ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿಯಿಂದ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ವಿತರಣೆ ಮಾಡುವವರೆಗೂ ಅಂದರೆ ಜೂ.15ರವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು.
ಬೆಂಗಳೂರು (ಮೇ 31): ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲಾ - ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡು ಪಾಸ್ ವಿತರಣೆ ಮಾಡುವವರೆಗೂ ಅಂದರೆ ಜೂನ್ 15ರವರೆಗೆ ಹಿಂದಿನ ವರ್ಷದ ಬಸ್‌ಪಾಸ್‌ಗಳು ಹಾಗೂ ಶಾಲೆ- ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದ ಶುಲ್ಕ ಪಾವತಿ ರಶೀದಿಯನ್ನು ತೋರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದ ಬಸ್‌ಗಳಲ್ಲಿ ಜೂನ್ 15ರ ತನಕ ವಿದ್ಯಾರ್ಥಿಗಳು ಉಚಿತವಾಗಿ ಅಥವಾ ರಿಯಾಯಿತಿ ದರ ಪಾವತಿಸಿ ಪ್ರಯಾಣಿಸಬಹುದು (Free ride for Students) ಎಂದು ಕೆಎಸ್‌ಆರ್‌ಟಿಸಿ ಸುತ್ತೋಲೆಯನ್ನು ಹೊರಡಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರತಿ 2023-24ನೇ ಸಾಲಿನ ವಿದ್ಯಾರ್ಥಿ ಉಚಿತ / ರಿಯಾಯಿತಿ ಬಸ್ ಪಾಸು (Student Bus Pass) ಗಳನ್ನು ಇಡಿಸಿಎಸ್ ಇಲಾಖೆಯ (EDCS Department) ಸೇವಾ ಸಿಂಧು ತಂತ್ರಾಂಶದ (Sevasindhu Portal)ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮ ತೆಗೆದುಕೊಂಡಿದೆ. ಇದಕ್ಕಾಗಿ ಇಡಿಸಿಎಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
undefined
ಅತ್ತೆ ಒಪ್ಪಿದಲ್ಲಿ ಮಾತ್ರ ಸೊಸೆಗೆ ಕಾಂಗ್ರೆಸ್ ಗ್ಯಾರಂಟಿ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಆನ್‌ಲೈನ್ ಮೂಲಕ ವಿದ್ಯಾರ್ಥಿ ಪಾಸ್‌ಗೆ ಅರ್ಜಿ ಸಲ್ಲಿಸುವುದಕ್ಕೆ ಮತ್ತು ಪಾಸ್ ಪಡೆಯಲು ಕಾಲಾವಕಾಶಬೇಕು. ಈಗಾಗಲೇ ಶೈಕ್ಷಣಿಕ ತರಗತಿ ಶುರುವಾಗಿರುವ ಕಾರಣ, ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳುವ ಸಲುವಾಗಿ ಉಚಿತ/ ರಿಯಾಯಿತಿ ಬಸ್ ಪಾಸ್ ಮೂಲಕ ಬಸ್ ಪ್ರಯಾಣಕ್ಕೆ ಅವಕಾಶ ವಿಸ್ತರಿಸಲಾಗಿದೆ ಎಂದು ಸುತ್ತೋಲೆ ಮೂಲಕ ತಿಳಿಸಿದೆ.
