ಬಡವರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಸ್ಥಾಪಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಪ್ರತ್ಯೇಕ ಅನುದಾನ ನೀಡುವ ವಿಚಾರದಲ್ಲಿ ಸರ್ಕಾರವು ಇನ್ನೂ ತೀರ್ಮಾನವನ್ನೇ ತಗೆದುಕೊಂಡಿಲ್ಲ ಎಂದು ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದರು.
ಮೈಸೂರು (ಸೆ.6) : ಬಡವರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಸ್ಥಾಪಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಪ್ರತ್ಯೇಕ ಅನುದಾನ ನೀಡುವ ವಿಚಾರದಲ್ಲಿ ಸರ್ಕಾರವು ಇನ್ನೂ ತೀರ್ಮಾನವನ್ನೇ ತಗೆದುಕೊಂಡಿಲ್ಲ ಎಂದು ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ಮೈಸೂರಿನ ಕಲಾಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ನಮ್ಮ ಸರ್ಕಾರವಿದ್ದಾಗ ರಾಜ್ಯದಲ್ಲಿ 256 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲಾಯಿತು. ಕಳೆದ 3 ವರ್ಷದಿಂದ ಈಗಿನ ಸರ್ಕಾರವು ಹೊಸ ಶಾಲೆಗಳಿಗೆ ಮಂಜೂರಾತಿಯನ್ನು ಮಾಡಿಲ್ಲ. ಪ್ರತ್ಯೇಕವಾಗಿ ಅನುದಾನವನ್ನು ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
Bhagavad Gita: ಧರ್ಮ, ಶಿಕ್ಷಣವನ್ನು ಮಿಕ್ಸ್ ಮಾಡಬಾರದು, ಸರ್ಕಾರ ವಿಮರ್ಶಿಸಲಿ: ತನ್ವೀರ್ ಸೇಠ್
ಮುಖ್ಯ ಶಿಕ್ಷಕ, ಪ್ರಾಂಶುಪಾಲ ಹಾಗೂ ಶಿಕ್ಷಕರ ನಡುವೆ ಇರುವ ನ್ಯೂನತೆಗಳನ್ನು ಪರಿಹಾರ ಮಾಡುವ ದೃಷ್ಟಿಯಿಂದ ಹೊಸ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಬೇಕಾಗಿದೆ. ಅದಕ್ಕೂ ಮೊದಲು ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆದುಕೊಳ್ಳಬೇಕಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಸರ್ಕಾರವನ್ನು ಗಮನ ಸೆಳೆಯಬೇಕು ಎಂದು ಅವರು ಮನವಿ ಮಾಡಿದರು.
ಸಿಎಸ್‌ಆರ್ ಫಂಡ್‌ನಲ್ಲಿ ತಗೆದುಕೊಳ್ಳುವ ಮೋಜು, ಡೆಸ್‌್ಕಗಳನ್ನು ಅಗತ್ಯಕ್ಕೆ ಅನುಗುಣವಾಗಿ ಎನ್ನದೇ ಎಲ್ಲಾ ಶಾಲೆಗಳಿಗೂ ನೀಡಬೇಕು. ಶಾಸಕರ ನಿಧಿಯಲ್ಲಿ ಶೇ.30 ರಷ್ಟನ್ನು ಬಳಕೆ ಮಾಡಿಕೊಂಡು ಶಾಲಾ ಕೊಠಡಿಗಳ ನಿರ್ಮಾಣ ಮಾಡಬಹುದು. ಇವುಗಳಿಂತ ಮುಖ್ಯವಾಗಿ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಸಮಸ್ಯೆಗಳನ್ನು ಆಲಿಸಲು ಶಿಕ್ಷಣ ಅದಾಲತ್ ನಡೆಸಬೇಕು ಎಂದು ಅವರು ತಿಳಿಸಿದರು. Pratap Simha-Tanvir Sait ತಾರಕಕ್ಕೇರಿದ ಪ್ರತಾಪ್ ಸಿಂಹ- ತನ್ವೀರ್ ಸೇಠ್ ಆರೋಪ-ಪ್ರತ್ಯಾರೋಪ
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ 12ನೇ ತರಗತಿವರೆಗೂ ಪಬ್ಲಿಕ್ ಪರೀಕ್ಷೆ ಇಲ್ಲ ಎನ್ನುವ ಅಂಶವನ್ನು ಅಳವಡಿಸಲಾಗಿದೆ. ಇದರಿಂದ ಮಕ್ಕಳ ಶಿಕ್ಷಣದ ಗುಣಮಟ್ಟಕುಸಿಯುತ್ತದೆ. ಶಿಕ್ಷಕರು ಪಾಠ ಮಾಡುವ ಆಸಕ್ತಿಯನ್ನು ಕಳೆದುಕೊಳ್ಳುತ್ತಾರೆ. ಹೀಗಾಗಿ, ಪಬ್ಲಿಕ್ ಪರೀಕ್ಷೆಯನ್ನು ನಡೆಸಬೇಕು.
- ಮರಿತಿಬ್ಬೇಗೌಡ, ವಿಧಾನಪರಿಷತ್ತು ಸದಸ್ಯ