ದ್ವಿತೀಯ ಪಿಯುಸಿ ಮತ್ತು 10ನೇ ತರಗತಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ, ಇಲ್ಲಿದೆ ವಿವರ

By Gowthami K  |  First Published Dec 1, 2023, 2:45 PM IST

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಮತ್ತು 10ನೇ ತರಗತಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.


ಬೆಂಗಳೂರು (ಡಿ.1): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 2, 2024ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 22,2024ರವರೆಗೂ ಪರೀಕ್ಷೆ  ನಡೆಯಲಿದೆ. ಇದರ ಜೊತೆಗೆ ಎಸ್ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ ಕೂಡ‌ ಪ್ರಕಟಗೊಂಡಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೂ  ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಇನ್ನು ಮೂರು ತಿಂಗಳ ಮುಂಚಿತವಾಗಿಯೇ 2023-24 ನೇ ಸಾಲಿನ ವಾರ್ಷಿಕ ಪರೀಕ್ಷೆ -1ರ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ.

ಬೆಂಗಳೂರಿನ 44 ಶಾಲೆಗಳಿಗೆ ಬಾಂಬ್​ ಬೆದರಿಕೆ, ಯಾವೆಲ್ಲ ಸ್ಕೂಲ್ ಪಟ್ಟಿ ಇಲ್ಲಿದೆ

Tap to resize

Latest Videos

undefined

ಮಂಡಲಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ.ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್‌ 15ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ.

ಬೆಂಗಳೂರಲ್ಲಿ ರಾಪಿಡೋ ಹತ್ತಿದ ಯುವತಿಗೆ ಲೈಂಗಿಕ ಕಿರುಕುಳ, ವಿರೋಧಿಸಿದ್ದಕ್ಕೆ ಹೊರದಬ್ಬಿದ ಚಾಲಕ!

ಆಕ್ಷೇಪಣೆಯನ್ನು ಮಂಡಲಿಯ ಇಮೇಲ್ ವಿಳಾಸ: chairpersonkseab@gmail.comಕ್ಕೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

 

click me!