SSLC Exam ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

By Suvarna NewsFirst Published Jan 20, 2022, 3:28 PM IST
Highlights

* 2021-22ನೇ ಸಾಲಿನ SSLC ಪರೀಕ್ಷೆ
* SSLC ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ
* ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ
* ಫೆಬ್ರವರಿ 21 ರಿಂದ 26 ರವರೆಗೆ SSLC ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ

ಬೆಂಗಳೂರು, (ಜ.21): 2021-22ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ( SSLC) ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ(SSLC Preparatory Exam Time Table) ಪ್ರಕಟವಾಗಿದೆ.

SSLC Time Table ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಇಂದು(ಗುರುವಾರ) ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು,  ಫೆಬ್ರವರಿ 21 ರಿಂದ 26 ರವರೆಗೆ SSLC ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿವೆ. ಬೆಳಗ್ಗೆ 1.30ರಿಂದ ಮಧ್ಯಾಹ್ನ 1.45ರ ವರಗೆ ಪರೀಕ್ಷೆಗಳು ನಡೆಯಲಿವೆ.

ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಇಂತಿದೆ,
* 21-2-2022(ಪ್ರಥಮ ಭಾಷೆ: ಕನ್ನಡ, ತೆಲಗು, ತಮಿಳು, ಮರಾಠಿ, ಉರ್ದು, ಇಂಗ್ಲೀಷ್, ಸಂಸ್ಖ್ರತ, 
* 22-2-2022: ಸಮಾಜ ವಿಜ್ಞಾನ
*23-2-2022 (ದ್ವಿತೀಯ ಭಾಷೆ): ಇಂಗ್ಲೀಷ್, ಕನ್ನಡ 
* 24-2-2022: ಗಣಿತ
* 25-2-2022(ತೃತೀಯ ಭಾಷೆ): ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಪರ್ಷಿಯನ್
*26-2-2022 (ಕೋರ್ ಸಬ್ಜೆಕ್ಟ್): ವಿಜ್ಞಾನ

ಮುಖ್ಯ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ
ಎಸ್‌ಎಸ್‌ಎಲ್‌ಸಿ(10ನೇ ತರಗತಿ) ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(Karnataka Secondary Education Examination Board) ಜ.06ರಂದು   2021-22ನೇ ಸಾಲಿನ 10ನೇ ತರಗತಿ (SSLC)ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆಗಳು ನಡೆಯಲಿವೆ.

ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಈ ಕೆಳಗಿನಂತಿದೆ
ಮಾರ್ಚ್ 28 - ಕನ್ನಡ
ಮಾರ್ಚ್ 30 - ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ
ಏಪ್ರಿಲ್ 1 - ಅರ್ಥಶಾಸ್ತ್ರ
ಏಪ್ರಿಲ್‌ 4 - ಗಣಿತ, ಸಮಾಜ ಶಾಸ್ತ್ರ
ಏಪ್ರಿಲ್ 6 - ಸಮಾಜ‌ ವಿಜ್ಞಾನ
ಏಪ್ರಿಲ್ 8 - ತೃತೀಯ ಭಾಷೆ ಹಿಂದಿ
ಏಪ್ರಿಲ್ 11 - ವಿಜ್ಞಾನ

PUC ಪರೀಕ್ಷೆ ವೇಳಾಪಟ್ಟಿ ರಿಲೀಸ್
ಎಸ್‌ಎಸ್‌ಎಲ್‌ಸಿ(SSLC) ಬೆನ್ನಲ್ಲೇ ಇದೀಗ ದ್ವೀತಿಯ ಪಿಯುಸಿ ಪರೀಕ್ಷೆಯ(PUC Exams) ತಾತ್ಕಾಲಿಕ ವೇಳಾಪಟ್ಟಿ(Provisional Time Table) ಬಿಡುಗಡೆ ಮಾಡಲಾಗಿದೆ.

ಮಂಗಳವಾರ ಪದವಿ ಪೂರ್ವ ಶಿಕ್ಷಣ ಇಲಾಖೆ (PUC Board) 2021-22ನೇ ಸಾಲಿನ ದ್ವೀತಿಯ ಪಿಯುಸಿಯ (Second PUC) ತಾತ್ಕಾಲಿಕ ವೇಳಾಪಟ್ಟಿ (Exam Timetable) ಬಿಡುಗಡೆ ಮಾಡಿದೆ. 

ಪಿಯುಸಿ ವೇಳಾಪಟ್ಟಿ ಇಂತಿದೆ
ಏಪ್ರಿಲ್​ 14- ಗಣಿತ
ಏಪ್ರಿಲ್​ 18- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏ.20- ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 22- ತರ್ಕಶಾಸ್ತ್ರ
ಏ.23- ಮನಃಶಾಸ್ತ್ರ, ರಸಾಯನಶಾಸ್ತ್ರ, 
ಏ.25- ಅರ್ಥಶಾಸ್ತ್ರ
ಏ.26- ಹಿಂದಿ, 
ಏಪ್ರಿಲ್​​ 28- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
 ಏ.29- ಕನ್ನಡ
 ಏ.30- ಸಮಾಜಶಾಸ್ತ್ರ, ಕಂಪ್ಯೂಟರ್​​ ಸೈನ್ಸ್​
 ಮೇ 2- ಭೂಗೋಳ ಶಾಸ್ತ್ರ ಹಾಗೂ ಜೀವಶಾಸ್ತ್ರ
 ಮೇ 4- ಇಂಗ್ಲಿಷ್​​ ಪರೀಕ್ಷೆ ನಡೆಯಲಿದೆ.

click me!