ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಕಠಿಣ ನಿಯಮ: ಇಲ್ಲಿದೆ ಖಡಕ್ ಆದೇಶ!

By Sathish Kumar KHFirst Published Oct 6, 2024, 3:48 PM IST
Highlights

ಕರ್ನಾಟಕ ಶಿಕ್ಷಣ ಕಾಯ್ದೆಯನ್ವಯ ರಾಜ್ಯದ ಎಲ್ಲಾ ಶಾಲೆಗಳು ರಾಜ್ಯ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ಶಾಲೆಗಳು ಸಹ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಖರೀದಿಸಬೇಕು. ಉಲ್ಲಂಘಿಸುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಬೆಂಗಳೂರು (ಅ.06): ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್-36ರಂತೆ ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಮಾನ್ಯತೆ/ಮಾನ್ಯತೆ ನವೀಕರಣ ನೀಡುವಾಗ ಮಾನ್ಯತೆ ಪ್ರಮಾಣ ಪತ್ರದಲ್ಲಿ 'ಶಾಲೆಯು ಸಂಯೋಜಿತವಾಗಿರುವ ಶೈಕ್ಷಣಿಕ ರಾಜ್ಯ ಪಠ್ಯಕ್ರಮ ಹಾಗೂ ರಾಜ್ಯ ಪಠ್ಯಪುಸ್ತಕಗಳನ್ನು ಅನುಸರಿಸುವುದು ಎಂದು ಷರತ್ತು ವಿಧಿಸಲಾಗಿರುತ್ತದೆ. ಆದರೆ, ಕೆಲವು ಶಾಲೆಗಳು ರಾಜ್ಯದ ಪಠ್ಯಕ್ರಮ ಅನುಸರಣೆ ಮಾಡದಿರುವುದು ಕಂಡುಬಂದಿದ್ದು, ಕೂಡಲೇ ಕಾನೂನು ಕ್ರಮ ಎದುರಿಸಲು ಸಜ್ಜಾಗಿ ಎಂದು ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ ರವಾನಿಸಲಾಗಿದೆ. 

ಕರ್ನಾಟಕ ಶಿಕ್ಷಣ ಕಾಯ್ದೆ- 1983ರ ಕಾಯ್ದೆ, ಕನ್ನಡ ಕಲಿಕಾ ಅಧಿನಿಯಮ-2015 ಮತ್ತು ಕನ್ನಡ ಭಾಷಾ ಕಲಿಕಾ ನಿಯಮಗಳು- 2017ರ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1) ರಂತೆ ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳ ಸಂಬಂಧದಲ್ಲಿ ಪಾಠಕ್ರಮ, ಪಠ್ಯವಸ್ತು ಹಾಗೂ ಪಠ್ಯಪುಸ್ತಕಗಳನ್ನು ನಿಗದಿಪಡಿಸಬಹುದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಿಕ್ಷಣ ಸಂಸ್ಥೆಗಳು [ವರ್ಗೀಕರಣ, ನಿಯಂತ್ರಣ ಮತ್ತು ಪಠ್ಯಕ್ರಮದ ಪ್ರಿಸ್ಕ್ರಿಪ್ಷನ್ ಇತ್ಯಾದಿ] ನಿಯಮಗಳು-1995ರ 19ನೇ ನಿಯಮದ ಉಪನಿಯಮ-3 ರಂತೆ ರಾಜ್ಯಪಠ್ಯ ಕ್ರಮವನ್ನು ಅನುಸರಿಸುತ್ತಿರುವ ಎಲಾ ಶಿಕ್ಷಣ ಸಂಸ್ಥೆಗಳು ರಾಜ್ಯ ಸರ್ಕಾರದ ಸಕ್ಷಮ ಪ್ರಾಧಿಕಾರವು ನಿಗದಿಪಡಿಸುವ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನೇ ಕಡ್ಡಾಯವಾಗಿ ಅನುಸರಿಸಬೇಕು. ಹೆಚ್ಚುವರಿಯಾಗಿ ಯಾವುದೇ ಇತರ ಪಠ್ಯಕ್ರಮ ಅಥವಾ ಪಠ್ಯಪುಸ್ತಕಗಳನ್ನು ಅನುಸರಿಸುವಂತಿಲ್ಲ.

