ಕೊರೋನಾ ಆತಂಕ; SSLC ಪರೀಕ್ಷೆ ಮುಂದಕ್ಕೆ ಹಾಕಿದ ಸರ್ಕಾರ

By Suvarna News  |  First Published May 13, 2021, 5:29 PM IST
  • ವ್ಯಾಪಕವಾಗಿ ಹರಡುತ್ತಿದೆ ಕೊರೋನಾ ಎರಡನೇ ಅಲೆ
  • ಖಾಸಗಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾಡಳಿತಗಳ ಒಕ್ಕೂಟ ಆಗ್ರಹ ಪಡಿಸಿತ್ತು
  • ಮುಂದಿನ ಆದೇಶದವರೆಗೆ ಪರೀಕ್ಷೆ ಮುಂದಕ್ಕೆ ಹಾಕಿದ ಸರ್ಕಾರ
  • ವಿವರ ತಿಳಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು(ಮೇ.  13)   ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್  ತಿಳಿಸಿದ್ದಾರೆ. 

ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Tap to resize

Latest Videos

undefined

ಲಸಿಕೆ ಉತ್ಪನ್ನವಾಗದಿದ್ದರೆ ನೇಣು ಹಾಕಿಕೊಳ್ಳಬೇಕಾ ಎಂದ ಗೌಡರು

ಜ್ಯದಲ್ಲಿ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕನಿಷ್ಠ ಒಂದು ತಿಂಗಳ ಕಾಲ ಮುಂದೂಡುವಂತೆ ಖಾಸಗಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾಡಳಿತಗಳ ಒಕ್ಕೂಟ (ಕ್ಯಾಮ್ಸ್‌) ರಾಜ್ಯ ಸರ್ಕಾರವನ್ನು ಒತ್ತಾಯಿಸಿತ್ತು. 

ಪ್ರಸ್ತುತ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳು ತೀವ್ರ ಸಂಕಷ್ಟಎದುರಿಸುತ್ತಿದ್ದು, ಪರೀಕ್ಷೆ ವಿಚಾರದಲ್ಲಿಯೂ ಗೊಂದಲಕ್ಕೆ ಸಿಲುಕಿದ್ದಾರೆ. ಆದ್ದರಿಂದ ಜೂ.21ರಿಂದ ಜು.5ರ ವರೆಗೆ ನಿಗದಿಯಾಗಿರುವ ಪರೀಕ್ಷೆ ಮುಂದಕ್ಕೆ ಹಾಕಬೇಕು ಎಂದು ಕೇಳಿಕೊಳ್ಳಲಾಗಿತ್ತು. 

"

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

 

click me!