ಎಸ್‌ಎಸ್‌ಎಲ್‌ಸಿ, ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ರದ್ದು: ವಾರ್ಷಿಕ 3 ಹಂತದಲ್ಲಿ ಪರೀಕ್ಷೆ ಆಯೋಜನೆ

By Sathish Kumar KH  |  First Published Sep 5, 2023, 12:36 PM IST

ರಾಜ್ಯದಲ್ಲಿ ಇನ್ನುಮುಂದೆ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಪ್ಲಿಮೆಂಟರಿ (ಪೂರಕ ಪರೀಕ್ಷೆ) ನಡೆಸುವುದಿಲ್ಲ. ಬದಲಾಗಿ ವಾರ್ಷಿಕ ಮೂರು ಬಾರಿ ಪರೀಕ್ಷೆ ನಡೆಸಲಾಗುವುದು.


ಬೆಂಗಳೂರು (ಸೆ.05): ರಾಜ್ಯದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್.ಎಸ್.ಎಲ್. ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು 2023-24 ನೇ ಶೈಕ್ಷಣಿಕ ಸಾಲಿನಿಂದ ತರಲು ಶ್ರೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೂರಕ ಪರೀಕ್ಷೆ ಎಂಬುದರ ಬದಲಾಗಿ ವಾರ್ಷಿಕ ಪರೀಕ್ಷೆ 1,2 ಮತ್ತು 3ನೇ ಹಂತದ ಪರೀಕ್ಷೆ ಎಂದು ಆಯೋಜಿಸಲು ನಿರ್ಧಾರ ಮಾಡಲಾಗಿದೆ.

ಹಾಲಿ ಪರೀಕ್ಷಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪದ್ಧತಿಯ ಪರೀಕ್ಷೆಯು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಮತ್ತು ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿದೆ. ಆದರಿಂದ ವಿದ್ಯಾರ್ಥಿಗಳ ಜ್ಞಾನಧಾರಣೆ ಅರ್ಥಪೂರ್ಣ ಕಲಿಕೆ, ಶೈಕ್ಷಣಿಕ ವಗತಿ ಕುಂಠಿತವಾಗುತ್ತಿದೆ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಯು ಗಳಿಸಿದ ಅಂಕಗಳಿಂದ ತೃಪ್ತರಾಗದಿದ್ದರೆ, ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ತಿರಸ್ಕರಿಸಲು ಅವಕಾಶವಿದೆ.

Tap to resize

Latest Videos

ಮಳೆ ಬಾರದಿದ್ರೂ ಲೋಡ್‌ ಶೆಡ್ಡಿಂಗ್‌ ಮಾಡೊಲ್ಲ: ಪ್ರತಿನಿತ್ಯ 40 ಕೋಟಿ ರೂ. ವಿದ್ಯುತ್‌ ಖರೀದಿ ಮಾಡಲಾಗ್ತಿದೆ

ಈಗಿನ ಪರೀಕ್ಷೆ ವಿದ್ಯಾರ್ಥಿ ಸ್ನೇಹಿಯಾಗಿಲ್ಲ:  ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸದೇ, ಪೂರಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಮಾತ್ರ ವಿದ್ಯಾರ್ಥಿಯ ಅಂಕಗಳೆಂದು ಪರಿಗಣಿಸಲಾಗುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿ ಸ್ನೇಹಿಯಾಗಿರುವುದಿಲ್ಲ, ಏಕೆಂದರೆ ಎರಡು ಪರೀಕ್ಷೆಗಳಲ್ಲಿ ತನ್ನ ಅತ್ಯುತ್ತಮ ಅಂಕವನ್ನು ಉಳಿಸಿಕೊಳ್ಳಲು ವಿದ್ಯಾರ್ಥಿಗೆ ಯಾವುದೇ ಆಯ್ಕೆಯಿರುವುದಿಲ್ಲ. ನಾವು ಸುಧಾರಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡರೆ, 1, 2, ಮತ್ತು 3 ಪರೀಕ್ಷೆಗಳಲ್ಲಿ ಗಳಿಸಿದ ವಿಷಯವಾರು ಅಂಕವನ್ನು ಉಳಿಸಿಕೊಳ್ಳಲು ಅವಕಾಶವನ್ನು ಒದಗಿಸಿದಂತಾಗುತ್ತದೆ. ಮುಂದಿನ ವ್ಯಾಸಂಗಕ್ಕೆ ಅಥವಾ ಉದ್ಯೋಗಕ್ಕೆ ಆಯ್ಕೆ ಪ್ರಕ್ರಿಯೆಗಳಲ್ಲಿ ಉತ್ತಮ ಅವಕಾಶಗಳನ್ನು ಒದಗಿಸಿದಂತಾಗುತ್ತದೆ.

