ವಾಯುವ್ಯ ಸಾರಿಗೆ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅನಿರೀಕ್ಷಿತ ತಿರುವು, KEA ಮಹತ್ವದ ಘೋಷಣೆ

Published : Mar 28, 2026, 04:24 PM IST
KEA

ಸಾರಾಂಶ

ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ, ಏಪ್ರಿಲ್ 9ರಂದು ನಡೆಯಬೇಕಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ನೇಮಕಾತಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಏಪ್ರಿಲ್ 10ಕ್ಕೆ ಮುಂದೂಡಿದೆ. ಒಟ್ಟು 33 ಹುದ್ದೆಗಳಿಗೆ ನಡೆಯುವ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರಿಷ್ಕೃತ ದಿನಾಂಕದಂದು ಪರೀಕ್ಷೆಗೆ ಹಾಜರಾಗಬೇಕೆಂದು ಪ್ರಾಧಿಕಾರ ಸೂಚಿಸಿದೆ.

ಬೆಂಗಳೂರು: ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಅದೇ ದಿನ ನಿಗದಿಯಾಗಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC)ಯ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಏಪ್ರಿಲ್ 10ಕ್ಕೆ ಮುಂದೂಡಿದೆ.

ಈ ಕುರಿತು ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ಕಾರ್ಯಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಹಾಗೂ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.

ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಪರೀಕ್ಷೆ

ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ ಒಟ್ಟು 33 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪರೀಕ್ಷೆಯನ್ನು ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಈಗಾಗಲೇ ಸುಮಾರು 2,500 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, ಹೊಸ ವೇಳಾಪಟ್ಟಿಯ ಪ್ರಕಾರವೇ ಲಿಖಿತ ಪರೀಕ್ಷೆ ನಡೆಯಲಿದೆ.

ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಮಾತನಾಡಿ, “ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಯನ್ನು ಏಪ್ರಿಲ್ 10ಕ್ಕೆ ಮುಂದೂಡಲಾಗಿದೆ. ಶೀಘ್ರದಲ್ಲೇ ಪ್ರವೇಶ ಪತ್ರಗಳನ್ನು (Admit Cards) ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಪರಿಷ್ಕೃತ ವೇಳಾಪಟ್ಟಿಯನ್ನು ಗಮನಿಸಿ ಪರೀಕ್ಷೆಗೆ ಹಾಜರಾಗಬೇಕು” ಎಂದು ತಿಳಿಸಿದ್ದಾರೆ.

ಅಭ್ಯರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ, KEA ಅಧಿಕೃತ ವೆಬ್‌ಸೈಟ್ ಅನ್ನು ನಿಯಮಿತವಾಗಿ ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ಪಡೆಯುವಂತೆ ಸೂಚಿಸಲಾಗಿದೆ.

ಅಗ್ನಿಪಥ ನೇಮಕಾತಿ: ಆನ್‍ಲೈನ್ ನೋಂದಣಿ ಆರಂಭ

ಕಲಬುರಗಿ: ಆರ್ಮಿ ರಿಕ್ರೂಟಿಂಗ್ ಆಫೀಸ್ ಬೆಳಗಾವಿ ಹಾಗೂ ಬೆಂಗಳೂರು ಹೆಡ್‍ಕ್ವಾಟರ್ಸ್ ರಿಕ್ರೂಟಿಂಗ್ ಜೋನ್ ಬೆಂಗಳೂರು ಇವರ ಸಹಯೋಗದಲ್ಲಿ “ಅಗ್ನಿಪಥ” ನೇಮಕಾತಿಗಾಗಿ 2026ರ ಫೆಬ್ರವರಿ 13 ರಿಂದ ಏಪ್ರಿಲ್ 01 ರವರೆಗೆ ಆನ್‍ಲೈನ್ ಮೂಲಕ ನೋಂದಣಿ ಪ್ರಕ್ರಿಯೆ ನಡೆಯಲಿದೆ ಎಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯ ಡೈರೆಕ್ಟರ್ ರಿಕ್ರೂಟಿಂಗ್ ಕರ್ನಲ್ ಎ.ಕೆ. ಉಪಾಧ್ಯಾಯ ಅವರು ತಿಳಿಸಿದ್ದಾರೆ. ಬೆಳಗಾವಿ, ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಪುರುಷ ಅಭ್ಯರ್ಥಿಗಳು ಭಾರತೀಯ ಸೇನೆಯ www.joinindianarmy.nic.in ವೆಬ್‍ಸೈಟ್‍ನಲ್ಲಿ 2026ರ ಏಪ್ರಿಲ್ 1 ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು. ಸೇನೆಯಲ್ಲಿ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‍ಮೆನ್ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಗ್ನಿವೀರ್ ಟ್ರೇಡ್ಸ್‍ಮೆನ್ ಹುದ್ದೆಗೆ 8ನೇ ತರಗತಿ ಪಾಸ್ ಆಗಿರಬೇಕು. ಅಗ್ನಿವೀರ್ ಕ್ಲರ್ಕ್/ ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗಳ ವಿಭಾಗಗಳಿಗೆ ನೇಮಕಾತಿ ನಡೆಯಲಿದೆ. ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾನದಂಡಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ 2026ರ ಫೆಬ್ರವರಿ 13ರಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಆಫೀಸ್‍ದಿಂದ ಹೊರಡಿಸಿದ ಅಧಿಸೂಚನೆಯನ್ನು ವೀಕ್ಷಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

PREV
Read more Articles on
click me!

Recommended Stories

SSLC ತೃತೀಯ ಭಾಷಾ ಪರೀಕ್ಷೆಗೆ ಗ್ರೇಡಿಂಗ್‌ ಪದ್ಧತಿ ಜಾರಿಗೆ ಹೈಕೋರ್ಟ್‌ ತಡೆ; ಹಲವು ಮಕ್ಕಳಿಗೆ ಹಿಂದಿ ಫೇಲ್‌ ಆಗುವ ಆತಂಕ!
ಭಾರತದ ಹೊಸ ಪದವೀಧರರಿಗೆ ಎಐ ಸ್ಪೆಷಲಿಸ್ಟ್ ಮತ್ತು ಕಂಟೆಂಟ್ ಕ್ರಿಯೇಟರ್ ಅತ್ಯಂತ ವೇಗದ ಗಳಿಕೆಯ ಉದ್ಯೋಗ:ಲಿಂಕ್ಡ್‌ ಇನ್!