ಇನ್ಫೋಸಿಸ್ ಜೊತೆ ಉನ್ನತ ಶಿಕ್ಷಣ ಇಲಾಖೆ ಒಡಂಬಡಿಕೆ, 12300 ಉಚಿತ ಕೋರ್ಸ್

By Suvarna NewsFirst Published Sep 6, 2022, 4:46 PM IST
Highlights

ಇನ್ಫೋಸಿಸ್ ಜೊತೆ ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಒಡಂಬಡಿಕೆ ಮಾಡಿಕೊಂಡಿದ್ದು, ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್  ವ್ಯವಸ್ಥೆಯಡಿ 12,300 ಕೋರ್ಸುಗಳು ಉಚಿತವಾಗಿ ಲಭ್ಯವಿವೆ. 

ವರದಿ. ಸುರೇಶ್ ಎ ಎಲ್. ಏಷ್ಯಾ ನೆಟ್ ಸುವರ್ಣ ನ್ಯೂಸ್ 

ಬೆಂಗಳೂರು (ಸೆ.6): ವಿದ್ಯಾರ್ಥಿಗಳನ್ನು ವೃತ್ತಿ ಮತ್ತು ಬದುಕಿಗೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ರಾಜ್ಯ ಸರ್ಕಾರದ ಎಲ್ಲ ವಿ.ವಿ.ಗಳು, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಜತೆ ಮಂಗಳವಾರ ಒಡಂಬಡಿಕೆಗೆ ಅಂಕಿತ ಹಾಕಿದವು. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಈ ಕಾರ್ಯಕ್ರಮ ನಡೆಯಿತು.  ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ ಮತ್ತು ಇನ್ಫೋಸಿಸ್‌ನ ತಿರುಮಲ ಆರೋಹಿ ಒಡಂಬಡಿಕೆ ವಿನಿಮಯ ಮಾಡಿಕೊಂಡರು. ಉಳಿದಂತೆ ಬೆಂಗಳೂರು, ಮಂಗಳೂರು, ಮೈಸೂರು, ಕರ್ನಾಟಕ, ತುಮಕೂರು, ಗುಲ್ಬರ್ಗ, ಕುವೆಂಪು, ಸಂಗೀತ, ಜಾನಪದ ಸೇರಿದಂತೆ ಎಲ್ಲಾ 24 ವಿ.ವಿ.ಗಳ ಕುಲಪತಿಗಳು ಹಾಜರಿದ್ದು, ಒಡಂಬಡಿಕೆ ಹಸ್ತಾಂತರಿಸ ಪ್ರಕ್ರಿಯೆ ನಡೆಯಿತು. ಇನ್ಫೋಸಿಸ್ ಸಂಸ್ಥೆಯು ಸಮಾಜದ ಒಳಿತಿಗಾಗಿ ತನ್ನ ಜ್ಞಾನ ಪರಿಣತಿಯನ್ನು ಹಂಚಿಕೊಳ್ಳಲು ಮುಂದೆ ಬಂದಿದೆ. ಆಧುನಿಕ ತಂತ್ರಜ್ಞಾನದ ನೆರವಿನಿಂದ ಅದು ರೂಪಿಸಿರುವ ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್  ವ್ಯವಸ್ಥೆಯಡಿ 12,300 ಕೋರ್ಸುಗಳು ಉಚಿತವಾಗಿ ಲಭ್ಯವಿವೆ.

6ನೇ ತರಗತಿಯಿಂದ ಪಿಎಚ್ ಡಿ ವರೆಗೆ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಈ ಕೋರ್ಸ್‌ ಗಳನ್ನು ಆನ್ ಲೈನ್ ನಲ್ಲಿ ಕಲಿಯಬಹುದು. ಜತೆಗೆ, ಅದು 800ಕ್ಕೂ ಹೆಚ್ಚು ಶಿಕ್ಷಣ ಪರಿಣತರ ನೆರವನ್ನು ಉನ್ನತ ಶಿಕ್ಷಣ ಕಲಿಯುತ್ತಿರುವ ವಿದ್ಯಾರ್ಥಿಗಳು ಮತ್ತು ಬೋಧಕ ವೃಂದಕ್ಕೆ ನೀಡಲಿದೆ' ಇದಕ್ಕಾಗಿ  ಇನ್ಫೋಸಿಸ್ ಸುಮಾರು ನೂರು ಕೋಟಿ ಖರ್ಚು‌ ಮಾಡಿದೆ. ಈ ಒಡಂಬಡಿಕೆಯಿಂದಾಗಿ ನಮ್ಮ ವಿ.ವಿ.ಗಳು ಸ್ಪ್ರಿಂಗ್‌ಬೋರ್ಡ್ ವೇದಿಕೆಯಲ್ಲಿರುವ ಕೋರ್ಸುಗಳನ್ನು ಪರಿಣಮಕಾರಿಯಾಗಿ ಬಳಸಿಕೊಳ್ಳಲು ಅವಕಾಶ ಸಿಗಲಿದೆ.

