ಟಿ-ಮನಸ್‌ ಯೋಜನೆಗೆ ಕರ್ನಾಟಕ ಪ್ರೇರಣೆ: ಸಚಿವ ಸುಧಾಕರ್‌

Published : Oct 11, 2022, 12:20 PM IST
ಟಿ-ಮನಸ್‌ ಯೋಜನೆಗೆ ಕರ್ನಾಟಕ ಪ್ರೇರಣೆ: ಸಚಿವ ಸುಧಾಕರ್‌

ಸಾರಾಂಶ

ರಾಜ್ಯದಲ್ಲಿ ಇ-ಮನಸ್‌ ಕಾರ್ಯಕ್ರಮದಡಿ ತಂತ್ರಾಂಶ ಬಳಸಿ ಮಾನಸಿಕ ಆರೋಗ್ಯ ಚಟುವಟಿಕೆ ನಿರ್ವಹಣೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮ ಅತ್ಯುತ್ತಮವಾಗಿ ಹೊರಹೊಮ್ಮಿದೆ: ಸಚಿವ ಸುಧಾಕರ್‌

ಬೆಂಗಳೂರು(ಅ.11):  ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿ ಮಾಡಿರುವ ಮಾನಸಿಕ ಆರೋಗ್ಯ ನೆರವು ನೀಡುವ ಟಿ-ಮನಸ್‌ ಯೋಜನೆಗೆ ಕರ್ನಾಟಕ ಇ-ಮನಸ್‌ ಯೋಜನೆಯೇ ಪ್ರೇರಣೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದರು.

ಸೋಮವಾರ ನಿಮ್ಹಾನ್ಸ್‌ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಇ-ಮನಸ್‌ ಕಾರ್ಯಕ್ರಮದಡಿ ತಂತ್ರಾಂಶ ಬಳಸಿ ಮಾನಸಿಕ ಆರೋಗ್ಯ ಚಟುವಟಿಕೆ ನಿರ್ವಹಣೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮ ಅತ್ಯುತ್ತಮವಾಗಿ ಹೊರಹೊಮ್ಮಿದೆ. ಜತೆಗೆ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಆಸ್ಪತ್ರೆಗಳಲ್ಲಿ ಮಾನಸಿಕ ಅನಾರೋಗ್ಯಕ್ಕೆ ಒಳಗಾದವರ ಆರೈಕೆಗಾಗಿ ವಾರಕ್ಕೆ ಒಂದು ದಿನ ಮೀಸಲಿಡಲಾಗುತ್ತಿದೆ. ಈ ಎಲ್ಲಾ ಕಾರ್ಯಕ್ರಮಗಳನ್ನೇ ಮಾದರಿಯಾಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಟಿ-ಮನಸ್‌ ಯೋಜನೆಯನ್ನು ದೇಶಾದ್ಯಂತ ಜಾರಿ ಮಾಡಿದೆ. ಈ ಮೂಲಕ ಮಾನಸಿಕ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದೆ ಎಂದರು.

5, 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಪ್ರಸ್ತಾವನೆ ಕೈಬಿಡಲು ರುಪ್ಸಾ, ಎಐಡಿಎಸ್‌ಒ ಆಗ್ರಹ

ಮಾನಸಿಕ ಆರೋಗ್ಯದ ಬಗ್ಗೆ ಬಹಳ ಕಾಲದಿಂದ ನಮ್ಮ ಸಮಾಜದಲ್ಲಿ ಚರ್ಚೆ ನಡೆಯುತ್ತಿದೆ. ದೈಹಿಕ ಆರೋಗ್ಯ ಉತ್ತಮವಾಗಿರುವುದರ ಜೊತೆಗೆ ಮಾನಸಿಕ ಆರೋಗ್ಯ ಕೂಡ ಉತ್ತಮವಾಗಿರಬೇಕು. ಇತ್ತೀಚೆಗೆ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗಿದ್ದಾರೆ. ಈ ಎರಡೂ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ವ್ಯವಸ್ಥೆ ಸದೃಢವಾಗಿರುತ್ತದೆ. ಸರ್ಕಾರ ಈ ಸಮತೋಲನ ಕಾಯ್ದುಕೊಳ್ಳಲು ಅನೇಕ ಕ್ರಮಗಳನ್ನು ವಹಿಸಿದೆ ಎಂದು ಹೇಳಿದರು.
ಘಟಿಕೋತ್ಸವದಲ್ಲಿ 347 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 22 ವಿದ್ಯಾರ್ಥಿಗಳಿಗೆ ವಿವಿಧ ವಿಭಾಗದಲ್ಲಿ ಚಿನ್ನದ ಪದಕ ಪಡೆದರು. ನಿಮ್ಹಾನ್ಸ್‌ ನಿರ್ದೇಶಕಿ ಡಾ
ಪ್ರತಿಮಾ ಮೂರ್ತಿ ಸೇರಿದಂತೆ ನಿಮ್ಹಾನ್ಸ್‌ ಆಡಳಿತ ಮಂಡಳಿ, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ನಿಮ್ಹಾನ್ಸ್‌ ದೇಶದ ಅತ್ಯುತ್ತಮ ಆರೋಗ್ಯ ಸಂಸ್ಥೆ: ಗೆಹ್ಲೋಟ್‌

ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಮಾತನಾಡಿ, ಅತ್ಯಾಧುನಿಕ ಚಿಕಿತ್ಸೆ ವಿಧಾನ ಮತ್ತು ವ್ಯವಸ್ಥಿತ ಶಿಕ್ಷಣದ ಮೂಲಕ ನಿಮ್ಹಾನ್ಸ್‌ ದೇಶದ ಅತ್ಯುತ್ತಮ ಮಾನಸಿಕ ಆರೋಗ್ಯ ಸಂಸ್ಥೆಯಾಗಿ ಹೊರಹೊಮ್ಮಿದೆ. ದೇಶದ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ ನಿಮ್ಹಾನ್ಸ್‌ ಕೊಡುಗೆ ಹೆಚ್ಚಿದೆ. ಇಲ್ಲಿನ ಟೆಲಿ ಮನಸ್‌ ಯೋಜನೆಯನ್ನು ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿದ್ದು, ಈ ಕಾರ್ಯಕ್ರಮವು ಮಾನಸಿಕ ಆರೋಗ್ಯದ ಪ್ರಮುಖ ಹೆಜ್ಜೆ ಗುರುತಾಗಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನಸಿಕ ಆರೋಗ್ಯ ಪುನರ್ವಸತಿ ಕೇಂದ್ರವನ್ನು ಮಧ್ಯಪ್ರದೇಶದ ಭೂಪಾಲ್‌ ಸಮೀಪ ಸೇಹೋರ್‌ ಸ್ಥಾಪಿಸಿದೆ. ಆ ಸಂಸ್ಥೆಯ ಸೇವೆಯನ್ನು ಸದ್ಬಳಕೆ ಮಾಡಿಕೊಟ್ಟುವ ನಿಟ್ಟಿನಲ್ಲಿ ನಿಮ್ಹಾನ್ಸ್‌ ಮತ್ತು ಕರ್ನಾಟಕವು ಸರ್ಕಾರ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು. ದೇಶದ ಪ್ರತಿಷ್ಠಿತ ಮಾನಸಿಕ ಆರೋಗ್ಯ ಸಂಸ್ಥೆಯಲ್ಲಿ ಕಲಿತು ಜನರ ಸೇವೆಗೆ ಮುಂದಾಗುತ್ತಿರುವ ಎಲ್ಲಾ ವೈದ್ಯರಿಗೂ ಶುಭಕೋರಿದರು.
 

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