ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ: ಇನ್ನಷ್ಟು ಮಾಹಿತಿ ಕೊಟ್ಟ ಸುರೇಶ್ ಕುಮಾರ್

By Suvarna News  |  First Published May 4, 2021, 3:00 PM IST

ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಕೊಟ್ಟಿದ್ದು, ಅದು ಈ ಕೆಳಗಿನಂತಿ


ಬೆಂಗಳೂರು, (ಮೇ.04): ಇದೇ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಹೊಸ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.

Tap to resize

Latest Videos

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಅಂದಹಾಗೇ, ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಆದ್ರೆ, ಕೊರೋನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದರು.

ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಪ್ರಮೋಷನ್
ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.

ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಅವರು ತಿಳಿಸಿದರು.

click me!