ಜಾಗತಿಕ ಗುಣಮಟ್ಟದ ಶಿಕ್ಷಣ ಇಂದಿನ ತುರ್ತುಗಳಲ್ಲಿ ಒಂದಾಗಿದೆ. ಇದು ಸಾಧ್ಯವಾಗಬೇಕೆಂದರೆ ದಕ್ಷ ಬೋಧಕ ವೃಂದ ಮತ್ತು ಸಮಕಾಲೀನ ಅಗತ್ಯಗಳಿಗೆ ಸ್ಪಂದಿಸುವ ಪಠ್ಯಕ್ರಮ ಅತ್ಯಗತ್ಯವಾಗಿವೆ. ಹೀಗಾಗಿ ಸರಕಾರವು ಉನ್ನತ ಶಿಕ್ಷಣ ವಲಯವನ್ನು ಅಂತಾರಾಷ್ಟ್ರೀಕರಣ ಪ್ರಕ್ರಿಯೆಗೆ ತೆರೆದಿದ್ದು, ಜಗತ್ತಿನ ಅತ್ಯುತ್ತಮ ಸಂಸ್ಥೆಗಳು ಮತ್ತು ಉದ್ಯಮಗಳೊಂದಿಗೆ ಒಡಂಬಡಿಕೆಗಳನ್ನು ಮಾಡಿಕೊಳ್ಳುತ್ತಿದೆ.

ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್‌ಗೆ ಅಮೃತ ಮಹೋತ್ಸವ ಯಾತ್ರೆ

ಈ ನಿಟ್ಟಿನಲ್ಲಿ ಈಗಾಗಲೇ ನಾಸ್ಕಾಂ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ ಸಂಸ್ಥೆಗಳೊಂದಿಗೆ ಇಂತಹ ಉಪಕ್ರಮ ಆರಂಭಿಸಲಾಗಿದ್ದು, ಆಧುನಿಕ ಕೋರ್ಸುಗಳನ್ನು ಕಲಿಕೆಯಲ್ಲಿ ಕಡ್ಡಾಯಗೊಳಿಸಲಾಗಿದೆ. ಇನ್ಫೋಸಿಸ್ ಜತೆಗಿನ ಈ ಒಡಂಬಡಿಕೆ ಹೊಸ ಅಧ್ಯಾಯ ಆರಂಭವಾಗಿದೆ.

ಇನ್ಫೋಸಿಸ್‌ನ 1 ಲಕ್ಷ ರೂ. ಬೆಲೆಯ ಈ ಷೇರಿನ ಮೌಲ್ಯ ಈಗ 9.58 ಕೋಟಿ.!

ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್ ವ್ಯವಸ್ಥೆಯಿಂದ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪ್ರವರ್ಧಮಾನಕ್ಕೆ ಬರುತ್ತಿರುವ ನೂತನ ಮತ್ತು ಡಿಜಿಟಲ್ ತಂತ್ರಜ್ಞಾನದ ಕಲಿಕೆ ಸಾಧ್ಯವಾಗಲಿದೆ. ಪರಿಣಾಮಕಾರಿ ಕಲಿಕೆಗೆ ಆನ್‌ಲೈನ್‌ ವ್ಯವಸ್ಥೆಯನ್ನು ಹೇಗೆ ಬಳಸಿಕೊಳ್ಳಬಹುದು ಎನ್ನುವುದನ್ನು ಇದು ಸಾಬೀತು ಪಡಿಸಲಿದೆ. ವರ್ಚುಯಲ್ ತರಗತಿಗಳನ್ನು ನಡೆಸುವ ಮೂಲಕ, ಆನ್‌ಲೈನ್‌ನಲ್ಲೇ ವಿದ್ಯಾರ್ಥಿಗಳ ಮೌಲ್ಯಮಾಪನವನ್ನೂ ಕೈಗೊಳ್ಳಲು  ವ್ಯವಸ್ಥೆ ಮಾಡಲಾಗಿದೆ

click me!