ಕೇರಳ, ತಮಿಳುನಾಡಿನಂತೆ ಕರ್ನಾಟಕದ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

By Sathish Kumar KH  |  First Published Aug 21, 2023, 5:59 PM IST

ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು.


ಬೆಂಗಳೂರು (ಆ.21): ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು..

ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು ಸಾಧ್ಯವಿಲ್ಲ. ಏಕೆಂದರೆ ಅದು ರಾಜ್ಯದ ವಿಷಯ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು ಕೇಂದ್ರ ಹೇರಲಾಗದು. ಹೇರಲು ಹೊರಟಿರುವುದು ಒಂದು ಹುನ್ನಾರ ಎಂದು ಸಿಎಂ ಅಭಿಪ್ರಾಯಪಟ್ಟರು. ಬಹು ಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಮಾಡಲಾಗದು. ಆದ್ದರಿಂದ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Tap to resize

Latest Videos

undefined

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಎಳ್ಳುನೀರು ಬಿಟ್ಟ ಕಾಂಗ್ರೆಸ್‌: ಹಳೆ ಶಿಕ್ಷಣ ನೀತಿಗೆ ಜಾರಿಗೆ ಸಮಿತಿ ರಚನೆ

ಬಿಜೆಪಿ ಆಳ್ವಿಕೆಯ ಇತರ ರಾಜ್ಯಗಳೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹಿಂದೇಟು ಹಾಕುತ್ತಿವೆ. ಕೇರಳ, ತಮಿಳುನಾಡು ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವುದಿಲ್ಲ ಎಂದು ಕೇಂದ್ರಕ್ಕೆ ಸ್ಪಷ್ಟಪಡಿಸಿವೆ ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಕೇಂದ್ರ ಪುರಸ್ಕೃತ ಯೋಜನೆಗಳು ಎಲ್ಲ ರಾಜ್ಯಗಳಿಗೂ ಅನ್ವಯಿಸುವುದರಿಂದ ರಾಜ್ಯಕ್ಕೆ ಅನ್ಯಾಯವಾಗಲಾರದು ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು. 

ಇದರಿಂದ ಬಡವರು, ಪರಿಶಿಷ್ಟ ಜಾತಿ, ಪಂಗಡದವರು, ಹಿಂದುಳಿದವರು, ಗ್ರಾಮೀಣ ಪ್ರದೇಶದವರಿಗೆ ತೊಂದರೆಯಾಗುತ್ತದೆ. ಉನ್ನತ ಶಿಕ್ಷಣದಲ್ಲಿ ಪ್ರತಿ ವರ್ಷ ಪ್ರಮಾಣ ಪತ್ರ ನೀಡಿದರೂ, ಒಂದು ವರ್ಷ, ಎರಡು ವರ್ಷ ಓದಿದವರಿಗೆ ಎಷ್ಟು ಉದ್ಯೋಗಾವಕಾಶ ದೊರೆಯಲು ಸಾಧ್ಯ? ಉದ್ಯೋಗವಕಾಶ ದೊರೆತು ಹೋದ ಬಡವರ ಮಕ್ಕಳು ಮತ್ತೆ ಓದಲು ಎಷ್ಟು ಅವಕಾಶ ದೊರೆಯುವುದು? ಎಂಬ ಅನುಮಾನ ವ್ಯಕ್ತಪಡಿಸಿದರು. ಈ ಶಿಕ್ಷಣ ನೀತಿ ಜಾರಿಗೊಳಿಸಲು ಅಗತ್ಯ ಮೂಲಸೌಲಭ್ಯಗಳು ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲ. ಇದರಿಂದ ಅನಗತ್ಯ ಗೊಂದಲಗಳು ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಕಾಡು ರಕ್ಷಿಸುತ್ತೇವೆಂದು ಬಂದ ಎನ್‌ಜಿಒ ಸದಸ್ಯರೇ ಕಡವೆ ಬೇಟೆಯಾಡಿ ಮಾಂಸ ತಿಂದ್ರು

ಬಿಜೆಪಿ ಸರ್ಕಾರವಿರುವ ಯಾವುದೇ ರಾಜ್ಯದಲ್ಲಿ ಎನ್‌ಇಪಿ ಜಾರಿಯಲ್ಲಿಲ್ಲ:  NEP ರದ್ದತಿ ಕುರಿತ ಸಭೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ರಾಜ್ಯದ ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಭೆ ಮಾಡಿದ್ದಾರೆ. ಈ ವೇಳೆ ಹೊಸ ಶಿಕ್ಷಣ ನೀತಿಯ ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡಿದ್ದೇವೆ. ಕರ್ನಾಟಕದ ಶಿಕ್ಷಣ ಮಟ್ಟ ಬಹಳ‌ ಉತ್ತಮವಾಗಿದೆ ಎಂದು ವಿವಿ ಕುಲಪತಿಗಳು ಹೇಳಿದ್ದಾರೆ. ಕೇಂದ್ರದಿಂದ ಬರುವ ಹಣ ಕಡಿಮೆ ಬರ್ತಿದೆ. ಕರ್ನಾಟಕದಲ್ಲಿ 2021ರಲ್ಲಿಯೇ ರಾಷ್ಟ್ರೀಯ ಹೊಸ ಶಿಕ್ಷಣ ನೀತಿ (NEP) ತರಲು ಪ್ರಯತ್ನ ಮಾಡಿದ್ದರು. ಆದರೆ, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿ ಎಲ್ಲಿಯೂ NEP ಇಲ್ಲ. ಆದರೆ ಕರ್ನಾಟಕದಲ್ಲಿ ತರಾತುರಿಯಲ್ಲಿ ತರಲು ಯತ್ನಸಿದ್ದಾರೆ. ಎನ್‌ಇಪಿಗೆ ಬೇಕಾಗುವ ಬೇಸಿಕ್‌ ನೀಡ್ ಸಹ ಇರಲಿಲ್ಲ. ಇದರಲ್ಲಿ ನಮಗೆ ಸಮಾಧಾನ ಇಲ್ಲ. ಹಳೆ ಶಿಕ್ಷಣ ನೀತಿಯ‌ನ್ನು ತರಲು ಹೋಗಿದ್ದಾರೆ. ಎನ್‌ಇಪಿ ನಮ್ಮ ರಾಜ್ಯದಲ್ಲಿ ಮುಂದುವರಿಸಲ್ಲ. ಜೊತೆಗೆ ಯಾವುದೇ ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲಿಯೂ ಎನ್‌ಇಪಿ ಇಲ್ಲ. ಮೊದಲಿಗೆ ಕರ್ನಾಟಕದಲ್ಲೇ ಜಾರಿಗೆ ತಂದಿದ್ದಾರೆ ಎಂದು ಹೇಳಿದರು.

click me!