Latest Videos

9ನೇ ತರಗತಿ ಪಠ್ಯದಿಂದ ವೀರಶೈವ ಪದ ತೆಗೆದುಹಾಕಿರುವುದು ಗೊತ್ತಿಲ್ಲ; ಬಸವರಾಜ ಬೊಮ್ಮಾಯಿ

By Sathish Kumar KHFirst Published Jun 30, 2024, 7:32 PM IST
Highlights

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 9ನೇ ತರಗತಿ ಪಠ್ಯಪುಸ್ತಕದಲ್ಲಿದ್ದ ವೀರಶೈವ ಪದ ತೆಗೆದುಹಾಕಿರುವುದನ್ನು ನಾನು ಗಮನಿಸಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರು (ಜೂ.30): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಠ್ಯಪುಸ್ತಕ ಪರಿಷ್ಕರಣೆಯನ್ನು ನಿರಂತರವಾಗಿ ಮಾಡುತ್ತಿದೆ. ಅದರಲ್ಲಿ 9ನೇ ತರಗತಿ ಪಠ್ಯಪುಸ್ತಕದಲ್ಲಿ ಅಳವಡಿಕೆ ಮಾಡಿದ್ದ ವೀರಶೈವ ಪದವನ್ನು ತೆಗೆದುಹಾಕಿರುವ ಬಗ್ಗೆ ಮಾಹಿತಿಯಿಲ್ಲ. ಹಾಗೇನಾದರೂ ಮಾಡಿದ್ದರೆ ಸರ್ಕಾರದ ಕಿವಿ ಹಿಂಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗದಗ ನಗರದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ವೀರಶೈವ ಪದ ತೆಗೆದು ಹಾಕಿರುವ ಬಗ್ಗೆ ನೋಡಿಲ್ಲ‌‌. 9ನೇ ತರಗತಿ ಪಠ್ಯದಲ್ಲಿ ಅಳವಡಿಕೆ ಮಾಡಲಾಗಿದ್ದ ವೀರಶೈವ ಎಂಬ ಪದವನ್ನು ತೆಗೆದಿದ್ದಾರೆ ಅಂತ ಹೇಳುತ್ತಿದ್ದಾರೆ, ಆದರೆ ಈ ಬಗ್ಗೆ ನಾನು ಸೂಕ್ಷ್ಮವಾಗಿ ಗಮನಿಸಿಲ್ಲ. ಹಾಗೇನಾದರೂ  ಆಗಿದ್ದರೆ, ಸರಿಪಡಿಸಿ ಅಂತಾ ರಾಜ್ಯ ಸರ್ಕಾರವನ್ನು  ಆಗ್ರಹಿಸುತ್ತೇನೆ. ಇನ್ನು ಕಾಂಗ್ರೆಸ್ ನ ಯಾರೂ ನಮ್ಮನ್ನು ಸಂಪರ್ಕ ಮಾಡಿಲ್ಲ‌‌. ಆದರೆ, ಆಂತರಿಕವಾಗಿ ಕಾಂಗ್ರೆಸ್ ನಲ್ಲಿ ವೈರುದ್ಧ ಇರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದರು.

ಆತ್ಮನಿರ್ಭರ ಯೋಜನೆಯಡಿ ವಿಐಎಸ್‌ಎಲ್ ಕಾರ್ಖಾನೆ ಉಳಿಸಲು ಅವಕಾಶವಿದೆ; ಕೇಂದ್ರ ಸಚಿವ ಕುಮಾರಸ್ವಾಮಿ

