ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಮಹತ್ವದ ಸೂಚನೆ ಕೊಟ್ಟ ಹೈಕೋರ್ಟ್

By Suvarna NewsFirst Published Jul 12, 2021, 2:57 PM IST
Highlights

* ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ಹೈಕೋರ್ಟ್ ಮಹತ್ವದ ಸೂಚನೆ
* ಪರೀಕ್ಷೆ ನಡೆಸುವುದು ಒಳ್ಳೆಯದು ಎಂದು ಕರ್ನಾಟಕ ಹೈಕೋರ್ಟ್
* 10ನೇ ತರಗತಿ ಪರೀಕ್ಷೆರದ್ದುಪಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ಬೆಂಗಳೂರು, (ಜುಲೈ.12) : ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿಸಿದೆ.

ಕೋವಿಡ್ ಹಿನ್ನೆಲೆಯಲ್ಲಿ ದ್ವೀತಿಯ ಪಿಯು ಪರೀಕ್ಷೆ ರದ್ದುಪಡಿಸಿರುವಂತೆ 10ನೇ ತರಗತಿ ಪರೀಕ್ಷೆಗಳನ್ನೂ ಸಹ ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಕೊಟ್ಟ ಸಚಿವ ಸುರೇಶ್‌ ಕುಮಾರ್‌

ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕೋವಿಡ್ ಸುರಕ್ಷಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಈ ಬಾರಿ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳು ವಿಭಿನ್ನ ಮಾದರಿಯಲ್ಲಿ ನಡೆಯಲಿದೆ. ಮೂರು ವಿಷಯಗಳಿಗೆ ಒಂದು ಪರೀಕ್ಷೆ ಎಂಬಂತೆ ಎರಡು ದಿನ ಪರೀಕ್ಷೆ ನಡೆಸಲಾಗುತ್ತದೆ. ಜುಲೈ 19 ರಂದು ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ.

click me!