ಪದವಿ ಪೂರ್ವ ಕಾಲೇಜು ಪ್ರಾರಂಭ: ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

Published : Aug 18, 2021, 10:43 PM IST
ಪದವಿ ಪೂರ್ವ ಕಾಲೇಜು ಪ್ರಾರಂಭ: ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ಸಾರಾಂಶ

* ಕಾಲೇಜು ಆರಂಭಿಸುವ ಕುರಿತು ಸರ್ಕಾರದಿಂದ ಗ್ರೀನ್ ಸಿಗ್ನಲ್ * ಆಗಸ್ಟ್ 23ರಿಂದ  ಪದವಿ ಪೂರ್ವ ಕಾಲೇಜುಗಳು ಆರಂಭ * ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ 

ಬೆಂಗಳೂರು, (ಆ.18): ಈಗಾಗಲೇ 9ರಿಂದ 12ನೇ ತರಗತಿಗಳನ್ನು  ಆಗಸ್ಟ್ 23ರಿಂದ ಆರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

2021-22ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳ ಆರಂಭಿಸಲು, ಅನುಸರಿಸಬೇಕಾದಂತ ಮಾರ್ಗಸೂಚಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

1ರಿಂದ 8ನೇ ತರಗತಿ ಪ್ರಾರಂಭದ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟನೆ

ಶೇಕಡಾ 2 ಕ್ಕಿಂತ ಕಡಿಮೆ ಕೊರೋನಾ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ತೆರೆಯಲು ಸೂಚಿಸಲಾಗಿದೆ. ಏಕಕಾಲದಲ್ಲಿ ಪ್ರಥಮ, ದ್ವಿತೀಯ ಪಿಯು ತರಗತಿ ನಡೆಸುವುದು ಎಂದು ಹೇಳಲಾಗಿದೆ. 

ವಾರದ ಮೊದಲ 3ದಿನ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡಬೇಕು. ಶೇಕಡಾ 50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರು ಆಗಬೇಕು. ಉಳಿದ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಮನೆಯಲ್ಲೇ ಆನ್​​ಲೈನ್​ ತರಗತಿ ನಡೆಸುವುದು. ಗುರುವಾರ, ಶುಕ್ರವಾರ, ಶನಿವಾರ ಉಳಿದ ಮಕ್ಕಳಿಗೆ ಕ್ಲಾಸ್​ ನಡೆಸುವ ಬಗ್ಗೆ ಸೂಚನೆ ಕೊಡಲಾಗಿದೆ.

ಆಗಸ್ಟ್ 23 ರಿಂದ ಪಿಯು ಕಾಲೇಜು ತರಗತಿಗಳು ಆರಂಭವಾಗಲಿದೆ. ಏಕಕಾಲದಲ್ಲಿ ಪ್ರಥಮ, ದ್ವಿತೀಯ ಪಿಯುಸಿ ತರಗತಿ ನಡೆಸುವುದು ಎಂದು ಹೇಳಲಾಗಿದೆ. ವಾರದ ಮೊದಲ 3ದಿನ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಮತ್ತು ನಂತರ ಶೇಕಡಾ 50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರು ಆಗಬಹುದು.

ಮಾರ್ಗಸೂಚಿ
* ವಿಶಾಲ ಕೊಠಡಿಗಳಿದ್ದರೆ ವಾರದ ಎಲ್ಲಾ ದಿನ ಭೌತಿಕ ತರಗತಿ ನಡೆಸಬಹುದು
* ಕಾಲೇಜು ಆವರಣದಲ್ಲಿ ದೈಹಿಕ ಅಂತರ ಕಡ್ಡಾಯವಾಗಿರುತ್ತೆ
* ಪ್ರಿನ್ಸಿಪಾಲ್, ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು
* ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಪೋಷಕರ ಒಪ್ಪಿಗೆ ಬೇಕು
* ವಿದ್ಯಾರ್ಥಿಗಳಿಗೆ ಕೊವಿಡ್​​-19 ನೆಗೆಟಿವ್ ವರದಿ ಕಡ್ಡಾಯ
* ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕೊವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ಗಮನಿಸಬೇಕು
* ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ
* ಕೆಮ್ಮುವಾಗ, ಸೀನುವಾಗ ಕರವಸ್ತ್ರ ಅಡ್ಡ ಹಿಡಿಯಬೇಕು, ಎಲ್ಲೆಂದರಲ್ಲಿ ಉಗುಳಬಾರದು
* ಕಾಲೇಜು ಆರಂಭಕ್ಕೆ ಮುನ್ನ ಇಡೀ ಆವರಣ ಹಾಗೂ ಕೊಠಡಿಗಳನ್ನ ಸ್ಯಾನಿಟೈಸ್ ಮಾಡಬೇಕು
* ಕೊವಿಡ್​ಗೆ ಬಳಸಿದ ಕಟ್ಟಡಗಳನ್ನ ಎರೆಡೆರಡು ಬಾರಿ ಸ್ಯಾನಿಟೈಸ್ ಮಾಡಬೇಕು
* ಸಾಮೂಹಿಕ ಪ್ರಾರ್ಥನೆ, ಕ್ರೀಡೆ ಎಲ್ಲಾ ಚಟುವಟಿಕೆಗಳಿಗೆ ಕೋವಿಡ್ ನಿಯಮ ಕಡ್ಡಾಯ
* ಪ್ರವೇಶ ಧ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಇರಬೇಕು

PREV
click me!

Recommended Stories

20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಧಾನ, ಇಬ್ಬರು ಮಕ್ಕಳಿಗೆ ಮರಣೋತ್ತರ ಪ್ರಶಸ್ತಿ ಕೊಟ್ಟಿದ್ಯಾಕೆ?
ಸೆರೆಬ್ರಲ್ ಪಾಲ್ಸಿ ನರದ ಸಮಸ್ಯೆ ಇದ್ದರೂ ಎಲ್ಲವನ್ನು ಮೆಟ್ಟಿನಿಂತು ಮೊದಲ ಪ್ರಯತ್ನದಲ್ಲೇ UPSC ಪಾಸಾದ ಮನ್ವೇಂದ್ರ!