): ರಾಜ್ಯದಲ್ಲಿ 6-8ನೇ ತರಗತಿಯನ್ನ ಸೆಪ್ಟೆಂಬರ್ 6 ರಿಂದ ಪುನಾರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಇಂದು (ಆ.31) ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ.

6ರಿಂದ 8ನೇ ತರಗತಿಗಳನ್ನೂ ಪ್ರಾರಂಭಿಸಲು ಸಿಕ್ತು ಸರ್ಕಾರ ಗ್ರೀನ್ ಸಿಗ್ನಲ್: ಎಂದಿನಿಂದ?

Tap to resize

Latest Videos

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಶೇಕಡಾ 20 ಗಿಂ ಕಡಿಮೆ ಇರುವ ತಾಲೂಕು, ವಲಯಗಳಲ್ಲಿ (ಕೇರಳ ರಾಜ್ಯದೊಡನೆ ಗಡಿ ಹಂಚಿಕೊಂಡಿರುವ ತಾಲೂಕುಗಳನ್ನ ಹೊರತುಪಡಿಸಿ) 9 ಮತ್ತು 10ನೇ ತರಗತಿಗಳ ಜೊತೆಗೆ 6 ರಿಂದ 8ನೇ ತರಗತಿಗಳನ್ನ ಪೂರ್ಣ ಪ್ರಮಾಣದಲ್ಲಿ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

ಮಾರ್ಗಸೂಚಿ

* ಪಾಸಿಟಿವಿಟಿ ಶೇ.2 ಕ್ಕಿಂತ ಕಡಿಮೆ ಇರುವ ತಾಲೂಕು ವಲಯಗಳಲ್ಲಿ ಶಾಲೆ ಆರಂಭ
* ಈಗಾಗಲೇ ಬಿಡುಗಡೆ ಮಾಡಲಾಗಿರುವ SOP ಪಾಲಿಸುವುದು
* ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ
* ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ಧೃಢಿಕರಿಸಬೇಕು
* ಕುಡಿಯುವ ‌ನೀರು ಹಾಗೂ ಆಹಾರ ಮನೆಯಿಂದಲೇ ತರಬೇಕು
* ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು
* ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ
* ಆನ್ ಲೈನ್ ತರಗತಿಗೂ ಅವಕಾಶ
* ಕೇರಳ ಗಡಿಭಾಗಕ್ಕೆ ಹೊಂದಿಕೊಂಡಿರುವ  ತಾಲ್ಲೂಕು ಹಾಗೂ ವಲಯ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಶಾಲೆ ಪ್ರಾರಂಭ ಮಾಡಬೇಕು

* 6 ರಿಂದ 8 ನೇ ತರಗತಿ ನಿರ್ವಹಣೆ ವೇಳಾಪಟ್ಟಿ
* ಪಾಳಿ ಪದ್ಧತಿಯಲ್ಲಿ ಮಕ್ಕಳಿಗೆ ‌ಪಾಠ
* ಸೋಮವಾರ ದಿಂದ ಶುಕ್ರವಾರದವರೆಗೆ ಮಾತ್ರ ತರಗತಿ ನಡೆಸಬೇಕು
*8ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ತರಗತಿ ನಡೆಸುವುದು, ಮಧ್ಯಾಹ್ನ 2 ಗಂಟೆಯಿಂದ  4:30 ರ ತರಗತಿ ನಡೆಸುವುದು
* ಬೆಳಿಗ್ಗೆ 10: 30 ರಿಂದ ಮಧ್ಯಾಹ್ನ 1:30 ರವರೆಗೆ
* 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು

click me!