ರಾಜ್ಯದಲ್ಲಿ ಸಿಎಂ, ಡಿಸಿಎಂ ವಿಷಯವಾಗಿ ಅವರ ಅಭಿಪ್ರಾಯ ಹೇಳುತ್ತಾರೆ. ಆದರೆ, ರಾಜಕಾರಣಕ್ಕೆ ವಿಧಿವಿಧಾನಗಳಿವೆ. ಸ್ವಾಮೀಜಿಗಳ ಹೇಳಿಕೆ ಬಗ್ಗೆ ನಾನು ವ್ಯಾಖ್ಯಾನ ಮಾಡುವುದಿಲ್ಲ. ಆದರೆ, ಯಾರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು. ಮೂರು ನಾಲ್ಕು ಡಿಸಿಎಂಗಳನ್ನು ಮಾಡಬೇಕಾ ಅನ್ನುವುದು ಕಾಂಗ್ರೆಸ್ ಗೆ ಬಿಟ್ಟಿದ್ದು‌. ಎಷ್ಟು ಜನರಿಗೆ ಡಿಸಿಎಂ ಮಾಡ್ತಾರೆ ಕಾದು ನೋಡೋಣ. ಅವರ ಆಂತರಿಕ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಡಿಸಿಎಂ ವಿಚಾರವಾಗಿ ಹೊಸ ವ್ಯಾಖ್ಯಾನ ಮಾಡುವುದು ಕಾಂಗ್ರೆಸ್ ನಲ್ಲಿ ನಡೆದಿದೆ. ಅಸಲಿ‌ ರಾಜಕಾರಣ ಬೇರೆನೇ ಇದೆ. ಕಾದು ನೋಡೋಣ ಎಂದು ಹೇಳಿದರು.

ಡೆಂಗ್ಯೂ ಮುನ್ನೆಚ್ಚರಿಕೆ ವಹಿಸಿ:  ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಹಾವಳಿ ಕುರಿತು ಮಾತನಾಡಿದ ಅವರು, ಒಂದು ಕಾಲದಲ್ಲಿ ಹೇಗೆ ಕಾಲರಾ, ಮಲೇರಿಯಾ ಹೇಗೆ ಬಂದಿತ್ತೊ ಹಾಗೆ ಈಗಾ ಡೆಂಗ್ಯೂ ಬಂದಿದೆ. ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳ ಬೇಕು. ಅಧಿಕಾರಿಗಳು ಯಾವುದೇ ಮುಂಜಾಗ್ರತ ಕ್ರಮ ತೆಗೆದು ಕೊಳ್ಳುವುದಿಲ್ಲ, ಹೀಗಾಗಿ ಡೆಂಗ್ಯೂ ಉಲ್ಬಣವಾಗುತ್ತದೆ. ಆಗ ಮೇಲಾಧಿಕಾಗಳ ಗಮನಕ್ಕೆ ತರುತ್ತಾರೆ. ನಾನು ಡಿಸಿ, ಡಿಎಚ್ಓ , ಡಿ.ಎಸ್ ಗೆ ಆಗ್ರಹ ಮಾಡುತ್ತೇನೆ. ಡೆಂಗ್ಯೂ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.

ಕಳೆದ ವರ್ಷಕ್ಕಿಂತ ದುಪ್ಪಟ್ಟು ತುಂಬಿದ ಕೆಆರ್‌ಎಸ್ ಜಲಾಶಯ; 18 ಸಾವಿರ ಕ್ಯೂಸೆಕ್ ಒಳಹರಿವು

ರಾಜ್ಯದಲ್ಲಿ ಡೆಂಗ್ಯೂ ಡೇತ್ ಕೇಸ್ ಮರೆ ಮಾಚುತ್ತಿದ್ದಾರೆ ಎಂಬ ಆರೋಪದ‌ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡೆಂಗ್ಯೂವಿನಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಅಧಿಕಾರಿಗಳು ಸರಕಾರಿ ಆಸ್ಪತ್ರೆಯ ಸಂಖ್ಯೆ ಮಾತ್ರ ಗಣನೆಗೆ ತೆಗೆದುಕೊಳ್ಳುತ್ತಿದ್ದಾರೆ. ಡೆಂಗ್ಯೂ ಸೊಂಕಿತರು ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಹೀಗಾಗಿ, ಖಾಸಗಿ ಆಸ್ಪತ್ರೆಗಳಲ್ಲಿನ ಅವುಗಳನ್ನು ಲೆಕ್ಕಕ್ಕೆ ತೆಗೆದು ಕೊಳ್ಳಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

click me!