ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು, (ಆಗಸ್ಟ್.07): ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರ(Hall Ticket) ಬಿಡುಗಡೆಯಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರವೇಶ ಪತ್ರವನ್ನು ರಿಲೀಸ್ ಮಾಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಣಟೆ ಹೊರಡಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ದಿನಾಂಕ 12-08-2022 ರಿಂದ 25-08-2022ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಪೂರಕ ಪರೀಕ್ಷೆಗಾಗಿ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದೆ.
PUC Supplementary Exam 2022; ಆ.12ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ
ಈ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ದಿನಾಂಕ 05-08-2022ರಂದು ಸ್ಯಾಟ್ ಪೋರ್ಟಲ್ ನ ಪ್ರಾಚಾರ್ಯರ ಲಾಗಿನ್ ನಲ್ಲಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬೇಕೆಂದು ಪದವಿ ಪೂರ್ಣ ಶಿಕ್ಷಣ ಇಲಾಖೆ ಸೂಚಿಸಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪತ್ರಿಕಾ ಪ್ರಕಟಣೆ. pic.twitter.com/sPAi5TGtKK
— SchoolEducationGOK (@ShalaShikshana)ಪೂರಕ ಪರೀಕ್ಷೆ ವೇಳಾಪಟ್ಟಿ
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಈಗಾಗಲೇ ಪ್ರಕಟಿಸಿದ್ದು, ಆಗಸ್ಟ್ 12ರಿಂದ 25ರವರೆಗೆ ಪರೀಕ್ಷೆ ನಡೆಯಲಿದೆ.
ವೇಳಾಪಟ್ಟಿ ಪ್ರಕಾರ ಆ.12ರಂದು ಕನ್ನಡ, ಅರೇಬಿಕ್, ಆ.13 ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ, ಆ.16 ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಆ.17 ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ, ಆ.18 ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ, ಆ.19 ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ, ಆ.20 ತರ್ಕ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ ಮತ್ತು ವ್ಯವಹಾರ ಅಧ್ಯಯನ, ಆ.22 ಇಂಗ್ಲಿಷ್, ಆ.23 ಅರ್ಥಶಾಸ್ತ್ರ, ಜೀವಶಾಸ್ತ್ರ, ಆ.24 ಇತಿಹಾಸ, ಸಂಖ್ಯಾಶಾಸ್ತ್ರ, ಆ.25 ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ಶಾಸ್ತ್ರ ಪರೀಕ್ಷೆಗಳು ನಡಯಲಿವೆ.
ಬಹುತೇಕ ಎಲ್ಲ ಪರೀಕ್ಷೆಗಳೂ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ. ಕೆಲ ವಿಷಯಗಳು ಮಾತ್ರ ಮಧ್ಯಾಹ್ನ 2.15ರಿಂದ ಸಂಜೆ 4.30ವರೆಗೆ ನಿಗದಿಪಡಿಸಲಾಗಿದೆ.