SSLC Result: ಪಾಸಾಗಿದ್ದರೂ, ಫೇಲ್ ಆಗಿದ್ದೇನೆಂದು ಭಾವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

By Sathish Kumar KH  |  First Published May 9, 2024, 5:07 PM IST

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಪಾಸಾಗಿದ್ದರೂ, ಕಡಿಮೆ ಅಂಕ ಬಂದಿರುವುದಕ್ಕೆ ಫೇಲಾಗಿದ್ದೇನೆಂದು ಭಾವಿಸಿ ಮಂಡ್ಯದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ.


ಮಂಡ್ಯ (ಮೇ 09): ಮಂಡ್ಯ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡ ನಂತರ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ವಿದ್ಯಾರ್ಥಿನಿಯ ಫಲಿತಾಂಶ ಸೆಕೆಂಡ್ ಕ್ಲಾಸ್‌ನಲ್ಲಿ ಪಾಸಾಗಿದ್ದಾಳೆ. ಆದರೆ, ಕಡಿಮೆ ಅಂಕ ಬಂದಿದ್ದಕ್ಕೆ ತಾನು ಫೇಲ್ ಆಗಿದ್ದೇನೆಂದು ತಪ್ಪಾಗಿ ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಹೌದು, ಎಸ್‌ಎಸ್‌ಎಲ್‌ಸಿ ಪಾಸ್ ಆಗಿದ್ರು ಫೇಲ್ ಎಂದು ತಪ್ಪಾಗಿ ಭಾವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ. ಹುಲಿಗೆರೆಪುರ ಗ್ರಾಮದ ಅಮೃತಾ (16) ಮೃತ ದುರ್ದೈವಿ‌ ಆಗಿದ್ದಾಳೆ. ಮೃತ ಅಮೃತಾ ನಗರಕೆರೆ ಗ್ರಾಮದ ಪೂರ್ಣಿಮಾ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಎಸ್‌ಎಸ್ಎಲ್‌ಸಿ ಫಲಿತಾಂಶ ಪ್ರಕಟಗೊಂಡ ನಂತರ ಅದನ್ನು ಮೊಬೈಲ್‌ನಲ್ಲಿ ನೋಡಿದ್ದಾಳೆ. ಆದರೆ, 400ಕ್ಕಿಂತ ಕಡಿಮೆ ಅಂಕ ಬಂದಿರುವುದನ್ನು ನೋಡಿ ತಾನು ಫೇಲ್ ಆಗಿದ್ದೇನೆಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

Tap to resize

Latest Videos

undefined

ಎಸ್‌ಎಸ್‌ಎಲ್‌ಸಿ ಫೇಲ್: ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ಚಿಕ್ಕೋಡಿ ವಿದ್ಯಾರ್ಥಿನಿ

ಇನ್ನು ಮೃತ ಅಮೃತಾ ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಶೇ.57% ಅಂಕಗಳನ್ನು ಪಡೆದು ತೇರ್ಗಡೆ ಆಗಿದ್ದಾಳೆ. ಆದರೆ, ಈ ಫಲಿತಾಂಶವನ್ನು ಫೇಲ್ ಆಗಿದ್ದೇನೆಂದು ತಪ್ಪಾಗಿ ಅರ್ಥೈಸಿಕೊಂಡಿದ್ದಾಳೆ. ಮನೆಯವರಿಗೆ ಈ ವಿಚಾರವನ್ನು ಹೇಗೆ ಹೇಳಬೇಕು ಎಂಬುದು ತಿಳಿಯದೇ ಮನನೊಂದಿದ್ದಾಳೆ. ನಂಂತರ, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳನ್ನು ನೇಣಿಗೆ ಬಿಗಿದ ಸ್ಥಿತಿಯಲ್ಲಿ ನೋಡಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನು ಎಸ್‌ಎಸ್‌ಎಲ್‌ಸಿ ಫಲಿತಾಂಶದ ಬಳಿಕ ಮಂಡ್ಯದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಎರಡನೇ ವಿದ್ಯಾರ್ಥಿನಿ ಆಗಿದ್ದಾರೆ.

ಎಸ್ಸೆಸ್ಸೆಲ್ಸಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ:  ಮಂಡ್ಯದಲ್ಲಿ ವಿದ್ಯಾರ್ಥಿಯೊಬ್ಬ ತಾನು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗಿದ್ದೇನೆಂದು ಮನನೊಂದು ನೇಣಿಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಈ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ತಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಹದೇವು ಎನ್ನುವವರ ಪುತ್ರ ಲಿಖಿತ್ (15) ಮೃತ ಬಾಲಕ. ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಲು ಶಾಲೆಯ ಬಳಿ ಹೋದಾಗ ಎರಡು ವಿಷಯದಲ್ಲಿ ಅನುತ್ತೀರ್ಣಗೊಂಡಿದ್ದಿಯಾ  ಎಂದು ಶಿಕ್ಷಕರು ತಿಳಿಸಿದ್ದಾರೆ. ಈ ವೇಳೆ ತುಂಬಾ ಬೇಸರಗೊಂಡಿದ್ದ ನಿಖಿಲ್‌ನನ್ನು ಶಿಕ್ಷಕರು ಸಮಾಧಾನ ಮಾಡಿ, ಮುಂದಿನ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಧೈರ್ಯ ತುಂಬಿ ಮನೆಗೆ ಕಳುಹಿಸಿದ್ದರು. ಆದರೆ, ಇದರಿಂದ ಮನನೊಂದ ವಿದ್ಯಾರ್ಥಿ ಲಿಖಿತ್ ಜಮೀನಿನ ಬಳಿ ಹೋಗಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹಾಸನದಲ್ಲಿ ಅವಿವಾಹಿತ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಏಕಾಏಕಿ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಿದ್ದ ಕೆಎಸ್‌ಎಇಬಿ: ಕಳೆದೊಂದು ದಶಕದಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಹೆಚ್ಚು ಕಟ್ಟುನಿಟ್ಟಾಗಿ ನಡೆಸುತ್ತಿರಲಿಲ್ಲ. ಇನ್ನು ಕಳೆದ ಮೂರು ವರ್ಷಗಳ ಹಿಂದೆ ಕೋವಿಡ್‌ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದ ವಿದ್ಯಾರ್ಥಿಗಳು ಕೂಡ ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಆದರೆ, ಸದರಿ 2023-24ನೇ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲಾಗಿತ್ತು. ಇದರಿಂದ ಕೆಲವು ವಿದ್ಯಾರ್ಥಿಗಳು ತೀವ್ರ ಭಯದಿಂದ ಗೊತ್ತಿರುವ ಉತ್ತರ ಬರೆಯಲೂ ಭಐಪಟ್ಟಿದ್ದಾರೆ. ಜೊತೆಗೆ, ವಿದ್ಯಾರ್ಥಿಗಳು ಕಾಪಿ ಮಾಡಿದ ಕಡೆಗಳಲ್ಲಿ ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು. ಇದರ ಪರಿಣಾಮವಾಗಿ ಫಲಿತಾಂಶ ಶೇ.73ಕ್ಕೆ ಕುಸಿತವಾಗಿದೆ ಎಂದು ಹೇಳಲಾಗುತ್ತಿದೆ.

click me!