ಶುಲ್ಕ ಪಾವತಿ ರಶೀದಿ ತೋರಿಸಿ ಪ್ರಯಾಣ ಮಾಡಿ: ಕೆಎಸ್‌ಆರ್‌ಟಿಸಿಯ ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಜೂನ್ 15ರ ತನಕ ನಗರ ಮತ್ತು ಹೊರವಲಯಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಇನ್ನು ಜೂ.15ರೊಳಗೆ ವಿದ್ಯಾರ್ಥಿಗಳು ಸರ್ಕಾರದಿಂದ ನೀಡಲಾಗುವ ಪ್ರಸಕ್ತ ಸಾಲಿನ (2023-24) ವಿದ್ಯಾರ್ಥಿ ಬಸ್ ಪಾಸ್ ಪಡೆಯಬೇಕು. ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬೇಕಾದರೆ ಪ್ರಸಕ್ತ ವರ್ಷದಲ್ಲಿ ಶಾಲಾ / ಕಾಲೇಜುಗಳಿಗೆ ದಾಖಲಾಗಿರುವುದನ್ನು ದೃಢೀಕರಿಸುವ ಶುಲ್ಕ ಪಾವತಿ ರಸೀದಿ ಅಥವಾ ಕಳೆದ ವರ್ಷದ (2022-23ನೇ ಸಾಲಿನ) ವಿದ್ಯಾರ್ಥಿ ಬಸ್ ಪಾಸ್ ಅನ್ನು ನಿರ್ವಾಹಕರಿಗೆ ತೋರಿಸಬೇಕಾದ್ದು ಅವಶ್ಯ ಎಂದು ನಿಗಮದ ಸುತ್ತೋಲೆ ವಿವರಿಸಿದೆ.
ಬಿಎಂಟಿಸಿ ಬಸ್‌ಗಳಲ್ಲೂ ವಿದ್ಯಾರ್ಥಿಗಳ ಉಚಿತ ಪ್ರಯಾಣ: 1ರಿಂದ ಪಿ.ಯು.ಸಿ ವರೆಗಿನ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಾಮಾನ್ಯ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ ವಿದ್ಯಾಸಂಸ್ಥೆಗಳು 2023-24ನೇ ಸಾಲಿನ ಪಿ.ಯು.ಸಿ.ವರೆಗಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿರುತ್ತವೆ. ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಕೆಳಕಂಡಂತೆ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. 2022-23 ನೇ ಸಾಲಿನ ವಿದ್ಯಾರ್ಥಿ ಪಾಸು ಅಥವಾ 2023-24 ನೇ ಸಾಲಿನ ಶಾಲಾ/ಕಾಲೇಜಿನ ಶುಲ್ಕ ರಸೀದಿ/ಗುರುತಿನ ಚೀಟಿಯೊಂದಿಗೆ ದಿನಾಂಕ 15.06.2023 (ಜೂ.15) ರವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ರಾಜ್ಯದಲ್ಲಿ 2023-24ನೇ ಸಾಲಿನಿಂದ ಸೇತುಬಂಧ ಪುನಾರಂಭ: ಬೆಂಗಳೂರು (ಮೇ.30): ರಾಜ್ಯದಲ್ಲಿ ಮೇ 31ರಿಂದ ಶಾಲೆಗಳಲ್ಲಿ ತರಗತಿ ಚಟುವಟಿಕೆಗಳು ಶುರುವಾಗಲಿದ್ದು, ಈ ಅವಧಿಯಲ್ಲಿ 1ರಿಂದ 3ನೇ ತರಗತಿಗೆ ಆರಂಭದ 30 ದಿನಗಳು ಹಾಗೂ 4ರಿಂದ 10ನೇ ತರಗತಿ ಮಕ್ಕಳಿಗೆ 15 ದಿನಗಳ ಕಾಲ ‘ಸೇತುಬಂಧ’ಕಾರ್ಯಕ್ರಮ ನಡೆಸುವಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚಿಸಿದೆ.ಮಕ್ಕಳಲ್ಲಿನ ಕಲಿಕಾ ಅಂತರ ತಗ್ಗಿಸಲು ಸೇತುಬಂಧವನ್ನು ಸರ್ಕಾರ ಹಮ್ಮಿಕೊಳ್ಳುತ್ತದೆ. 1ರಿಂದ 10ನೇ ತರಗತಿಗಳಿಗೆ ಸೇತುಬಂಧ ಶಿಕ್ಷಣದ ಸಾಹಿತ್ಯ ಮತ್ತು ವಿನ್ಯಾಸವನ್ನು ಸಿದ್ಧಪಡಿಸಿ https://dsert.karnataka.gov.in/info-2/Sethubandha+Literature/kn ದಲ್ಲಿ ಅಪ್‌ಲೋಡ್ ಮಾಡಲಾಗಿದೆ.