ಕಲಿಕೆ ವೇಗಕ್ಕೆ ಹೊಂದಿಕೊಳ್ಳಲು ಅನುಕೂಲ: ವಿದ್ಯಾರ್ಥಿಗಳ ಕಲಿಕೆಯ ವೇಗ ಮತ್ತು ಶೈಲಿಯು ವಿಭಿನ್ನವಾಗಿದ್ದು, 1, 2, ಮತ್ತು 3 ಪರೀಕ್ಷೆಗಳನ್ನು ನಡೆಸುವುದರಿಂದ ಅವರ ಕಲಿಕೆಯ ವೇಗಕ್ಕೆ ಹೊಂದಿಕೊಳ್ಳಲು ಮತ್ತು ಸಮಯದ ನಿರ್ಬಂಧಗಳಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು.  ಜೊತೆಗೆ, ಪೂರಕ ಪರೀಕ್ಷೆ ಎಂಬ ಹೆಸರಿನ ಬದಲಿಗೆ 'ವಾರ್ಷಿಕ ಪರೀಕ್ಷೆ 1, 2 ಮತ್ತು 3' ಎಂದು ಹೆಸರಿಸುವುದರೊಂದಿಗೆ ಮೂರು ಅವಕಾಶಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಯ ಒಟ್ಟಾರೆ ಕಾರ್ಯಕ್ಷಮತೆಯನ್ನು ಮತ್ತು ಸಕಾರಾತ್ಮಕ ಮನೋಭಾವವನ್ನು ಉತ್ತೇಜಿಸಿದಂತಾಗುತ್ತದೆ. 

ಕಾವೇರಿ ನೀರು ಹೋರಾಟ: ಬೆಂಗಳೂರು, ಮೈಸೂರು ಜನರು ನೀರಿಲ್ಲದೇ ಪೇಪರ್‌ ಬಳಸುವ ಸ್ಥಿತಿ ಬರುತ್ತದೆ

ಈ ಕೆಳಕಂಡ ಅಂಶಗಳನ್ನು ಪರಿಗಣಿಸಿ ಮಂಡಲಿಯಿಂದ ವಾರ್ಷಿಕ 3 ಪರೀಕ್ಷೆಗಳನ್ನು ನಡೆಸಲಾಗುವುದು. 
1. ಈ ಸುಧಾರಣಾ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾರ್ಗಸೂಚಿಯನ್ನು ಸುತ್ತೋಲೆಯ ಮೂಲಕ ಮಂಡಲಿಯಿಂದ ನೀಡಲಾಗುವುದು. 
2 ಈ ಮೂರು ಪರೀಕ್ಷೆಗಳಲ್ಲಿ, ವಿಷಯ ಮತ್ತು ಕಠಿಣತೆಯ ಮಟ್ಟದಲ್ಲಿ ಏಕರೂಪತೆಯನ್ನು ಕಾಯ್ದುಕೊಳ್ಳಲಾಗುವುದು.
3. ಈ ಮೂರು ಪ್ರಯತ್ನಗಳಲ್ಲಿ ಗಳಿಸಿದ ಅಂಕಗಳಲ್ಲಿ, ವಿಷಯವಾರು ಅತ್ಯುತ್ತಮವಾದುದನ್ನು ಆಯ್ಕೆಮಾಡಿಕೊಳ್ಳಲು ಅವಕಾಶ ನೀಡಲಾಗುವುದು.
4. ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಡವಾಗಿ ದಾಖಲಾಗುವ ಪ್ರಥಮ ಪಿ.ಯು.ಸಿ. ಅಥವಾ ಪದವಿ ವಿದ್ಯಾರ್ಥಿಗಳಿಗೆ ಸೇತುಬಂಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.

click me!