ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್, ಶೂ, ಸಾಕ್ಸ್‌ಗೆ ಹಣ ರಿಲೀಸ್..

By Suvarna News  |  First Published Jul 8, 2022, 7:38 PM IST

* ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್
* ಶೂ, ಸಾಕ್ಸ್‌ಗೆ ಹಣ ರಿಲೀಸ್
* ಈ ವರ್ಷ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಇಲ್ಲ ಎಂದಿದ್ದ ಸಚಿವ


ಬೆಂಗಳೂರು, (ಜುಲೈ.08): ಈ ವರ್ಷ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಇಲ್ಲ ಎನ್ನುವ ಸುದ್ದಿ ಭಾರೀ ಸದ್ದು ಮಾಡಿದ್ದು, ಇದರ ವಿರುದ್ಧ ಇದನ್ನು ವಿರೋಧ ಪಕ್ಷ ಕಾಂಗ್ರೆಸ್, ಬೊಮ್ಮಾಯಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ಸಾರ್ವಜನಿಕ ವಲಯದಿಂದ ಭಾರಿ ಟೀಕೆಗಳು ವ್ಯಕ್ತವಾಗುತ್ತಿವೆ. ಇದರಿಂದ ಎಚ್ಚೆತ್ತುಕೊಂಡ ಸಿಎಂ ಬಸವರಾಜ ಬೊಮ್ಮಾಯಿ, ಕೂಡಲೇ ಶಾಲಾ ಮಕ್ಕಳಿಗೆ ಶೂಸ್​ ಮತ್ತು ಸಾಕ್ಸ್ ಹಂಚಿಕೆಗೆ  ಹಣ ಬಿಡುಗಡೆ ಮಾಡಿದ್ದಾರೆ.

ಹೌದು...ಶಾಲಾ ಮಕ್ಕಳಿಗೆ ಶೂಸ್​ ಮತ್ತು ಸಾಕ್ಸ್ ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Tap to resize

Latest Videos

ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

Raichur: ಸರ್ಕಾರಿ ಶಾಲೆಗಳ ಮಕ್ಕಳಿಗಾಗಿ ಬಸ್ ಖರೀದಿಗೆ ಸರ್ಕಾರ ಚಿಂತನೆ: ಸಚಿವ ಬಿ.ಸಿ.ನಾಗೇಶ್

2022-23ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ  ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ (ಎಸ್‌ಡಿಎಂಸಿ) ಮೂಲಕ 'ಶೂ ಮತ್ತು ಸಾಕ್ಸ್' ಖರೀದಿಸಿ, ವಿತರಿಸಲು ರಾಜ್ಯ ಸರ್ಕಾರ 132 ಕೋಟಿ ಬಿಡುಗಡೆಗೆ ಅನುಮೋದನೆ ನೀಡಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಸಹ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಡಿಕೆಶಿಗೆ ಟಾಂಗ್ ಕೊಟ್ಟ ಸಿಎಂ
ಶಾಲಾ ಮಕ್ಕಳಿಗೆ ಶೂಸ್​, ಸಾಕ್ಸ್ ಕೊಡಲು ಸರ್ಕಾರದ ಬಳಿ ಹಣವಿಲ್ಲದಿದ್ದರೇ, ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಬಳಿ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ನೀಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ಈ ಹಿಂದೆ ಕೋವಿಡ್ ಸಮಯದಲ್ಲಿ ಭಿಕ್ಷೆ ಬೇಡಿ ಜನರಿಗೆ ಕೊಡುತ್ತೇವೆ ಎಂದು ಅವರು ಹೇಳಿದ್ದರು‌. ಆ ಹಣ ಎಲ್ಲಿ ಎಂದು ಕೇಳಿದರು. ಎಂದಿನಂತೆಯೇ ಇದು ಕೂಡ ಎಂದು ಟಾಂಗ್ ನೀಡಿದರು.

ಶಿಕ್ಷಣ ಸಚಿವ ನಾಗೇಶ್ ಅವರು ಮಕ್ಕಳು ಶಾಲೆಗೆ ಹೋಗುವುದು ಪಾಠ ಕಲಿಯಲೇ ಹೊರತು ಶೂಸ್​ ಹಾಕಿಕೊಳ್ಳಲು ಅಲ್ಲ ಎಂದಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಡಿಕೆಶಿ ಭಿಕ್ಷೆ ಎತ್ತಿ ನೀಡುವ ಮಾತುಗಳನಾಡಿದ್ದರು. 

ಡಿಕೆ ಶಿವಕುಮಾರ್ ಹೇಳಿದ್ದೇನು?
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸಿಎಸ್ಆರ್ ಜಾರಿಗೆ ತಂದಿದ್ದು, ರಾಜ್ಯದ ಎಲ್ಲ ಸರ್ಕಾರಿ ಶಾಲಾ ಮಕ್ಕಳಿಗೆ ನಾವೇ ಶೂ ಹಾಗೂ ಸಾಕ್ಸ್ ಗಳನ್ನು ವಿತರಿಸುತ್ತೇವೆ. ಇದು ಕರ್ನಾಟಕದ ಸ್ವಾಭಿಮಾನ, ಗೌರವ ಹಾಗೂ ಮಕ್ಕಳ ಬದುಕಿನ ವಿಚಾರ. ಇದರ ಜವಾಬ್ದಾರಿಯನ್ನು ನಾನು ಹೊರಲು ಸಿದ್ಧನಿದ್ದೇನೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಕಾರ್ಯಕ್ರಮ ರೂಪಿಸಲು ಸಿದ್ಧವಿದೆ' ಎಂದು ಹೇಳಿದ್ದರು.
 

click me!