ಶಿಕ್ಷಕರ ವರ್ಗಾವಣೆ : ಸರ್ಕಾರ ಹೈಕೋರ್ಟ್‌ಗೆ

By Kannadaprabha News  |  First Published Jan 25, 2021, 9:24 AM IST

ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. 


 ಬೆಂಗಳೂರು (ಜ.25):  ಶಿಕ್ಷಕರ ವರ್ಗಾವಣೆ ಅಧಿಸೂಚನೆ ರದ್ದುಪಡಿಸಿರುವ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಕೆಲ ದಿನಗಳಲ್ಲೇ ಮೇಲ್ಮನವಿ ಸಲ್ಲಿಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕೆಎಟಿ ಶಿಕ್ಷಕರ ವರ್ಗಾವಣೆ ಅಧಿಸೂಚನೆ ರದ್ದುಪಡಿಸಿದ್ದರಿಂದ ಮುಂದೇನು ಮಾಡಬೇಕೆಂಬ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್‌ ಸೇರಿದಂತೆ ಉನ್ನತ ಅಧಿಕಾರಿಗಳು ರಾಜ್ಯ ಅಡ್ವೊಕೇಟ್‌ ಜನರಲ್‌ ಅವರನ್ನು ಖುದ್ದು ಭೇಟಿ ಮಾಡಿ ಅಭಿಪ್ರಾಯ ಪಡೆದಿದ್ದಾರೆ. ಅವರು ಮೇಲ್ಮನವಿ ಸಲ್ಲಿಸಲು ಸ್ಪಷ್ಟಸಲಹೆಯನ್ನೂ ಇಲಾಖೆಗೆ ನೀಡಿದ್ದಾರೆ. ಅದರಂತೆ ಶಿಕ್ಷಣ ಇಲಾಖೆಯು ಇನ್ನೊಂದು ವಾರದಲ್ಲಿ ಮೇಲ್ಮನವಿ ಸಲ್ಲಿಸಲು ಅಗತ್ಯ ಸಿದ್ಧತೆಯಲ್ಲಿ ತೊಡಗಿದೆ ಎಂದು ಇಲಾಖೆಯ ಉನ್ನತ ಮೂಲಗಳು ಖಚಿತ ಪಡಿಸಿವೆ.

Latest Videos

undefined

ಎಸ್ಸೆಸ್ಸೆಲ್ಸಿ, ಪಿಯು ವೇಳಾಪಟ್ಟಿ ಸಿದ್ಧ : ಶೀಘ್ರ ಪ್ರಕಟ ಸಾಧ್ಯತೆ ...

ಶಿಕ್ಷಣ ಇಲಾಖೆಯು ನವೆಂಬರ್‌ನಲ್ಲಿ ಅಧಿಸೂಚನೆ ಹೊರಡಿಸಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿತ್ತು. ಆದರೆ, ಅಧಿಸೂಚನೆಯಲ್ಲಿ 2019-20ರಲ್ಲಿ ‘ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಶಿಕ್ಷೆ’ಗೆ ಒಳಗಾದ ಶಿಕ್ಷಕರಿಗೆ ಪ್ರಸಕ್ತ ಸಾಲಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ವಿಶೇಷ ಆದ್ಯತೆ ನೀಡಲು ಮುಂದಾಗಿರುವ ಇಲಾಖಾ ಕ್ರಮ ಪ್ರಶ್ನಿಸಿ ಕೆಲ ಶಿಕ್ಷಕರು ಕೆಎಟಿ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಕೆಎಟಿ ಬೆಂಗಳೂರು ಪೀಠ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದವರಿಗೆ ಕೌನ್ಸೆಲಿಂಗ್‌ನಲ್ಲಿ ಮೊದಲ ಆದ್ಯತೆ ನೀಡಲು ‘ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ-2020’ಯಲ್ಲಿ ಅವಕಾಶ ಇಲ್ಲ ಎಂದು ಡಿ75 ಸಾವಿರ ಶಿಕ್ಷಕರಿಗೆ ನಿರಾಸೆ:.28ರಂದು ಅಧಿಸೂಚನೆಯನ್ನೇ ರದ್ದುಪಡಿಸಿತ್ತು.

