ಕಳೆದ ವರ್ಷದಂತೆ ಈ ವರ್ಷ ಪಿಯುಸಿ ಫಲಿತಾಂಶ (PU Result) ತಡವಾಗಲ್ಲ. ಜೂನ್ ಕೊನೆಯ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬರುವುದು ಪಕ್ಕಾ ಆಗಿದೆ. ಈ ಬಗ್ಗೆ ವಿವರ ಇಲ್ಲಿದೆ.
ಬೆಂಗಳೂರು(ಮೇ.14): ಈಗಾಗಲೇ SSLC ಫಲಿತಾಂಶ ದಿನ ನಿಗದಿಯಾಗಿದೆ. ಮೇ 19 ರಂದು SSLC ಫಲಿತಾಂಶ ಪ್ರಕಟ ವಾಗಲಿದೆ. ಜೊತೆಗೆ ದ್ವಿತೀಯ ಪಿಯುಸಿ ಫಲಿತಾಂಶಕ್ಕೂ ಕ್ಷಣಗಣನೆ ಆರಂಭವಾಗಿದೆ. ಕಳೆದ ವರ್ಷದಂತೆ ಈ ವರ್ಷ ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Result 2022) ತಡವಾಗಲ್ಲ. ಜೂನ್ ಕೊನೆಯ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬರುವುದು ಪಕ್ಕಾ ಆಗಿದೆ. ಒಂದೊಂದು ವಿಷಯ ಪರೀಕ್ಷೆ ಆಗುತ್ತಿದ್ದಂತೆ ಮೌಲ್ಯಮಾಪನ ಶುರುವಾಗುತ್ತದೆ.
ಜೂನ್ ಕೊನೆಯ ವಾರ ಪಿಯುಸಿ ಪರೀಕ್ಷೆ ಫಲಿತಾಂಶ ಹೊರ ಬರಲಿದೆ. ಮೇ. 20 ರಿಂದ ಜೂನ್ 15 ರೊಳಗೆ ಮೌಲ್ಯಮಾಪನ ಕಂಪ್ಲೀಟ್ ಆಗಬೇಕು, ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು, ಹಾಗಾಗಿ ಆದಷ್ಟು ಬೇಗ ಫಲಿತಾಂಶ ನೀಡುತ್ತೇವೆ ಎಂದು ಪಿಯು ಬೋರ್ಡ್ ನಿರ್ದೇಶಕ ಆರ್ ರಾಮಚಂದ್ರನ್ ಈಗಾಗಲೇ ಹೇಳಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕೊರೊನಾದಿಂದ ಪರೀಕ್ಷೆ ನಡೆಯದೆ ಫಲಿತಾಂಶದ ಸಮಯದಲ್ಲಿ ಏರುಪೇರಾಗಿತ್ತು. ಈಗ ನಿಗದಿತ ಅವಧಿಯಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಫಲಿತಾಂಶವನ್ನೂ ನಿಗದಿತ ಅವಧಿಯಲ್ಲಿ ಪ್ರಕಟಿಸಲಾಗುವುದು ಎಂದಿದ್ದರು.
