Hijab Row ಹಿಜಾಬ್ ವಿವಾದದ ವಾದ-ಪ್ರತಿವಾದ ಮುಕ್ತಾಯ: ಕುತೂಹಲ ಮೂಡಿಸಿದ ಹೈಕೋರ್ಟ್ ತೀರ್ಪು

Published : Feb 25, 2022, 05:44 PM ISTUpdated : Feb 25, 2022, 05:46 PM IST
Hijab Row ಹಿಜಾಬ್ ವಿವಾದದ ವಾದ-ಪ್ರತಿವಾದ  ಮುಕ್ತಾಯ: ಕುತೂಹಲ ಮೂಡಿಸಿದ ಹೈಕೋರ್ಟ್ ತೀರ್ಪು

ಸಾರಾಂಶ

* ಕರ್ನಾಟಕದಲ್ಲಿ ಹಿಜಾಬ್ ವಿವಾದ * ಕೋರ್ಟ್‌ನಲ್ಲಿ ಹಿಜಾಬ್ ವಿವಾದದ ವಾದ-ಪ್ರತಿವಾದ  ಮುಕ್ತಾಯ * ಕುತೂಹಲ ಮೂಡಿಸಿದ ಹೈಕೋರ್ಟ್ ತೀರ್ಪು

ಬೆಂಗಳೂರು, (ಫೆ.25): ಕರ್ನಾಟಕದ ಉಡುಪಿಯಲ್ಲಿ ಶುರುವಾಗಿ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ ಹಿಜಾಬ್ ಪ್ರಕರಣ(ಃಇಜಾಬ ಋಒಡ) ಕ್ರೈಮಾಕ್ಸ್ ಹಂತಕ್ಕೆ ಬಂದು ನಿಂತಿದೆ.

ಹೌದು... ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳ ವಿಚಾರಣೆ  ಇಂದು(ಶುಕ್ರವಾರ) ಪೂರ್ಣಗೊಂಡಿದ್ದು, ಕರ್ನಾಟಕ ಹೈಕೋರ್ಟ್ (Karnataka High Court ) ತ್ರಿಸದಸ್ಯ ಪೂರ್ಣ ಪೀಠ,  ತೀರ್ಪನ್ನು ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ತೀರ್ಪು ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದೆ.

Hijab Row : ಹಿಜಾಬ್ ಧಾರಣೆ ಕಡ್ಡಾಯ ಎಂದಾದರೆ  ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಅಲ್ಲವೇ? 

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಖಾಜಿ ಜೈಬುನ್ನೀಸಾ ಮೊಹಿಯಿದ್ದೀನ್ ಅವರನ್ನು ಒಳಗೊಂಡ ಪೂರ್ಣ ಪೀಠ 11 ದಿನಗಳ ಕಾಲ ವಿಚಾರಣೆ ನಡೆಸಿದೆ. ಈಗ ಪ್ರತಿವಾದಿಗಳು ಹಾಗೂ ಮಧ್ಯಪ್ರವೇಶಕರಿಗೆ ಲಿಖಿತ ವಾದಗಳನ್ನು ಸಲ್ಲಿಕೆ ಮಾಡಲು ಕೋರ್ಟ್ ಅವಕಾಶ ನೀಡಿದೆ.

ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಫೆ.5ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದರು. ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದ ಪೀಠ  ವಿಚಾರಣೆ ನಡೆಸಿತು. 

ಪೂರ್ಣ ಪೀಠ ಸುಮಾರು 11 ದಿನಗಳ ಕಾಲ ವಿಚಾರಣೆ ನಡೆಸಿತು. ಹಿಜಾಬ್‌ಗೆ ಅವಕಾಶ ನೀಡಬೇಕೆಂದು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ಪರ ದೇವದತ್ ಕಾಮತ್ ಸೇರಿದಂತೆ ಇತರೆ ಹಿರಿಯ ವಕೀಲರು ವಾದ ಮಂಡಿಸಿದರು. ಇನ್ನು  ಸರ್ಕಾರ ಪರ ವಕೀಲ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಪ್ರತಿವಾದ ಮಾಡಿದರು.

ಹಿಜಾಬ್ ಧರಿಸಿದ್ದಕ್ಕಾಗಿ ಸರ್ಕಾರಿ ಪಿಯು ಕಾಲೇಜಿನ ಪ್ರವೇಶವನ್ನು ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ ಮುಸ್ಲಿಂ ಬಾಲಕಿ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿ ವಿಚಾರಣೆಯ ವಾದ-ಪ್ರತಿವಾದಗಳನ್ನ ಕರ್ನಾಟಕ ಹೈಕೋರ್ಟ್  ಆಲಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.

ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಕೆ:
ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಉಡುಪಿಯ ಕಾಲೇಜಿನ ಶಿಕ್ಷಕರು ಹಿಜಾಬ್​ಗೆ ಅನುಮತಿ ನೀಡದ್ದಕ್ಕೆ ಕೆಲ ಸಂಘಟನೆಗಳು ಬೆದರಿಕೆ ಹಾಕಿದ ಬಗ್ಗೆ ನೀಡಲಾಗಿದ್ದ ದೂರಿನ ಮೇರೆಗೆ ಒಂದು ಎಫ್​ಐಆರ್ ದಾಖಲಿಸಲಾಗಿದೆ. ಈ ಎಫ್​ಐಆರ್​ಗೆ ಸಂಬಂಧಿಸಿದ ದಾಖಲೆಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುತ್ತಿದ್ದೇವೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಮಧ್ಯಂತರ ಆದೇಶ ನೀಡಿದ್ದ ಕೋರ್ಟ್
ಈ ಹಿಂದೆ ಹೈಕೋರ್ಟ್‌ ತ್ರಿದಸ್ಯ ಪೀಠವು ಮೌಖಿಕ ಸಂದೇಶವನ್ನು ನೀಡಿದ್ದು, ಅಂತಿಮ ತೀರ್ಪಿನ ವರೆಗೆ ಶಾಲೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮದ ಗುರುತುಗಳನ್ನು ಬಳಸುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡಿತ್ತು. ಆದರೂ ಸಹ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡೇ ಕಾಲೇಜಿಗಳಿಗೆ ಆಗಮಿಸಿದ್ದಾರೆ. ಅಲ್ಲದೇ ಹಿಜಾಬ್‌ಗೆ ಅವಕಾಶ ನೀಡಬೇಕೆಂದು ಕಾಲೇಜುಗಳ ಮುಂದೆ ಪ್ರತಿಭಟನೆ ಮಾಡಿದ್ದಾರೆ.

ಕುತೂಹಲ ಮೂಡಿಸಿದ ಕೋರ್ಟ್ ತೀರ್ಪು
ಕರ್ನಾಟಕದಲ್ಲಿ ಹಿಜಾಬ್ ಕಿಚ್ಚು (Hijab Row) ಮುಂದುವರೆದಿದ್ದು, ಹಿಜಾಬ್ ತೆಗೆಯುವುದಿಲ್ಲ. ಪ್ರತ್ಯೇಕ ಕೊಠಡಿಯಲ್ಲಿ ಪಾಠ ಕೇಳಲ್ಲ. ಎಲ್ಲರ ಜೊತೆ ಹಿಜಾಬ್ ಹಾಕಿಕೊಂಡೆ ಪಾಠ ಪ್ರವಚನ ಕೇಳುತ್ತೇವೆ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಕರ್ನಾಟಕ ಹೈಕೋರ್ಟ್  ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತ್ತಿದ್ದು, ತೀರ್ಪು ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದೆ.

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