ಕೆಎಟಿ ಆದೇಶದಿಂದಾಗಿ, ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿ, ಕೌನ್ಸೆಲಿಂಗ್‌ನ ನಿರೀಕ್ಷೆಯಲ್ಲಿದ್ದ 75 ಸಾವಿರಕ್ಕೂ ಹೆಚ್ಚು ಶಿಕ್ಷಕರಲ್ಲಿ ತೀವ್ರ ನಿರಾಶೆ ಉಂಟಾಗಿದೆ. ಅಲ್ಲದೆ, ಈ ಬಾರಿಯೂ ವರ್ಗಾವಣೆ ಪ್ರಕ್ರಿಯೆ ನೆನೆಗುದಿಗೆ ಬೀಳಬಹುದೆಂಬ ಆತಂಕವೂ ಎದುರಾಗಿದೆ.

ಖಾಸಗಿ ಶಾಲಾ ಮಕ್ಕಳ ಪೋಷಕರೇ ಗಮನಿಸಿ : ಸಿದ್ಧವಾಗಿದೆ ಹೊಸ ಸೂತ್ರ ...

ವರ್ಗಾವಣೆ ಪ್ರಕ್ರಿಯೆ ಕೆಎಟಿ ಮೆಟ್ಟಿಲೇರಲು ಕಾಯ್ದೆ ರೂಪಿಸುವ ಮತ್ತು ಅಧಿಸೂಚನೆ ಹೊರಡಿಸುವ ವೇಳೆ ಅಧಿಕಾರಿಗಳು ತೋರಿಸಿದ ನಿರ್ಲಕ್ಷ್ಯವೂ ಕಾರಣ. ಕಾಯ್ದೆಯಲ್ಲಿ ಇಲ್ಲದಿದ್ದರೂ ಕಡ್ಡಾಯ ವರ್ಗಾವಣೆಗೊಳಗಾದವರಿಗೆ ಕೌನ್ಸೆಲಿಂಗ್‌ನಲ್ಲಿ ವಿಶೇಷ ಆದ್ಯತೆ ಕಲ್ಪಿಸಲು ಹೊರಟಿದ್ದೆ ಇಷ್ಟೆಲ್ಲ ಸಮಸ್ಯೆಗೆ ಕಾರಣ ಎಂಬ ಆರೋಪ ಶಿಕ್ಷಕರ ವಲಯದಲ್ಲಿ ಕೇಳಿಬಂದಿದೆ.

ಡಿ.28ಕ್ಕೆ ವರ್ಗಾವಣೆ ರದ್ದುಪಡಿಸಿದ್ದ ಕೆಎಟಿ

2019-20ರಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದವರಿಗೆ ಮೊದಲು ಕೌನ್ಸೆಲಿಂಗ್‌ ನಡೆಸಿ ವರ್ಗಾವಣೆಯಲ್ಲಿ ಆದ್ಯತೆ ನೀಡುವ ನಿಯಮ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ-2020’ಯಲ್ಲಿ ಇಲ್ಲ. ಆದರೆ, ನ.11ರಂದು ಹೊರಡಿಸಿರುವ ವರ್ಗಾವಣೆ ಅಧಿಸೂಚನೆಯಲ್ಲಿ ಈ ಅವಕಾಶ ಕಲ್ಪಿಸಲಾಗಿದೆ. ಕಾಯ್ದೆಯಲ್ಲಿ ಇಲ್ಲದಿದ್ದರೂ, 2019-20ರ ಸಾಲಿನವರಿಗೆ ಆದ್ಯತೆ ನೀಡುವುದಾದರೆ ನಮಗೂ ಆದ್ಯತೆ ನೀಡಬೇಕು’ ಎಂದು 2016-17ರಲ್ಲಿ ಹೆಚ್ಚುವರಿ ವರ್ಗಾವಣೆಗೆ ಒಳಗಾಗಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಲೇಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಬಿ.ಎನ್‌. ಮಹೇಶ್ವರಪ್ಪ ಸೇರಿ ಎಂಟು ಶಿಕ್ಷಕರು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಕೆಎಟಿ ಪೀಠ ವರ್ಗಾವಣೆ ಅಧಿಸೂಚನೆಯನ್ನು ಡಿ.28ರಂದು ರದ್ದುಪಡಿಸಿತ್ತು. ಈ ಮಧ್ಯೆ, ಇದೇ ವಿಚಾರವಾಗಿ ಕಲಬುರಗಿ ವಿಭಾಗದ ಪೀಠವೂ ಡಿ.26ರಂದು ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿದ್ದು ವಿಚಾರಣೆಯನ್ನು ಫೆ.17ಕ್ಕೆ ಮುಂದೂಡಿದೆ.

click me!