Latest Videos

ಇದನ್ನೂ ಓದಿ: ರಾಜ್ಯದ 50% ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಆಗಿಲ್ಲ: ನವೀಕರಣಕ್ಕೆ ಗಡುವು ಕೊಟ್ಟ ಸರ್ಕಾರ

ಅದರಂತೆ ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್-36ರಂತೆ ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಮಾನ್ಯತೆ/ಮಾನ್ಯತೆ ನವೀಕರಣ ನೀಡುವಾಗ ಮಾನ್ಯತೆ ಪ್ರಮಾಣ ಪತ್ರದಲ್ಲಿ "ಶಾಲೆಯು ಸಂಯೋಜಿತವಾಗಿರುವ ಶಾಲೆಯು ಸಂಯೋಜಿತವಾಗಿರುವ ಶೈಕ್ಷಣಿಕ ರಾಜ್ಯ ಪಠ್ಯಕ್ರಮ ಹಾಗೂ ರಾಜ್ಯ ಪಠ್ಯಪುಸ್ತಕಗಳನ್ನು ಅನುಸರಿಸುವುದು” ಎಂದು ಷರತ್ತು ವಿಧಿಸಲಾಗಿರುತ್ತದೆ. 2010-11ನೇ ಸಾಲಿನಿಂದ ರಾಜ್ಯ ಪಠ್ಯಕ್ರಮದಂತೆ ಪಠ್ಯಪುಸ್ತಕಗಳ ರಚನೆ, ಉತ್ಪಾದನೆ ಮತ್ತು ವಿತರಣೆಗೆ ಸಂಬಂಧಿಸಿದ ಸಂಪೂರ್ಣ ಕಾರ್ಯವನ್ನು ಕರ್ನಾಟಕ ಪಠ್ಯಪುಸ್ತಕ ಸಂಘ (ರಿ) ಇವರು ನಿರ್ವಹಿಸಲು ಸರ್ಕಾರವು ಆದೇಶಿಸಿರುತ್ತದೆ.

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖಾ ಅನುಮತಿಯೊಂದಿಗೆ ರಾಜ್ಯದಲ್ಲಿ ನಡೆಯುತ್ತಿರುವ ರಾಜ್ಯ ಪಠ್ಯಕ್ರಮದ ಎಲ್ಲಾ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು 1 ರಿಂದ 10ನೇ ತರಗತಿಯ SATS ಲ್ಲಿರುವ ವಿದ್ಯಾರ್ಥಿಗಳ ದಾಖಲಾತಿಯಂತೆ ತಂತ್ರಾಂಶದ ಮೂಲಕ ಬೇಡಿಕೆಯನ್ನು ದಾಖಲಿಸಬೇಕು. ಖಾಸಗಿ ಅನುದಾನರಹಿತ ಶಾಲೆಗಳು ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಪಠ್ಯಪುಸ್ತಕಗಳನ್ನು ಖರೀದಿಸಿ ರಾಜ್ಯ ಪಠ್ಯಪುಸ್ತಕಗಳನ್ನೇ ಅನುಸರಿಸಲು ತಮ್ಮ ವ್ಯಾಪ್ತಿಯ ಎಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲು ತಿಳಿಸಿದೆ.

ಇದನ್ನೂ ಓದಿ: ಸಿನಿಮಾದ ಐಟಂ ಸಾಂಗ್ ಮಕ್ಕಳಿಗೆ ತೋರಿಸಬೇಡಿ: ಪೋಷಕರಿಗೆ ಎಚ್ಚರಿಕೆ ಕೊಟ್ಟ ಮನೋವಿಜ್ಞಾನಿಗಳು!

ಉಲ್ಲೇಖ-3 ರಂತೆ ಇತರೆ ಪಠ್ಯಕ್ರಮ ಅನುಸರಿಸುವ ಶಾಲೆಗಳು ಕನ್ನಡ ಭಾಷಾ ಪಠ್ಯಪುಸ್ತಕಗಳ ಬೇಡಿಕೆ ದಾಖಲಿಸಿ ಖರೀದಿಸಿ ಅನುಸರಿಸುವಂತೆ ತಮ್ಮ ವ್ಯಾಪ್ತಿಯ ಎಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲು ತಿಳಿಸಿದೆ. ಒಂದು ವೇಳೆ ಯಾವುದೇ ರಾಜ್ಯ ಪಠ್ಯಕ್ರಮದ ಖಾಸಗಿ ಶಾಲೆಯು ಸದರಿ ಷರತ್ತನ್ನು ಉಲ್ಲಂಘಿಸಿದಲ್ಲಿ ಅಂತಹ ಶಾಲೆಯ ವಿರುದ್ಧ ನಿಯಮಾನುಸಾರ ಕ್ರಮ ವಹಿಸಲು ತಿಳಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

click me!