Teacher Recruitment Exam 2022 ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ
ಹಿಜಾಬ್ ಗದ್ದಲ, ಪರೀಕ್ಷೆ ಗೈರು ಸೇರಿದಂತೆ ಹಲವು ಕಾರಣಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆ ಭಾರಿ ಸದ್ದು ಮಾಡಿತ್ತು. ಇದೀಗ ಇಡೀ ರಾಜ್ಯವೇ ಪರೀಕ್ಷಾ ಫಲಿತಾಂಶದ ಮೇಲೆ ಕಣ್ಣಿಟ್ಟಿದೆ. ಕಳೆದ ತಿಂಗಳು ಎಪ್ರಿಲ್ 22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿತ್ತು. ಮೇ.18 ರಂದು ಪರೀಕ್ಷೆ ಮುಗಿಯಲಿದೆ. ಒಂದೊಂದು ವಿಷಯ ಪರೀಕ್ಷೆ ಆಗುತ್ತಿದ್ದಂತೆ ಮೌಲ್ಯಮಾಪನ ಜೂನ್ ನಲ್ಲಿ ರಿಸಲ್ಟ್ ಪ್ರಕಟವಾಗಲಿದೆ. ಈ ಬಾರಿ ಪರೀಕ್ಷೆಗೆ ಗೈರಾದವರ ಸಂಖ್ಯೆ ಕೂಡ ಹೆಚ್ಚಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳ ಪೈಕಿ ಗರಿಷ್ಠ ವಿದ್ಯಾರ್ಥಿಗಳು ಗೈರಾದ ವಿಷಯ ಎಂದರೆ ಅರ್ಥಶಾಸ್ತ್ರ. ಅರ್ಥಶಾಸ್ತ್ರ ವಿಷಯದ ಪರೀಕ್ಷೆಗೆ 28,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿಲ್ಲ. ಇದರಲ್ಲಿ ನಿತ್ಯ ಕಾಲೇಜಿಗೆ ಬಂದು ತರಗತಿ ಬೋಧನೆಯಲ್ಲಿ ಪಾಲ್ಗೊಂಡ ಮಕ್ಕಳ ಸಂಖ್ಯೆಯೇ 20 ಸಾವಿರಕ್ಕೂ ಹೆಚ್ಚಿದೆ. ಉಳಿದವರು ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳು. ತರಗತಿ ಮಕ್ಕಳೇ ಇಷ್ಟುದೊಡ್ಡ ಸಂಖ್ಯೆಯಲ್ಲಿ ಗೈರು ಹಾಜರಾಗಲು ಕಾರಣವೇನು ಎಂಬುದಕ್ಕೆ ಪಿಯು ಇಲಾಖೆಯಲ್ಲಿ ಉತ್ತರ ಇಲ್ಲ. ಇನ್ನು, ಕಳೆದ ವರ್ಷ ಕೋವಿಡ್‌ನಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿರಲಿಲ್ಲ. 2020ರ ಪರೀಕ್ಷೆಯಲ್ಲಿ ಅರ್ಥಶಾಸ್ತ್ರ ವಿಷಯಕ್ಕೆ ಮಕ್ಕಳ ಗೈರು ಹಾಜರಾತಿ ಗಮನಿಸಿದರೆ ಈ ಬಾರಿ 8,000 ದಷ್ಟುಹೆಚ್ಚಳವಾಗಿದೆ. 2020ರ ಪಿಯು ಪರೀಕ್ಷೆಗಳಲ್ಲಿ 3,87,975 ನೋಂದಾಯಿತ ಅಭ್ಯರ್ಥಿಗಳಲ್ಲಿ 20,230 ಗೈರು ಹಾಜರಾಗಿದ್ದರು. ಈ ವರ್ಷ ಒಟ್ಟು 4,12,593 ನೋಂದಾಯಿತ ಅಭ್ಯರ್ಥಿಗಳಲ್ಲಿ 28 ಸಾವಿರ ಮಂದಿ ಗೈರು ಹಾಜರಾಗಿದ್ದಾರೆ. ಹೊಸಬರ ಪೈಕಿ ತುಮಕೂರು ಜಿಲ್ಲೆಯಲ್ಲಿ 1642, ಮೈಸೂರು 1115, ಚಿತ್ರದುರ್ಗ 1076 ಮತ್ತು ಬೆಂಗಳೂರು ದಕ್ಷಿಣ 1001 ಗೈರುಹಾಜರಾದವರು ಹೆಚ್ಚು ದಾಖಲಾಗಿದ್ದಾರೆ.
Teacher Recruitment Exam 2022 ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ
ಸಮವಸ್ತ್ರ ಕಡ್ಡಾಯಗೊಳಿಸಿದ ಕಾರಣ ಹಿಜಾಬ್ ಹೋರಾಟ ಮಾಡಿದ್ದ ಹಲವು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದರು. ಇತ್ತ ಕೆಲ ವಿದ್ಯಾರ್ಥಿಗಳಿಗೆ ಕೊರೋನಾ ಕೂಡ ತೀವ್ರ ಹಿನ್ನಡೆ ತಂದಿತ್ತು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 6.84 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಕರ್ನಾಟಕದ 1,000ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳೆ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ ಮಾಡಲಾಗಿತ್ತು. ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಬೆಳಗ್ಗೆ 8 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವ ಅವಧಿಯವರೆಗೆ ತೆರೆಯದಂತೆ ಆದೇಶಿಸಲಾಗಿತ್ತು. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಫೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್ ಮೊಬೈಲ್ ಸೆಟ್ ಬಳಸಬಹುದಾಗಿದೆ ಎಂದು ಆದೇಶ ಹೊರಡಿಸಲಾಗಿತ್ತು.