ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಡೇಟ್ ಫಿಕ್ಸ್

By Kannadaprabha News  |  First Published Jul 21, 2021, 7:31 AM IST
  • ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದ್ದು, ಬರುವ ಆ.10ಕ್ಕೆ ಪರೀಕ್ಷೆ ಫಲಿತಾಂಶ 
  • ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು (ಜು.21): ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದ್ದು, ಬರುವ ಆ.10ಕ್ಕೆ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

 ‘ಗುರುವಾರ ಭಾಷಾ ಪತ್ರಿಕೆಗಳ ಪರೀಕ್ಷೆ ಇದೆ. ಅದು ಸಹ ಯಾವುದೇ ಸಮಸ್ಯೆ ಇಲ್ಲದೇ ನಡೆಯಲಿದೆ ಎಂಬ ವಿಶ್ವಾಸ ಇದೆ’ ಎಂದರು.

Tap to resize

Latest Videos

SSLC ಮೊದಲ ದಿನ ಸುಸೂತ್ರ: 99.67% ವಿದ್ಯಾರ್ಥಿಗಳು ಪರೀಕ್ಷೆಗೆ!

 ಸೋಮವಾರ ಮೊದಲ ಪತ್ರಿಕೆ ಪರೀಕ್ಷೆ ಪೂರ್ಣಗೊಂಡಿದೆ. ಈ ವೇಳೆ ಯಾವುದೇ ಸಮಸ್ಯೆಯಾಗಿಲ್ಲ. ಇದು ಕೇವಲ ಶಿಕ್ಷಣ ಇಲಾಖೆಯ ಪರೀಕ್ಷೆಯಾಗಿರಲಿಲ್ಲ. ಸಮಾಜದ ಪರೀಕ್ಷೆಯಾಗಿದೆ. 58 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿವೆ. ಆ ಮಕ್ಕಳು ಬೇರೆ ಬೇರೆ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದರು.

click me!