ಫಲಿತಾಂಶ ಪ್ರಕಟ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿ ರಿಲೀಸ್

By Suvarna News  |  First Published Apr 10, 2024, 5:42 PM IST

2023-24ರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ  ಪ್ರಕಟಿಸಿದೆ.


ಬೆಂಗಳೂರು (ಏ.10): 2023-24ರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ  ಪ್ರಕಟಿಸಿದೆ. ಏಪ್ರಿಲ್ 29ರಿಂದ ಮೇ 16ರವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ  ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. 

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ 1 ಅನ್ನು ಮಾರ್ಚ್ 01 ರಿಂದ 22 ರವರೆಗೆ ನಡೆಸಿತ್ತು. ಈ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ವಿದ್ಯಾರ್ಥಿಗಳು ಬಯಸಿದರೆ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು. ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮೊದಲೇ ಮೂರು ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಬೇಕಿದೆ. 

Tap to resize

Latest Videos

undefined

ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ, ಇಂದಿನಿಂದ 1 ವಾರ ಟೈಂ

ಹೀಗಾಗಿ ಫಲಿತಾಂಶದ ದಿನವೇ ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವೇಳಾಪಟ್ಟಿ ವಿಷಯಾವಾರು ಮಾಹಿತಿ ಇಂತಿದೆ.

ಏ 29ರಂದು -ಕನ್ನಡ
ಏ 30ರಂದು - ಇತಿಹಾಸ, ಭೌತಶಾಸ್ತ್ರ
ಮೇ 2ರಂದು-ಇಂಗ್ಲಿಷ್
ಮೇ 3ರಂದು-ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 4ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ,
ಮೇ 9ರಂದು ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮೇ 11ರಂದು ಭೂಗೋಳಶಾಸ್ತ್ರ, ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 13ರಂದು ಅರ್ಥಶಾಸ್ತ್ರ
ಮೇ 14ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಮೇ 15ರಂದು ಹಿಂದಿ
ಮೇ 16ರಂದು ತಮಿಳು ಇತರೆ ಭಾಷಾ ವಿಷಯಗಳ ಪರೀಕ್ಷೆ

Breaking: ದ್ವಿತೀಯ ಪಿಯುಸಿ 81.15% ಫಲಿತಾಂಶ ಪ್ರಕಟ, ಈ ಬಾರಿ ಕೂಡ ದಕ್ಷಿಣ ಕನ್ನಡ ನಂ.1, ಉಡುಪಿ ಸೆಕೆಂಡ್

ಎಲ್ಲ ವಿಷಯಗಳಿಗೆ ತಲಾ 80 ಅಂಕಗಳಿವೆ. ಪ್ರತಿದಿನ ಬೆಳಗ್ಗೆ 10.15ರಿಂದ 1.30ರವರೆಗೆ ಪರೀಕ್ಷೆ ನಡೆಯಲಿದೆ. ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಕೂಡ ಇದೇ ಸಮಯದಲ್ಲಿ ಬರೆಯಬಹುದು. ಪುನರಾವರ್ತಿತ ಅಭ್ಯರ್ಥಿಗಳು ಅಭ್ಯರ್ಥಿಗಳು ಹಾಗೂ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಕೂಡ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

click me!