SSLC ಪರೀಕ್ಷೆ ಮಾರ್ಚ್ 18ರಿಂದ ಆರಂಭ, ಈ ಬಾರಿ ಹಲವು ಬದಲಾವಣೆಗಳು, ಫಲಿತಾಂಶದ ದಿನಾಂಕವೂ ಪ್ರಕಟ!

Published : Feb 17, 2026, 05:06 PM IST
 Karnataka SSLC Exam

ಸಾರಾಂಶ

ರಾಜ್ಯದಲ್ಲಿ SSLC ಪರೀಕ್ಷೆ-1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಒಟ್ಟು 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.  ಪರೀಕ್ಷೆಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ನಡೆಯಲಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ SSLC ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ. ಪರೀಕ್ಷೆಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ಗಂಟೆಯವರೆಗೆ ನಡೆಯಲಿವೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಹೊಸಬರು: 8,12,855, ಪುನರಾವರ್ತಿತ ವಿದ್ಯಾರ್ಥಿಗಳು: 62,845, ಖಾಸಗಿ ಅಭ್ಯರ್ಥಿಗಳು: 27,189, ಒಟ್ಟು ಪರೀಕ್ಷಾ ಕೇಂದ್ರಗಳು: 2,871 ವಿದ್ಯಾರ್ಥಿಗಳಿಗೆ ಈಗಾಗಲೇ ಮಾದರಿ ಪ್ರಶ್ನೆಪತ್ರಿಕೆಗಳನ್ನು ವಿತರಿಸಲಾಗಿದೆ. ಪರೀಕ್ಷೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.

SSLC ಪರೀಕ್ಷೆ-1 ವೇಳಾಪಟ್ಟಿ

ಮಾರ್ಚ್ 18: ಪ್ರಥಮ ಭಾಷೆ

ಮಾರ್ಚ್ 23: ವಿಜ್ಞಾನ

ಮಾರ್ಚ್ 25: ದ್ವಿತೀಯ ಭಾಷೆ

ಮಾರ್ಚ್ 28: ಗಣಿತ

ಮಾರ್ಚ್ 30: ತೃತೀಯ ಭಾಷೆ

ಏಪ್ರಿಲ್ 2: ಸಮಾಜ ವಿಜ್ಞಾನ

SSLC ಪರೀಕ್ಷೆ-2 ವೇಳಾಪಟ್ಟಿ

ಮೇ 18: ಪ್ರಥಮ ಭಾಷೆ

ಮೇ 19: ವಿಜ್ಞಾನ

ಮೇ 20: ದ್ವಿತೀಯ ಭಾಷೆ

ಮೇ 21: ಗಣಿತ

ಮೇ 22: ತೃತೀಯ ಭಾಷೆ

ಮೇ 23: ಸಮಾಜ ವಿಜ್ಞಾನ

ಏಪ್ರಿಲ್ 7, 2026ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ

ಈ ಬಾರಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 7, 2026ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆ ಮುಂಚಿತವಾಗಿಯೇ ಘೋಷಿಸಿದ್ದು, ಇದು ಇತಿಹಾಸದಲ್ಲೇ ಮೊದಲ ಬಾರಿ ಎಂದು ತಿಳಿಸಿದೆ. ಪರೀಕ್ಷೆ ಕುರಿತು ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪೊಲೀಸ್ ಇಲಾಖೆ, ಗುಪ್ತಚರ ವಿಭಾಗ, ಜಿಲ್ಲಾಧಿಕಾರಿಗಳು, ಬಿಇಒ ಹಾಗೂ ಡಿಡಿಪಿಐಗಳೊಂದಿಗೆ ಸಮಗ್ರ ಸಭೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ಕಳೆದ ವರ್ಷಕ್ಕಿಂತ ಹೆಚ್ಚಿನ ಸಿದ್ಧತೆ ಈ ಬಾರಿ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ

ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು BMTC ಮತ್ತು KSRTC ಬಸ್‌ಗಳಲ್ಲಿ ಹಾಲ್‌ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸರ್ಕಾರ ಘೋಷಿಸಿದೆ. ಇದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಫೇಷಿಯಲ್ ಅಟೆಂಡೆನ್ಸ್ ಕಡ್ಡಾಯ ಮುಂದಿನ ವರ್ಷದಿಂದ ಹೊಸ ನಿಯಮ ಜಾರಿ

ಕೆಲವು ಖಾಸಗಿ ಶಾಲೆಗಳು SATS ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ನೋಂದಣಿಯನ್ನು ಸರಿಯಾಗಿ ಮಾಡದಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಮುಂದಿನ ಶೈಕ್ಷಣಿಕ ವರ್ಷದಿಂದ ಫೇಷಿಯಲ್ ಅಟೆಂಡೆನ್ಸ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ಇದರಿಂದ ವಿದ್ಯಾರ್ಥಿಗಳ ಹಾಜರಾತಿ ಪಾರದರ್ಶಕವಾಗಿ ದಾಖಲಾಗಲಿದೆ.

ಪರೀಕ್ಷಾ ಸಹಾಯವಾಣಿ ಸಂಖ್ಯೆ

ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಅಥವಾ ಸಮಸ್ಯೆಗಳಿಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು:

080-23310076 / 080-23310075

PREV
Read more Articles on
click me!

Recommended Stories

ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಯಾವ ದಿನ ಯಾವ ಸಬ್ಜೆಕ್ಟ್ ಇಲ್ಲಿದೆ ಸಂಪೂರ್ಣ ಮಾಹಿತಿ
ಸಿಬಿಎಸ್‌ಇ 10ನೇ ಕ್ಲಾಸ್‌ಗೆ 2 ಎಕ್ಸಾಂ: ಮೊದಲನೇ ಪರೀಕ್ಷೆ ಹಾಜರಿ ಕಡ್ಡಾಯ