ಕೆಎಸ್‌ಆರ್‌ಟಿಸಿ ಬಸ್ ಓಡಿಸುತ್ತಲೇ ಚಾಲಕ ಸಾವು: ಮುಂದಾಗಿದ್ದೇ ರೋಚಕ
1ರಿಂದ 10 ತರಗತಿಗೆ ಸೇತುಬಂಧ ಆಯೋಜನೆ: ಶಾಲಾ ಹಂತದಲ್ಲಿ ಸೇತುಬಂಧ ಶಿಕ್ಷಣವನ್ನು (Sethubandha Education) ಅನುಷ್ಠಾನಗೊಳಿಸಲು ಸಹಕಾರಿಯಾಗುವಂತೆ ಹಾಗೂ ಶಿಕ್ಷಕರ ಸಾಮರ್ಥ್ಯ ಅಭಿವೃದ್ಧಿಗಾಗಿ ಈ ಸಾಹಿತ್ಯವನ್ನು ಸಿದ್ಧಪಡಿಸಿದೆ. ಮಕ್ಕಳ ವಯೋಮಾನ ಮತ್ತು ತರಗತಿಗೆ ಅನುಗುಣವಾಗಿ ಕಲಿಕಾ ಮಟ್ಟಹಾಗೂ ಸಾಮರ್ಥ್ಯಗಳನ್ನು ಗುರುತಿಸಿ ಮುಂದಿನ ಕಲಿಕೆಗೆ ಸಿದ್ಧಗೊಳಿಸಲು ಕಲಿತಿರುವ ಮತ್ತು ಕಲಿಯುತ್ತಿರುವ ಪರಿಕಲ್ಪನೆಗಳ ಅಂತರದ ನಡುವೆ ಸಂಬಂಧ ಕಲ್ಪಿಸುವುದು ಸೇತುಬಂಧ ಶಿಕ್ಷಣದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ 1ರಿಂದ 10 ತರಗತಿಗೆ ಸೇತುಬಂಧ ಆಯೋಜಿಸಲಾಗಿದೆ.
ಮಕ್ಕಳ ಕಲಿಕಾ ಅನುಭವಗಳನ್ನು ಆಧರಿಸಿ ರಸಪ್ರಶ್ನೆ ಲಿಖಿತ ಅಥವಾ ಮೌಖಿಕ ಪ್ರಶ್ನೋತ್ತರ, ಸರಳ ಯೋಜನೆಗಳು, ಸಂಭಾಷಣೆ, ಸರಳ ಚಟುವಟಿಕೆಗಳು, ಅಭ್ಯಾಸ ಹಾಳೆಗಳನ್ನು ಪೂರ್ಣಗೊಳಿಸಿರುವುದು, ಮನೆಪಾಠ ಹಾಗೂ ಇನ್ನಿತರ ಚಟುವಟಿಕೆಗಳನ್ನು ಮೌಲ್ಯಮಾಪನ ಮಾಡುವುದು. ಸೇತುಬಂಧದ ಬಳಿಕವೂ ವಿದ್ಯಾರ್ಥಿಗಳಲ್ಲಿ ಸಾಮರ್ಥ್ಯ ಗಳಿಕೆ ಆಗಿರದಿದ್ದಲ್ಲಿ ಅಂತಹವರನ್ನು ಗಮನಿಸಿ ಆಯಾ ತರಗತಿ ಪಠ್ಯ ಬೋಧನಾ ಸಂದರ್ಭದಲ್ಲಿ ಪೂರ್ವ ಸಿದ್ಧತಾ ಚಟುವಟಿಕೆಗಳನ್ನು ನೀಡುವಾಗ ಸಾಮರ್ಥ್ಯಗಳಿಗೆ ವಿಶೇಷ ಆದ್ಯತೆ ನೀಡಿ ಕಲಿಕೆಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದೆ.