ಯುಜಿಸಿಇಟಿ-2024 ಆಪ್ಷನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

By Sathish Kumar KH  |  First Published Jul 30, 2024, 4:48 PM IST

ಯುಜಿಸಿಇಟಿ-24ರ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ನ್ಯಾಚುರೋಪಥಿ- ಯೋಗ, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಪ್ಷನ್ ಎಂಟ್ರಿ ಮಾಡಲು ಮತ್ತಷ್ಟು ದಿನ ಅವಕಾಶ ನೀಡಲಾಗಿದೆ


ವರದಿ- ನಂದೀಶ್ ಮಲ್ಲೇನಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್

ಬೆಂಗಳೂರು (ಜು.30) ಯುಜಿಸಿಇಟಿ-24ರ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ನ್ಯಾಚುರೋಪಥಿ- ಯೋಗ, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಪ್ಷನ್(ಇಚ್ಛೆ) ಗಳನ್ನು ದಾಖಲಿಸಲು ಮತ್ತಷ್ಟು ದಿನ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

Latest Videos

undefined

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಿದ್ದು ಅದು ಇವತ್ತಿಗೆ ಕೊನೆ ಆಗಬೇಕಿತ್ತು. ಸಾರ್ವಜನಿಕರ ಮನವಿ ಮೇರೆಗೆ ಮತ್ತೂ ಅವಕಾಶ ನೀಡಿದ್ದು ಅಭ್ಯರ್ಥಿಗಳು ಎಚ್ಚರಿಕೆಯಿಂದ ಇಚ್ಛೆಗಳನ್ನು ದಾಖಲು ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ಜು ದಾಖಲಿಸಲು ಈಗ ಅವಕಾಶ ನೀಡಲಾಗಿದೆ ಎಂದರು.

ಶಿರೂರು ಗುಡ್ಡ ಕುಸಿತ: ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ 5 ಮಕ್ಕಳನ್ನು ಕಾಪಾಡಿದ ರಿಯಲ್ ಹೀರೋ ಹೂವಾಗೌಡ

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ.
ಆಪ್ಷನ್ ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.

click me!