ಬೆಂಗಳೂರು (ಮಾ.22): ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿದ್ದ ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಗೆ ಸೂಚಿಸಿದೆ. ಬೋರ್ಡ್ ಎಕ್ಸಾಂ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠದ ಮೆಟ್ಟಲೇರಿತ್ತು. ಇದೀಗ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಬೋರ್ಡ್ ಎಕ್ಸಾಂಗೆ ಅಸ್ತು ಎಂದಿದೆ. ಉಳಿದ ವಿಷಯಗಳ ಪರೀಕ್ಷೆ ನಡೆಸಲು ತುರ್ತು ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ನ್ಯಾ.ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರಿಂದ ಈ ತೀರ್ಪು ಹೊರಬಿದ್ದಿದೆ.
11 ನೇ ತರಗತಿಯ ಎಲ್ಲಾ ಪರೀಕ್ಷೆಗಳು ಈಗಾಗಲೇ ಮುಗಿದಿವೆ. 5,8,9ನೇ ತರಗತಿಗಳಲ್ಲಿ ಕೂಡ ಎರಡು ವಿಷಯಗಳ ಪರೀಕ್ಷೆ ಮುಗಿದಿದೆ. ತೀರ್ಪು ಹಿನ್ನೆಲೆ ಉಳಿದ ವಿಷಯಗಳ ಪರೀಕ್ಷೆಗಳನ್ನ ಸೋಮವಾರದಿಂದ ಆರಂಭಗೊಳಿಸುವ ಸಾಧ್ಯತೆ ಇದೆ. ಪರೀಕ್ಷೆ ದಿನಾಂಕ ನಿಗದಿಪಡಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಲಿದೆ. ರಾಜ್ಯದ 30 ಲಕ್ಷಕ್ಕೂ ಹೆಚ್ಚು ಮಕ್ಕಳ ಶೈಕ್ಷಣಿಕ ಭವಿಷ್ಯವನ್ನ ನಿರ್ಧರಿಸುವ ತೀರ್ಪು ಇದಾಗಿತ್ತು.
undefined
ಪಿಯು-2 ಪರೀಕ್ಷೆ ಪೂರ್ಣಕ್ಕೆ ಮೊದಲೇ ಮಾದರಿ ಉತ್ತರ ಪ್ರಕಟ..!
ಏನಿದು ಮೌಲ್ಯಾಂಕನ ಗೊಂದಲ
- ಕರ್ನಾಟಕ ಶಿಕ್ಷಣ ಕಾಯಿದೆಯಡಿ ರಾಜ್ಯ ಶಿಕ್ಷಣ ಇಲಾಖೆ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿತ್ತು
- 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು
- ಆದ್ರೆ ಈ ಸುತ್ತೋಲೆ ಖಾಸಗಿ ಶಾಲೆಗಳ ಕೆಂಗಣ್ಣಿಗೆ ಗುರಿಯಾಗಿತ್ತು
- ಸರ್ಕಾರದ ಸುತ್ತೋಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 30 ಮತ್ತು ಕರ್ನಾಟಕ ಶಿಕ್ಷಣ ಕಾಯಿದೆಯ ವಿವಿಧ ಸೆಕ್ಷನ್ಗಳ ಉಲ್ಲಂಘನೆಯಾಗಿದೆ
- ಹೀಗಾಗಿ ಬೋರ್ಡ್ ಪರೀಕ್ಷೆ ರದ್ದುಪಡಿಸಬೇಕು ಅಂತ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೆಟ್ಟಿಲೇರಿತ್ತು
- ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ರದ್ದುಪಡಿಸಿ ಆದೇಶಿಸಿತ್ತು
- ಆದ್ರೆ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು
- ಮೇಲ್ಮನವಿ ವಿಚಾರಣೆ ನಡೆಸಿದ್ದ ದ್ವಿಸದಸ್ಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿತ್ತು
- ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಮೇಲ್ಮನವಿ ಸಲ್ಲಿಸಿತ್ತು
- ದ್ವಿಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್, ದ್ವಿಸದಸ್ಯ ಪೀಠದ ಮುಂದೆ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಿ, ಸೂಕ್ತ ಆದೇಶ ನೀಡುವಂತೆ ಆದೇಶಿಸಿತ್ತು
ಕೆಪಿಎಸ್‌ಸಿಯಿಂದ ಮುಂದುವರೆದ ವಿಳಂಬ ನೀತಿ, ಪರೀಕ್ಷೆ ಆಗಿ 2 ತಿಂಗಳಾದರೂ ಬಾರದ ಫಲಿತಾಂಶ!
ಏನಿದು ಮೌಲ್ಯಾಂಕನ ಪರೀಕ್ಷೆ
- ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಸರ್ಕಾರ ಮೌಲ್ಯಾಂಕನ ಪರೀಕ್ಷೆ ನಡೆಸಲು ನಿರ್ಧಾರ
- ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನು ದಾನರಹಿತ ಸೇರಿ 69,137 ಶಾಲೆಗಳ 28.14 ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ
ಪರೀಕ್ಷಾ ಪ್ರಕ್ರಿಯೆ
- 5ನೇ ತರಗತಿಗೆ ಪ್ರಥಮ ಭಾಷೆ, ದ್ವಿತೀಯ ಭಾಷೆ, ಗಣಿತ ಮತ್ತು ಪರಿಸರ ಅಧ್ಯಯನ ಸೇರಿ 4 ವಿಷಯಗಳು
- 8 ಮತ್ತು 9ನೇ ತರಗತಿಗೆ ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆ
- 5ನೇ ತರಗತಿಗೆ ಪ್ರತೀ ವಿಷಯಕ್ಕೆ 50 ಅಂಕಗಳಿಗೆ ಮೌಲ್ಯಾಂಕನ ನಡೆಸಲಾಗುವುದು
- 40 ಅಂಕಗಳಿಗೆ ಲಿಖಿತ ಪರೀಕ್ಷೆಗೆ ರಾಜ್ಯ ಹಂತದಿಂದ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ನೀಡಲಿದೆ
- ಉಳಿದ 10 ಅಂಕಗಳಿಗೆ ಮೌಖಿಕ ಪರೀಕ್ಷೆಯನ್ನು ಶಾಲಾ ಹಂತ ದಲ್ಲಿಯೇ ನಿರ್ವಹಿಸಬೇಕು
- 8ನೇ ತರಗತಿಗೆ 60 ಅಂಕಗಳಿಗೆ ಮೌಲ್ಯಾಂಕನ ನಡೆಸಲಾಗುವುದು